"ಸಂಗವ್ವ ಅವರ ಪ್ರತಿಕ್ರಿಯೆಯಿಂದ ಈ ಶಕ್ತಿ ಯೋಜನೆ ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು"-ಸಿಎಂ ಸಿದ್ದರಾಮಯ್ಯ 

ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ( ಸಂಗವ್ವ ) ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.

 

1 /3

ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ತನ್ನ ಚುನಾವಣಾ ಆಶ್ವಾಸನೆಯ ಭಾಗವಾಗಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿತ್ತು, ಈ ಯೋಜನೆ ಜಾರಿಗೆ ಬಂದ ನಂತರ ರಾಜ್ಯದ ಮಹಿಳೆಯರಿಂದ ಯೋಜನೆ ಕುರಿತಾಗಿ ಸಕಾರಾತ್ಮಕ ಅಭಿಪ್ರಾಯಗಳು ಬಂದಿದ್ದವು 

2 /3

ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. 

3 /3

ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು.