ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿಮಾರ್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು.ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾದುದ್ದು ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.