ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದು ಇವರೇ ನೋಡಿ: ಈ ಪಟ್ಟಿಯಲ್ಲಿದೆ ಭಾರತದ ಶ್ರೇಷ್ಠರ ಹೆಸರು

ಏಷ್ಯಾಕಪ್ 1984ರಲ್ಲಿ ಪ್ರಾರಂಭವಾಯಿತು. ಭಾರತ ತಂಡ ಅತಿ ಹೆಚ್ಚು ಅಂದರೆ 7 ಬಾರಿ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇನ್ನು ಶ್ರೀಲಂಕಾ ಐದು ಬಾರಿ ಮತ್ತು ಪಾಕಿಸ್ತಾನ ತಂಡ ಎರಡು ಬಾರಿ ಏಷ್ಯಾಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಆಗಸ್ಟ್ 27 ರಿಂದ ಏಷ್ಯಾಕಪ್ ಆರಂಭವಾಗುತ್ತಿದೆ. ಇನ್ನು ಈ ವರದಿಯಲ್ಲಿ ಏಷ್ಯಾಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಬಗ್ಗೆ. ಮತ್ತು ಭಾರತದ ಇಬ್ಬರು ಬಲಿಷ್ಠ ಬ್ಯಾಟ್ಸ್‌ಮನ್‌ಗಳ ಬಗ್ಗೆ ತಿಳಿಸಲಿದ್ದೇವೆ.  

1 /5

ಶ್ರೀಲಂಕಾದ ಸನತ್ ಜಯಸೂರ್ಯ ಏಷ್ಯಾಕಪ್‌ನಲ್ಲಿ ಗರಿಷ್ಠ ಸಾಧನೆ ಮಾಡಿದವರು. ಈ ಟೂರ್ನಿಯಲ್ಲಿ 25 ಪಂದ್ಯಗಳನ್ನು ಆಡಿರುವ ಅವರು 53ರ ಸರಾಸರಿಯಲ್ಲಿ 1,220 ರನ್ ಗಳಿಸಿದ್ದಾರೆ. ಶ್ರೀಲಂಕಾಗೆ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

2 /5

ಶ್ರೀಲಂಕಾದ ಧಕದ್ ಕುಮಾರ್ ಸಂಗಕ್ಕಾರ ಅವರು ಏಷ್ಯಾಕಪ್‌ನ 23 ಪಂದ್ಯಗಳಲ್ಲಿ 1075 ರನ್ ಗಳಿಸಿದ್ದಾರೆ. ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3 /5

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರ. 23 ಪಂದ್ಯಗಳಲ್ಲಿ 971 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು ಏಷ್ಯಾಕಪ್‌ನಲ್ಲಿ ರನ್ ಗಳಿಸುವುದರ ಜೊತೆಗೆ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 /5

ಶೋಯೆಬ್ ಮಲಿಕ್ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಸೇರ್ಪಡೆಗೊಂಡ ಏಕೈಕ ಬ್ಯಾಟ್ಸ್‌ಮನ್. ಏಷ್ಯಾಕಪ್‌ನ 21 ಪಂದ್ಯಗಳಲ್ಲಿ 907 ರನ್ ಗಳಿಸಿದ್ದಾರೆ.

5 /5

ಭಾರತದ ಹಾಲಿ ನಾಯಕ ರೋಹಿತ್ ಶರ್ಮಾ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದಲ್ಲಿ ಭಾರತವು 2018 ರ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಏಷ್ಯಾಕಪ್‌ನ 27 ಪಂದ್ಯಗಳಲ್ಲಿ ರೋಹಿತ್ ಶರ್ಮಾ 883 ರನ್ ಗಳಿಸಿದ್ದಾರೆ.