Malavya Rajyog: ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಶುಕ್ರನ ಗೋಚರ, ಮಾಲವ್ಯ ರಾಜಯೋಗದಿಂದ 3 ರಾಶಿಗಳ ಜನರಿಗೆ ಅಪಾರ ಧನಲಾಭ!

Malavya Rajyog: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಶುಕ್ರನ ಗೋಚರ ನೆರವೇರಲಿದ್ದು, ಇದರಿಂದ ಮಾಲವ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಈ ಜನರ ಜೀವನದಲ್ಲಿ ಅಪಾರ ಹಣ ಹರಿದುಬರಲಿದ್ದು, ಸ್ಥಾನಮಾನ ಹೆಚ್ಚಳದ ಜೊತೆಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ, ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, 
 

Malavya Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿಯನ್ನು ಪರಿವರ್ತಿಸುವ ಮೂಲಕ ರಾಜಯೋಗಗಳನ್ನು ನಿರ್ಮಿಸುತ್ತವೆ. ಇದರ ಪ್ರಭಾವ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತದೆ. ವೈಭವ ಹಾಗೂ ಹಣಕಾಸಿನ ಕಾರಕ ಗ್ರಹ ಎಂದೇ ಕರೆಯಲಾಗುವ ಶುಕ್ರ ಏಪ್ರಿಲ್ 6 ರಂದು ತನ್ನ ಸ್ವರಾಶಿಯಾಗಿರುವ ವೃಷಭ ರಾಶಿಯಲ್ಲಿ ಗೋಚರಿಸಲಿದೆ. ಇದರಿಂದ ಮಾಲವ್ಯ ರಾಜಯೋಗ ರೂಪುಗೊಳ್ಳಲಿದೆ. ಈ ಮಾಲವ್ಯ ರಾಜಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜಾತಕದವರಿಗೆ ಈ ಯೋಗದಿಂದ ಅಪಾರ ಧನ ಪ್ರಾಪ್ತಿಯ ಯೋಗ ಹಾಗೂ ವೃತ್ತಿ ಜೀವನದಲ್ಲಿ ಬಡ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-ಕೆಲವೇ ಗಂಟೆಗಳಲ್ಲಿ ಮೇಷ ರಾಶಿಯಲ್ಲಿ ತ್ರಿಗ್ರಹಿ ಯೋಗ, 5 ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /3

ಮೇಷ ರಾಶಿ: ಮಾಲವ್ಯ ರಾಜಯೋಗ ನಿರ್ಮಾಣದಿಂದ ಮೇಷ ರಾಶಿಯ ಜಾತಕದವರಿಗೆ ಸಾಕಷ್ಟು ಲಾಭ ಸಿಗುವ ನಿರೀಕ್ಷೆ ಇದೆ. ಏಕೆಂದರೆ ಶುಕ್ರ ನಿಮ್ಮ ಗೋಚರ ಜಾತಕದ ದ್ವಿತೀಯ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭದ ಯೋಗ ನಿರ್ಮಾಣಗೊಳ್ಳುತ್ತಿದೆ. ಇನ್ನೊಂದೆಡೆ ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲಿಷ್ಟವಾಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬರಲಿದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಕುಟುಂಬದಲ್ಲಿ ಎಲ್ಲರೊಂದಿಗೆ ನಿಮ್ಮ ಸಂಬಂಧ ಗಟ್ಟಿಗೊಳ್ಳಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವವನ್ನು ನೀವು ಗಮನಿಸಬಹುದು. ಇದರಿಂದ ಜನರು ನಿಮ್ಮಿಂದ ಇಂಪ್ರೆಸ್ ಆಗುವರು. ದೂರದ ಪ್ರಯಾಣ ಕಾರ್ಡ್ ಮೇಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಆರ್ಡರ್ ಗಳು ಸಿಗುವ ಸಾಧ್ಯತೆ ಇದೆ.    

2 /3

ವೃಷಭ ರಾಶಿ: ಮಾಲವ್ಯ ರಾಜಯೋಗ ನಿರ್ಮಾಣದಿಂದ ವೃಷಭ ರಾಶಿಯ ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ ಏಕೆಂದರೆ ಶುಕ್ರ ನಿಮ್ಮ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ ಮತ್ತು ನಿಮ್ಮ ಆರ್ಥಿಕ ಸ್ಥಿತಿಯಲ್ಲಿಯೂ ಕೂಡ ಅಪಾರ ಸುಧಾರಣೆ ಕಂಡು ಬರಲಿದೆ. ಈ ಮೊದಲಿಗೆ ಹೊಲಿಸಿದರೆ ನೀವು ಅಧಿಕ ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಪರಿಶ್ರಮ ನಿಮಗೆ ಫಲ ನೀಡಲಿದ್ದು, ನಿಮಗೆ ಧನಲಾಭದ ಒಳ್ಳೆಯ ಅವಕಾಶಗಳು ಪ್ರಾಪ್ತಿಯಾಗಲಿವೆ. ಇನ್ನೊಂದೆಡೆ ನಿರ್ಮಾಣಗೊಂಡಿರುವ ರಾಜಯೋಗದ ದೃಷ್ಟಿ ನಿಮ್ಮ ಜಾತಕದ ಸಪ್ತಮ ಭಾವದ ಮೇಲೆ ಇರಲಿದ್ದು, ಈ ಅವಧಿಯಲ್ಲಿ ನಿಮಗೆ ಬಾಲಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ನಿಮ್ಮ ಬಾಳಸಂಗಾತಿಯ ಪ್ರಗತಿ ಈ ಅವಧಿಯಲ್ಲಿ ನೀವು ಕಾಣಬಹುದಾಗಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ.   

3 /3

ಸಿಂಹ ರಾಶಿ: ನಿಮ್ಮ ಪಾಲಿಗೆ ಮಾಲವ್ಯ ರಾಜಯೋಗ ಒಂದು ವರದಾನ ಎಂಬಂತೆ ಸಾಬೀತಾಗಲಿದೆ. ಏಕೆಂದರೆ ಶುಕ್ರ ನಿಮ್ಮ ಜಾತಕದ ಕರ್ಮ ಭಾವದಲ್ಲಿ ಗೋಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನೌಕರಿಯಲ್ಲಿ ಉತ್ತಮ ಅವಕಾಶ ಒದಗಿ ಬರುವ ಸಾಧ್ಯತೆ ಇದೆ. ಇದಲ್ಲದೆ ನೌಕರಿಯಲ್ಲಿ ನಿಮಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಇನ್ನೊಂದೆಡೆ ನೌಕರಿಯ ಹುಡುಕಾಟದಲ್ಲಿ ನಿರತರಾದ ಜನರಿಗೆ ಉತ್ತಮ ಉದ್ಯೋಗಾವಕಾಶ ಸಿಗುವ ಸಾಧ್ಯತೆ ಇದೆ. ಕಾರ್ಯಸ್ಥಳದಲ್ಲಿ ಸಹೋದ್ಯೋಗಿಗಳ ಬೆಂಬಲ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ನಿರತರಾದವರಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಸಿಗಲಿದೆ. ಹೊಸ ಕೆಲಸ ಆರಂಭಿಸಲು ಸಮಯ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ತಂದೆಯ ಸಂಪೂರ್ಣ ಬೆಂಬಲ ಸಿಗಲಿದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)