ಟೀಂ ಇಂಡಿಯಾ ಆಟಗಾರ್ತಿಯನ್ನೇ ಗುಟ್ಟಾಗಿ ಮದುವೆಯಾದ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್’ಮನ್! ಫೋಟೋಸ್ ನೋಡಿ

Rituraj Gaikwad-Utkarsh Pawar Wedding: ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 (WTC Final 2023) ಅಂತಿಮ ಪಂದ್ಯವನ್ನು ಆಡಲು ಟೀಮ್ ಇಂಡಿಯಾ ಪ್ರಸ್ತುತ ಇಂಗ್ಲೆಂಡ್‌ ಗೆ ತಲುಪಿದೆ. ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ಉಭಯ ತಂಡಗಳ ನಡುವೆ ಈ ದೊಡ್ಡ ಪಂದ್ಯ ನಡೆಯಲಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಆಟಗಾರನೊಬ್ಬ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾನೆ. ಆಟಗಾರ ಮದುವೆಯಾಗಿದ್ದು ಬೇರೆ ಯಾರನ್ನೂ ಅಲ್ಲ, ಈಕೆ ಕೂಡ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಶನಿವಾರ (ಜೂನ್ 3) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರುತುರಾಜ್ ಮದುವೆಯಾಗಿದ್ದು, ಮಹಿಳಾ ಕ್ರಿಕೆಟ್ ಆಟಗಾರ್ತಿ ಉತ್ಕರ್ಷ ಪವಾರ್ ಅವರನ್ನು.

2 /5

ಮದುವೆ ಫೋಟೋಗಳನ್ನು ಶೇರ್ ಮಾಡುವ ಮೂಲಕ ರುತುರಾಜ್ ಗಾಯಕ್ವಾಡ್ ಅಭಿಮಾನಿಗಳಿಗೆ ಈ ಶುಭ ಸುದ್ದಿ ನೀಡಿದ್ದಾರೆ. ಮದುವೆಯಾಗಲು ಟೀಂ ಇಂಡಿಯಾದಿಂದ ಸದ್ಯ ರಜೆ ತೆಗೆದುಕೊಂಡಿದ್ದರು. ರಿತುರಾಜ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

3 /5

ಉತ್ಕರ್ಷ ಪವಾರ್ ಒಬ್ಬ ವೃತ್ತಿಪರ ಕ್ರಿಕೆಟ್ ಆಟಗಾರ್ತಿ. 24 ವರ್ಷದ ಉತ್ಕರ್ಷ ಪುಣೆ ನಿವಾಸಿಯಾಗಿದ್ದು, ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ.

4 /5

ರಿತುರಾಜ್ ಅವರ ಪತ್ನಿ ಉತ್ಕರ್ಷ ಪವಾರ್ ಬಲಗೈಯಿಂದ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುತ್ತಾರೆ. 2021 ರಲ್ಲಿ ಲಿಸ್ಟ್ ಎ ಕ್ರಿಕೆಟ್ ಆಡಿದ್ದಾರೆ.

5 /5

ಉತ್ಕರ್ಷ ಪವಾರ್ ಪ್ರಸ್ತುತ ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಮತ್ತು ಫಿಟ್‌ನೆಸ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದಾರೆ. ಐಪಿಎಲ್ 2023 ರ ಫೈನಲ್ ನಂತರ ರುತುರಾಜ್ ಮತ್ತು ಉತ್ಕರ್ಷ ಒಟ್ಟಿಗೆ ಕಾಣಿಸಿಕೊಂಡಿದ್ದು, ಉತ್ಕರ್ಷಾ ಧೋನಿ ಕಾಲಿಗೆ ಬಿದ್ದು ನಮಸ್ಕರಿಸಿ ಭಾರೀ ಸುದ್ದಿಯಾಗಿದ್ದರು. ಇನ್ನು ಋತುರಾಜ್ ಮತ್ತು ಉತ್ಕರ್ಷ ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.