ಉತ್ತಮ ಜೀರ್ಣಕ್ರಿಯೆಗೆ ನಿಮ್ಮ ದೈನಂದಿನ ಜೀವನದಲ್ಲಿ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಬಹಳ ಮುಖ್ಯ.
ಜೀರ್ಣಕ್ರಿಯೆ ಸರಿಯಿಲ್ಲದಿದ್ದರೆ ಉದರ ಸಂಬಂಧಿತ ಹಲವು ಸಮಸ್ಯೆಗಳು ಉದ್ಭವಿಸುತ್ತವೆ. ಹಾಗಾಗಿ ಉತ್ತಮ ಆರೋಗ್ಯಕ್ಕೆ ನಮ್ಮ ಜೀರ್ಣಕ್ರಿಯೆ ಸರಿಯಾಗಿರುವುದು ಬಹಳ ಮುಖ್ಯ. ಉತ್ತಮ ಜೀರ್ಣಕ್ರಿಯೆಗೆ ನಿಮ್ಮ ದೈನಂದಿನ ಜೀವನದಲ್ಲಿ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಬಹಳ ಮುಖ್ಯ. ಅವುಗಳ ಬಗ್ಗೆ ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸಿ : ಸೂಪ್, ಜ್ಯೂಸ್, ಮಜ್ಜಿಗೆ ಹೀಗೆ ದ್ರವ ಆಹಾರಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿ. ಈ ಆಹಾರಗಳನ್ನು ಜೀರ್ಣಾಂಗ ವ್ಯವಸ್ಥೆಯು ಸುಲಭವಾಗಿ ಜೀರ್ಣಿಸಿಕೊಳ್ಳುತ್ತದೆ.
ಫೈಬರ್ ಭರಿತ ಆಹಾರ: ಅಜೀರ್ಣ ಸಮಸ್ಯೆಗಳನ್ನು ತಪ್ಪಿಸಲು, ನಿಮ್ಮ ದೈನಂದಿನ ಆಹಾರದಲ್ಲಿ ಫೈಬರ್ ಭರಿತ ಆಹಾರವನ್ನು ಸೇವಿಸಿ. ದ್ವಿದಳ ಧಾನ್ಯಗಳು, ಒಣ ಹಣ್ಣುಗಳು ಮತ್ತು ಓಟ್ಸ್ ಅನ್ನು ನೀವು ಸೇವಿಸಿದರೆ, ಜೀರ್ಣಕ್ರಿಯೆಯ ಸಮಸ್ಯೆಗಳು ಇರುವುದಿಲ್ಲ.
ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ: ನೀವು ಅಗಸೆಬೀಜ, ಚಿಯಾ ಬೀಜಗಳು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿದರೆ, ನೀವು ಆರೋಗ್ಯಕರ ಕೊಬ್ಬುಗಳನ್ನು ಪಡೆಯುತ್ತೀರಿ, ಇದು ದೇಹದ ಕೊಬ್ಬಿನ ಅಗತ್ಯವನ್ನು ಪೂರೈಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯೂ ಉತ್ತಮವಾಗಿರುತ್ತದೆ.
ಆರೋಗ್ಯಕರ ಜೀವನ ಶೈಲಿ: ಉತ್ತಮ ಜೀರ್ಣಕ್ರಿಯೆಗಾಗಿ ಆರೋಗ್ಯಕರ ಜೀವನ ಶೈಲಿ ಬಹಳ ಮುಖ್ಯ. ಹಾಗಾಗಿ ನಿಮ್ಮ ಜೀವನ ಶೈಲಿಯಲ್ಲಿ ವಾಕಿಂಗ್, ರನ್ನಿಂಗ್ ನಂತಹ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಬಿಡುವಿಲ್ಲದ ಜೀವನಶೈಲಿಯಿಂದಾಗಿ, ನಮಗೆ ಜಿಮ್‌ಗೆ ಹೋಗಲು ಸಮಯ ಸಿಗುವುದಿಲ್ಲ, ಇದರಿಂದಾಗಿ ನಮ್ಮ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತವೆ. ನೆನಪಿಡಿ, ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರಿಸಲು ಬಯಸಿದರೆ ದೇಹವನ್ನು ಹೆಚ್ಚು ಕ್ರಿಯಾಶೀಲವಾಗಿರಿಸಿಕೊಳ್ಳಿ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.