2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ ಗೆಲುವು ಸಾಧಿಸಿದ್ದ ಶಶಿ ತರೂರ್.
ನವದೆಹಲಿ: 2019ರ ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬರುವ ಮೊದಲೇ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಭಗವಂತನ ಮೊರೆ ಹೋಗಿದ್ದಾರೆ. ಕೇರಳದ ತಿರುವನಂತಪುರಮ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶಶಿ ತರೂರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕುಮ್ಮನಂ ರಾಜಶೇಖರನ್ ಸ್ಪರ್ಧಿಸಿದ್ದಾರೆ. ಶಶಿ ತರೂರ್ 2014 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ ಗೆಲುವು ಸಾಧಿಸಿದ್ದರು.
ಲೋಕಸಭಾ ಚುನಾವಣೆಗಾಗಿ ಸುಮಾರು ಒಂದೂವರೆ ತಿಂಗಳು ಏಳು ಹಂತಗಳಲ್ಲಿ ನಡೆದ ಮತದಾನದ ಫಲಿತಾಂಶ ಇಂದು ಘೋಷಣೆಯಾಗಲಿದೆ. 543 ಲೋಕಸಭಾ ಕ್ಷೇತ್ರಗಳಲ್ಲಿ 542 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಅಲ್ಲಿ 8,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ತಿರುವನಂತಪುರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ.(Pic Courtesy: ಶಶಿತರೂರ್, TWITTER)
2019 ರಲ್ಲಿ ಕಳೆದ 30 ವರ್ಷಗಳಲ್ಲೇ ಅತ್ಯಧಿಕ ಮತದಾನವನ್ನು ದಾಖಲಿಸಲಾಗಿದೆ.
ತಿರುವನಂತಪುರಂ 73.37 ರಷ್ಟು ಮತಗಳನ್ನು ಪಡೆದಿದೆ.
ಮೊದಲಿಗೆ, 1989 ರ ಚುನಾವಣೆಗಳಲ್ಲಿ 70 ಕ್ಕಿಂತಲೂ ಹೆಚ್ಚು ಮತಗಳನ್ನು ಪಡೆದಿದ್ದ ಶಶಿ ತರೂರ್.
ಗಮನಾರ್ಹವಾಗಿ, 90.99 ಕೋಟಿ ಮತದಾರರಲ್ಲಿ, ಸುಮಾರು 67.11 ರಷ್ಟು ಮತದಾರರು ಏಪ್ರಿಲ್ 11 ರಿಂದ ಮೇ 19 ರ ವರೆಗೆ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಇದು ಭಾರತೀಯ ಸಂಸತ್ತಿನ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಿದೆ.