ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬಿಬಿಎಂಪಿ ಕಚೇರಿ ಅಗ್ನಿ ಅನಾಹುತ ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿದರು. ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಿಕ್ಟೋರಿಯಾ ಆಸ್ಪತ್ರೆ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು