Independence Day celebrations 2023: ಪ್ರಧಾನಿ ಮೋದಿಯವರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾದಿಗೆ ನಮನ ಸಲ್ಲಿಸಿದರು. ನಂತರ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
Independence Day 2023: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ನೇರವೇರಿಸಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿಯವರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾದಿಗೆ ನಮನ ಸಲ್ಲಿಸಿದರು. ನಂತರ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
77ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಗೌರವ ವಂದನೆ ಸ್ವೀಕರಿಸಿದರು.
77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಐತಿಹಾಸಿಕ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ‘ಇದು ಆತ್ಮವಿಶ್ವಾಸದೊಂದಿಗೆ ತುಂಬಿರುವ ನವ ಭಾರತ. ಮುಂದಿನ 50 ವರ್ಷ ಒಂದೇ ಮಂತ್ರದೊಂದಿಗೆ ಸಾಗಬೇಕಾದ ಅಗತ್ಯವಿದೆ. ದೇಶದ ಎಲ್ಲಾ ಜನರು ಭಾರತದ ಏಕತೆಯ ಮಂತ್ರ ಜಪಿಸುತ್ತಾ ಹೆಜ್ಜೆ ಹಾಕಬೇಕಿದೆ. 2047ರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿರುವ ಭಾರತದ ನಿರ್ಣಯಕ್ಕೆ ಜಗತ್ತು ತಲೆಬಾಗಲಿದೆ’ ಎಂದು ಹೇಳಿದರು.
ದೇಶದ ಆರ್ಥಿಕತೆಯನ್ನು ಬಲಪಡಿಸುವುದು, ಜನರನ್ನು ಸಬಲೀಕರಣಗೊಳಿಸುವುದು ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಮುಂದಿನ 5 ವರ್ಷಗಳಲ್ಲಿ ಭಾರತವನ್ನು ವಿಶ್ವದ ಟಾಪ್-3 ಆರ್ಥಿಕತೆಗಳ ಪಟ್ಟಿಯಲ್ಲಿರಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನಾವು ಏನೇ ಮಾಡಿದರೂ, ನಾವು ಯಾವುದೇ ಹೆಜ್ಜೆ ಇಟ್ಟರೂ, ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಮುಂದಿನ 1 ಸಾವಿರ ವರ್ಷಗಳವರೆಗೆ ನಮ್ಮ ಗುರಿಯನ್ನು ನಿರ್ಧರಿಸುವುದಾಗಿರುತ್ತದೆ. ಅದು ಭಾರತದ ಭವಿಷ್ಯ, ಸುವರ್ಣ ಇತಿಹಾಸವನ್ನು ಬರೆಯಲಿದೆ ಎಂದು ಪ್ರಧಾನಿ ಮೋದಿ ಇದೇ ವೇಳೆ ದೇಶದ ಜನತೆಗೆ ತಿಳಿಸಿದರು.