ಮಂತ್ರಾಲಯದ ರಾಯರ ಹುಂಡಿಗೆ ಹರಿದು ಬಂತು ಕೋಟ್ಯಂತರ ರೂ. ಕಾಣಿಕೆ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕೇವಲ 29 ದಿನಗಳಲ್ಲಿ ಭಕ್ತರಿಂದ 1.93,17,766 ರೂ. ಕಾಣಿಕೆ ಸಂಗ್ರಹವಾಗಿದೆ.

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಜುಲೈ ತಿಂಗಳ ರಾಯರ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಟ್ಯಂತರ ರೂ. ಕಾಣಿಕೆ ಸಂಗ್ರಹವಾಗಿದೆ. ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದು ಕೋಟ್ಯಂತರ ರೂ. ಕಾಣಿಕೆಯನ್ನು ಅರ್ಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜುಲೈ ತಿಂಗಳ ಹುಂಡಿ‌ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕೇವಲ 29 ದಿನಗಳಲ್ಲಿ ಭಕ್ತರಿಂದ 1.93,17,766 ರೂ. ಕಾಣಿಕೆ ಸಂಗ್ರಹವಾಗಿದೆ.

2 /5

ಇನ್ನೂ 4,04,059 ರೂ.ನಷ್ಟು ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿದ್ದು, ಈ ಬಾರಿ‌ ಒಟ್ಟು 1,97,21,825 ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಮಂತ್ರಾಲಯದ ಆಡಳಿತ ಮಂಡಳಿ ಘೋಷಣೆ ಮಾಡಿದೆ.

3 /5

ರಾಘವೇಂದ್ರ ಮಠಕ್ಕೆ ಬರುವ ಭಕ್ತರು ಕಾಣಿಕೆ ಜೊತೆಗೆ ರಾಯರಿಗೆ ಚಿನ್ನ-ಬೆಳ್ಳಿಯನ್ನು ಸಮರ್ಪಣೆ ಮಾಡಿದ್ದಾರೆ. ಈ ಬಾರಿ 16 ಗ್ರಾಂ ಚಿನ್ನ, 745 ಗ್ರಾಂ ಬೆಳ್ಳಿ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ.

4 /5

ಹುಂಡಿ ಎಣಿಕೆ ಕಾರ್ಯ  ಕ್ಷೇತ್ರದ ಆಡಳಿತ ಮಂಡಳಿಯ ಸಮ್ಮುಖದಲ್ಲಿ ನಡೆದಿದ್ದು, ನೂರಾರು ಸಿಬ್ಬಂದಿಗಳು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

5 /5

ರಾಯರ ಮಟ್ಟಕ್ಕೆ ಪ್ರತಿದಿನ ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ಹೀಗೆ ಭೇಟಿ ನೀಡುವ ಭಕ್ತರು ರಾಯರಿಗೆ ಕಾಣಿಕೆಯನ್ನು ಸಮರ್ಪಿಸುತ್ತಿದ್ದಾರೆ.