ಕರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಸಾಂಕ್ರಾಮಿಕ ರೋಗವನ್ನು ತಪ್ಪಿಸಲು, ವ್ಯಾಕ್ಸಿನೇಷನ್ ನಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವವರೆಗಿನ ಎಲ್ಲಾ ಕ್ರಮಗಳನ್ನು ಸರ್ಕಾರ ಪ್ರೋತ್ಸಾಹಿಸುತ್ತಿದೆ.
ನವದೆಹಲಿ : ಆಯುರ್ವೇದದಲ್ಲಿ ಇಂತಹ ಅನೇಕ ಮನೆಮದ್ದುಗಳನ್ನು ಹೇಳಲಾಗಿದೆ. ಈ ಮನೆಮದ್ದುಗಳು ರೋಗನಿರೋಧಕ ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇವುಗಳ ಪೈಕಿ ಕರಿಮೆಣಸು ಬಹಳ ಮುಖ್ಯವಾದುದು. ಕರಿಮೆಣಸು ಸೇವಿಸುವುದರಿಂದ ಆಗುವ 5 ಅತಿ ಪ್ರಯೋಜನಗಳ ಬಗ್ಗೆ ನಾವು ಇಲ್ಲಿ ಹೇಳಲಿದ್ದೇವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕರಿಮೆಣಸು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮನೆಯಲ್ಲಿ ಕಷಾಯ ಮಾಡುವಾಗ ಅದಕ್ಕೆ ಕರಿಮೆಣಸು ಸೇರಿಸಿದರೆ ರೊಗ ನಿರೋಧಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಸಹಾಯವಾಗಲಿದೆ. ಇನ್ನು ಕರಿಮೆನಸನ್ನು ನಿರಿನಲ್ಲಿ ಬೆರೆಸಿ ಕುದಿಸಿ ಕುಡಿಯುವುದರಿಂದಲೂ ಲಾಭವಾಗಲಿದೆ.
ಕೆಮ್ಮು ಮತ್ತು ಶೀತದಂತಹ ಸಮಸ್ಯೆ ಬಾಧಿಸಿದಾಗಲೂ ಕರಿಮೆಣಸು ಸಹಾಯಕ್ಕೆ ಬರುತ್ತದೆ. ಕರಿಮೆಣಸಿನ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸುವುದರಿಂದ ಶೀತ, ಕೆಮ್ಮಿನಿಂದ ಪರಿಹಾರ ಸಿಗುತ್ತದೆ.
ಅಧ್ಯಯನದ ಪ್ರಕಾರ, ಕರಿಮೆಣಸು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಪೈಪರೀನ್ ಎಂಬ ರಾಸಾಯನಿಕವಿದೆ. ಅರಿಶಿನದೊಂದಿಗೆ ನಿಯಮಿತ ಸೇವನೆ ಮಾಡಿದರೆ ಕ್ಯಾನ್ಸರ್ ಅನ್ನು ತಡೆಯುತ್ತದೆ. ಕರಿಮೆಣಸು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ರೋಗವನ್ನು ಸಹ ತಡೆಯುತ್ತದೆ.
ನಿಮ್ಮ ಮನೆಯಲ್ಲಿ ಬೇಯಿಸಿದ ಆಹಾರದಲ್ಲಿ ನೀವು ಕರಿಮೆಣಸನ್ನು ನಿಯಮಿತವಾಗಿ ಸೇವಿಸಿದರೆ, ಅದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರಿಂದಾಗಿ ಮಧುಮೇಹದ ಅಪಾಯವೂ ಕಡಿಮೆಯಾಗುತ್ತದೆ.
ಆಯುರ್ವೇದದ ಪ್ರಕಾರ, ಕರಿಮೆಣಸಿನಿಂದ ತಯಾರಿಸಿದ ಆಹಾರವು, ನಮ್ಮ ದೇಹದಲ್ಲಿನ ಹೆಪ್ಪುಗಟ್ಟಿದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಈ ಕಾರಣದಿಂದಾಗಿ ನಮ್ಮ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ಅಲ್ಪಾವಧಿಯಲ್ಲಿಯೇ ಸಾಕಷ್ಟು ಕ್ಯಾಲೊರಿಗಳನ್ನು ಬರ್ನ್ ಮಾಡುತ್ತದೆ. ಇದರಿಂದಾಗಿ ದೇಹದ ತೂಕವು ನಿಯಂತ್ರಣದಲ್ಲಿರುತ್ತದೆ.