ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!

ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ. 

ಬೆಂಗಳೂರು : ಯೂರಿಕ್ ಆಸಿಡ್ ದೇಹದಲ್ಲಿ ಸಂಗ್ರಹವಾಗಿರುವ ಒಂದು ರೀತಿಯ ರಾಸಾಯನಿಕವಾಗಿದೆ.ಇದು ಪ್ಯೂರಿನ್ ಎಂಬ ಪ್ರೋಟೀನ್‌ನ ವಿಭಜನೆಯಿಂದ ರೂಪುಗೊಳ್ಳುತ್ತದೆ.ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟ ಹೆಚ್ಚಾಗುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಯೂರಿಕ್ ಆಸಿಡ್ ಹೆಚ್ಚಾದಾಗ ಕೀಲುಗಳಲ್ಲಿ ನೋವು, ಊತ ಕಾಣಿಸಿಕೊಳ್ಳುತ್ತದೆ. ಇದರಿಂದ ನಡೆದಾಡುವುದೂ ಕಷ್ಟವಾಗುತ್ತದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ದೀರ್ಘಕಾಲದ ಅಧಿಕ ಯೂರಿಕ್ ಆಸಿಡ್ ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್ ನಂಥಹ ಸಮಸ್ಯೆಗಳನ್ನು ಉಂಟುಮಾಡಬಹುದು.ಯೂರಿಕ್ ಆಸಿಡ್ ಸಮಸ್ಯೆಯನ್ನು   ಕೆಲವು ಮನೆಮದ್ದುಗಳ ಸಹಾಯದಿಂದ ನಿವಾರಿಸಬಹುದು.

2 /5

ಯೂರಿಕ್ ಆಸಿಡ್ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸಲು ಬಳಸುವ ಮನೆಮದ್ದುಗಳಲ್ಲಿ ಅರಶಿನ ಬಹಳ ಮುಖ್ಯವಾದುದು.ಅರಿಶಿನದ ಬಳಕೆಯು ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

3 /5

ಅರಿಶಿನದಲ್ಲಿ ಆ್ಯಂಟಿ ಬಯೋಟಿಕ್ ಮತ್ತು ಉರಿಯೂತ ನಿವಾರಕ ಗುಣಗಳಿದ್ದು, ಇದು ದೇಹವನ್ನು ಹಲವು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಅರಿಶಿನದಲ್ಲಿ ಕರ್ಕ್ಯುಮಿನ್ ಕಂಡುಬರುತ್ತದೆ,ಇದು ಕೀಲು ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

4 /5

ದೇಹದಲ್ಲಿ ಹೆಚ್ಚಿದ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಲು,ಅರಿಶಿನ ಹಾಲನ್ನು ಕುಡಿಯಬಹುದು. ಇದಕ್ಕಾಗಿ ಒಂದು ಲೋಟ ಬಿಸಿ ಹಾಲಿಗೆ ಒಂದು ಚಮಚ ಅರಿಶಿನ ಪುಡಿಯನ್ನು ಬೆರೆಸಬೇಕು. ಜೊತೆಗೆ ಇದಕ್ಕೆ ಚಿಟಿಕೆ ಕರಿಮೆಣಸಿನ ಪುಡಿಯನ್ನು ಬೆರೆಸುವುದನ್ನು ಮರೆಯಬೇಡಿ. ಇವೆರಡನ್ನೂ ಬೆರೆಸಿದ ಹಾಲನ್ನು ಸೇವಿಸುವುದರಿಂದ ಯೂರಿಕ್ ಆಸಿಡ್ ಮತ್ತು ಅದರಿಂದ ಕಾಣಿಸಿಕೊಳ್ಳುವ ನೋವು ಸಂಪೂರ್ಣವಾಗಿ ಕಡಿಮೆಯಾಗುವುದು. 

5 /5

ಅರಿಶಿನ ಮತ್ತು ಕರಿಮೆಣಸು ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್‌ನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಕೂಡಾ ಕಡಿಮೆ ಮಾಡುತ್ತದೆ.  (ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು.Zee Kannada News ಅದನ್ನು ಅನುಮೋದಿಸುವುದಿಲ್ಲ.)