Photo Gallery: 2022ರ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಕೆಂಪು ಕೋಟೆಯಲ್ಲಿ ನಡೆದ ಪೂರ್ವಾಭ್ಯಾಸ ಹೇಗಿತ್ತು ನೋಡಿ

ಸ್ವಾತಂತ್ರ್ಯ ದಿನಾಚರಣೆ 2022: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15ರಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಆಗಸ್ಟ್ 15ರಂದು ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಹಿನ್ನೆಲೆ ಆಗಸ್ಟ್ 13ರ ಶನಿವಾರದಂದು ಪೂರ್ಣ ಪೂರ್ವಾಭ್ಯಾಸ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಆ.15ರಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ನಡೆದ ಸಂಪೂರ್ಣ ಉಡುಗೆ ಪೂರ್ವಾಭ್ಯಾಸ ಹೇಗಿತ್ತು ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ತ್ರಿ-ಸೇವಾ ಸಿಬ್ಬಂದಿ ಮತ್ತು ಎನ್‌ಸಿಸಿ ಕೆಡೆಟ್‌ಗಳು ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆಗಾಗಿ ಸಂಪೂರ್ಣ ಉಡುಗೆ ಪೂರ್ವಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

2 /5

ಕೆಂಪು ಕೋಟೆಯಲ್ಲಿ 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆಯ ಸಂಪೂರ್ಣ ಉಡುಗೆ ಪೂರ್ವಾಭ್ಯಾಸದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಹೀಗೆ.

3 /5

SPG ಕಮಾಂಡೋಗಳು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆ ಹಿನ್ನೆಲೆ ನಡೆದ ಪೂರ್ವಾಭ್ಯಾಸದಲ್ಲಿ ವಿವಿಐಪಿಗಳಿಗೆ ನೀಡುವ ಬೆಂಗಾವಲು ಸೇವೆಯ ಅಣಕು ಡ್ರಿಲ್ ನಡೆಸಿದರು.

4 /5

ಶನಿವಾರದ ಸಂಪೂರ್ಣ ಉಡುಗೆ ಪೂರ್ವಾಭ್ಯಾಸದ ಸಮಯದಲ್ಲಿ ತ್ರಿ-ಸೇವಾ ಸಿಬ್ಬಂದಿ ಕೆಂಪು ಕೋಟೆಯಲ್ಲಿ ಕಾಣಿಸಿಕೊಂಡಿದ್ದು ಹೀಗೆ.

5 /5

ಕೆಂಪು ಕೋಟೆಯ ರಾಂಪಾರ್ಟ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಿರುವಾಗ ಮಿಲಿಟರಿ ಹೆಲಿಕಾಪ್ಟರ್ ಹೂವಿನ ಸುರಿಮಳೆ ಸುರಿಸಲಿದೆ.