T20 World Cup: ಇಲ್ಲಿಯವರೆಗೆ ಆರು ತಂಡಗಳು ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿವೆ.
T20 World Cup: 2022ರ ಟಿ20 ವಿಶ್ವಕಪ್ ಕ್ರಿಕೆಟ್ಗೆ ಕೆಲವೇ ದಿನಗಳು ಬಾಕಿ ಉಳಿದಿವೆ.
2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಟೀಮ್ ಇಂಡಿಯಾ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗ 15 ವರ್ಷಗಳ ನಂತರ, ರೋಹಿತ್ ನಾಯಕತ್ವದಲ್ಲಿ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದೆ. ಅದೇ ಸಮಯದಲ್ಲಿ, ಇಲ್ಲಿಯವರೆಗೆ ಯಾವ ತಂಡಗಳು ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿವೆ ಎಂಬುದನ್ನು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಟಿ20 ವಿಶ್ವಕಪ್‌ನ ಮೊದಲ ಋತುವನ್ನು ಆಡಲಾಯಿತು. ಈ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ 5 ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.
2009ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಪಾಕಿಸ್ತಾನ ಪ್ರಶಸ್ತಿ ಗೆದ್ದಿತ್ತು. ಫೈನಲ್‌ನಲ್ಲಿ ಪಾಕಿಸ್ತಾನ 8 ವಿಕೆಟ್‌ಗಳಿಂದ ಗೆದ್ದಿತ್ತು. ಅದೇ ಸಮಯದಲ್ಲಿ ಶ್ರೀಲಂಕಾ ಪರ ತಿಲಕರತ್ನೆ ದಿಲ್ಶಾನ್ ಇಡೀ ಟೂರ್ನಿಯಲ್ಲಿ 317 ರನ್ ಗಳಿಸಿ ಎಲ್ಲರ ಮನ ಗೆದ್ದಿದ್ದರು.
2010ರಲ್ಲಿ ಆಸ್ಟ್ರೇಲಿಯವನ್ನು ಸೋಲಿಸಿ ಇಂಗ್ಲೆಂಡ್ ಟಿ20 ವಿಶ್ವಕಪ್ ಗೆದ್ದಿತ್ತು. ಅಂತಿಮ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇಂಗ್ಲೆಂಡ್ ಪರ ಕೆವಿನ್ ಪೀಟರ್ಸನ್ ಟೂರ್ನಿಯುದ್ದಕ್ಕೂ ಅಮೋಘ ಆಟ ಪ್ರದರ್ಶಿಸಿದರು.
ವೆಸ್ಟ್ ಇಂಡೀಸ್ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿದೆ. ಈ ತಂಡ 2012ರಲ್ಲಿ ಶ್ರೀಲಂಕಾವನ್ನು ಸೋಲಿಸಿತ್ತು. ಅದೇ ಸಮಯದಲ್ಲಿ, 2016 ರಲ್ಲಿ ವೆಸ್ಟ್ ಇಂಡೀಸ್, ಕ್ರಿಕೆಟ್ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಇಂಗ್ಲೆಂಡ್ ಅನ್ನು ಸೋಲಿಸಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
2014 ರ ಟಿ20 ವಿಶ್ವಕಪ್ ಅನ್ನು ಬಾಂಗ್ಲಾದೇಶ ಆಯೋಜಿಸಿತ್ತು. ಬಾಂಗ್ಲಾದೇಶದ ಪಿಚ್‌ಗಳು ಯಾವಾಗಲೂ ಸ್ಪಿನ್ನರ್‌ಗಳಿಗೆ ಬೆಂಬಲ ನೀಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ಮತ್ತು ಭಾರತ ನಡುವೆ ಫೈನಲ್ ಪಂದ್ಯ ನಡೆಯಿತು. ಅಲ್ಲಿ ಶ್ರೀಲಂಕಾ 6 ವಿಕೆಟ್‌ಗಳಿಂದ ಟಿ20 ವಿಶ್ವಕಪ್ ಪಂದ್ಯವನ್ನು ತನ್ನದಾಗಿಸಿಕೊಂಡಿತು.
2021ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾದ ನೆಲದಲ್ಲಿ ನಡೆದಿತ್ತು. ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿತು.