Summer Cool Drinks: ಬೇಸಿಗೆಯಲ್ಲಿ ಕೂಲ್, ಫ್ರೇಶ್, ಆರೋಗ್ಯವಾಗಿರಲು ಈ ಆರೋಗ್ಯಕರ ಪಾನೀಯಗಳನ್ನು ಕುಡಿಯಿರಿ

Summer Juices: ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಆಗಿ ಇರಿಸದಿದ್ದರೆ, ದೇಹದಲ್ಲಿ ನಿಶ್ಯಕ್ತಿ, ಶಾಖದ ಹೊಡೆತ ಮತ್ತು ನೀರಿನ ಕೊರತೆ ಪ್ರಾರಂಭವಾಗುತ್ತದೆ. ಅಷ್ಟೇ ಅಲ್ಲ, ದೇಹದಲ್ಲಿ ನೀರಿನ ಕೊರತೆಯು ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಇದನ್ನು ತಪ್ಪಿಸಲು ಬೇಸಿಗೆಯಲ್ಲಿ ಕೆಲವು ತಂಪು ಪಾನೀಯಗಳು ತುಂಬಾ ಪ್ರಯೋಜನಕಾರಿ ಆಗಿವೆ. 

Summer Cool Drinks: ಎಲ್ಲೆಡೆ ಬಿಸಿಲಿನ ಬೇಗೆ ಜೋರಾಗಿದೆ. ಈ ಬಿರು ಬೇಸಿಗೆಯಲ್ಲಿ ಬೆವರುವುದು ಸಹಜ. ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗಬಹುದು. ಇದನ್ನು ತಪ್ಪಿಸಲು ದೇಹವನ್ನು ಹೈಡ್ರೀಕರಿಸುವುದು ತುಂಬಾ ಅಗತ್ಯ. ಬೇಸಿಗೆಯಲ್ಲಿ ಕೂಲ್, ಫ್ರೇಶ್, ಆರೋಗ್ಯವಾಗಿರಲು ಕೆಲವು ಆರೋಗ್ಯಕರ ಪಾನೀಯಗಳು ನಿಮಗೆ ಸಹಕಾರಿ ಆಗಬಹುದು. ಅಂತಹ ಪಾನೀಯಗಳು ಯಾವುವು ಎಂದು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಕಲ್ಲಂಗಡಿ ಜ್ಯೂಸ್ ಕುಡಿಯಲು ರುಚಿಕರ ಮಾತ್ರವಲ್ಲ, ದೇಹವನ್ನು ತೇವಾಂಶದಿಂದ ಇಡಲು ಸಹಕಾರಿ ಆಗಿದೆ. ಕಲ್ಲಂಗಡಿ ಹಣ್ಣಿನಲ್ಲಿ ನೀರಿನ ಅಂಶ ಹೆಚ್ಚಿರುವುದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್ ಕುಡಿಯುವುದು ತುಂಬಾ ಲಾಭದಾಯಕವಾಗಿದೆ.  

2 /5

ಉತ್ತಮ ಆರೋಗ್ಯಕ್ಕೆ ಅಮೃತವೆಂದು ಪರಿಗಣಿಸಲಾಗಿರುವ ಎಳನೀರು ಬೇಸಿಗೆಯಲ್ಲಿ ದೇಹದಲ್ಲಿನ ನೀರಿನ ಕೊರತೆಯನ್ನು ಪೂರೈಸುವಲ್ಲಿ ಬಹಳ ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲ, ಇದರಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಾಕಷ್ಟು ಕಂಡುಬರುತ್ತವೆ. ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. 

3 /5

ಸೌತೆಕಾಯಿ ಮತ್ತು ಪುದೀನ ಎರಡೂ ಕೂಡ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. 

4 /5

ಬೇಸಿಗೆಯಲ್ಲಿ ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸಲು  ಮಜ್ಜಿಗೆ ಅತ್ಯುತ್ತಮ ಪಾನೀಯವಾಗಿದೆ.   

5 /5

ಬಿಲ್ವಪತ್ರೆ ಹಣ್ಣಿನ ಜ್ಯೂಸ್ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವುದರ ಜೊತೆಗೆ ಶಕ್ತಿ ವರ್ಧಕವಾಗಿಯೂ ಕೆಲಸ ಮಾಡುತ್ತದೆ. ಬೇಲ್ ರಸದಲ್ಲಿ ವಿಟಮಿನ್ ಸಿ, ಕಬ್ಬಿಣ ಮತ್ತು ಪೊಟ್ಯಾಸಿಯಮ್‌ನಂತಹ ಅನೇಕ ಅಗತ್ಯ ಪೋಷಕಾಂಶಗಳು ಕಂಡು ಬರುತ್ತವೆ. ಇದು ಉದರದ ಆರೋಗ್ಯಕ್ಕೆ ದಿವ್ಯೌಷಧವಾಗಿದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.