Spandana raghavendra funeral : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ಯಾಂಡಲ್ವುಡ್ ನಟರು, ಸಾಹಿತಿಗಳು, ರಾಜಕೀಯ ಗಣ್ಯರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ..