"ಸಂವಿಧಾನದ ಆಶಯಗಳನ್ನು ಜಾರಿ ಮಾಡುವದೇ ಸರಕಾರದ ಕರ್ತವ್ಯ"

ಭಾರತ ದೇಶದಲ್ಲಿ ಶೇ.90 ರಷ್ಟು ಸಂಪತ್ತು ಕೇವಲ ಶೇ.10 ರಷ್ಟು ಜನರಲ್ಲಿ ಕೇಂದ್ರಿಕೃತವಾಗಿದೆ. ಸಮಾಜದಲ್ಲಿ ಅಸಮಾನತೆ ಬೇರೂರಿದೆ. ಇದನ್ನು ತೊಲಗಿಸಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಒತ್ತಿ ಹೇಳಿದ್ದಾರೆ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವುದೇ ಸರ್ಕಾರಗಳ ಕರ್ತವ್ಯವಾಗಿದೆ. ನಮ್ಮ ಸರ್ಕಾರವು ಬಸವಣ್ಣನವರ ಕಾಯಕ, ದಾಸೋಹ ಮತ್ತು ಸಾಮಾಜಿಕ ನ್ಯಾಯ ತತ್ವದಲ್ಲಿ ನಂಬಿಕೆ ಇಟ್ಟು ಅದರಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.

 ಅವರು ಇಂದು (ಡಿ.16) ಸಂಜೆ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟ್ಯಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ಮತ್ತು ಪತ್ರಿಕಾ ವಿತರಕ ಕಾರ್ಮಿಕರ ನೊಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

 

1 /10

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರಸ್ತುತ ಶಿಕ್ಷಣ ಪದ್ದತಿಗೆ ಅನುಕೂಲವಾಗುವಂತೆ ಲ್ಯಾಪ್‍ಟ್ಯಾಪ್‍ಗಳನ್ನು ವಿತರಣೆ ಮಾಡುತ್ತಿರುವುದು ಕಾರ್ಮಿಕರ ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಲು ಹಾಗೂ ಉನ್ನತ ಸ್ಥಾನಕ್ಕೇರಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

2 /10

ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದಂತೆ ಮತ್ತೊಂದು ಕಾರ್ಯಕ್ರಮವಾದ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗಾಗಿ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಸೌಲಭ್ಯ ಹಾಗೂ 1 ಲಕ್ಷ ರೂ.ಗಳವರೆಗೆ ವೈಧ್ಯಕೀಯ ಸೌಲಭ್ಯವನ್ನು ಒದಗಿಸುವ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು ಸದರಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ.

3 /10

ಸರ್ಕಾರದ 2023-24 ನೇ ಸಾಲಿನ ಆಯವ್ಯಯದಲ್ಲಿ ಸ್ವಿಗ್ಗಿ, ಜೊಮ್ಯಾಟೋ, ಆಮೇಜಾನ, ಪ್ಲಿಪ್‍ಕಾರ್ಟ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗಾಗಿ ರೂ.2 ಲಕ್ಷಗಳ ಜೀವವಿಮೆ ಹಾಗೂ ರೂ. 2 ಲಕ್ಷಗಳ ಅಪಘಾತ ವಿಮೆ ಸೇರಿದಂತೆ ಒಟ್ಟು ರೂ. 4 ಲಕ್ಷಗಳ ವಿಮಾ ಸೌಲಭ್ಯ ಒದಗಿಸಲು ಘೋಷಿಸಿದ್ದು ಅದರ ಅಂಗವಾಗಿ ಅರ್ಹ ಫಲಾನುಭವಿಗಳ ನೊಂದಣಿಗೆ ಇಂದು ಚಾಲನೆ ನೀಡಿರುವುದು ಅತ್ಯಂತ ಸಂತೋಷವಾಗಿದೆ.

4 /10

ವಿಶೇಷ ಚೇತನರ ಬಗ್ಗೆ ಮೊದಲಿನಿಂದಲೂ ಮಾನವೀಯ ಅಂತಃಕರಣ ಹಾಗೂ ಕಾಳಜಿಯನ್ನುಳ್ಳ ಸಚಿವ ಸಂತೋಷ ಎಸ್. ಲಾಡ್ ಅವರು ಸರ್ಕಾರದ ಈ ಯೋಜನೆಯ ಜೊತೆ ಕೈ ಜೋಡಿಸಿ ರಾಜ್ಯದ ಎಲ್ಲಾ ವಿಶೇಷ ಚೇತನರಿಗೂ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ಕೊಡಿಸಿಕೊಡಬೇಕೆಂಬ ಹೆಬ್ಬಯಕೆಯಿಂದ ರಾಜ್ಯದ ವಿವಿಧ ಕೈಗಾರಿಕೆಗಳ, ಸಂಸ್ಥೆಗಳ ಉದ್ಯೋಗದಾತರನ್ನು ಸಂಪರ್ಕಿಸಿ ಹಲವು ಸುತ್ತುಗಳ ಸಭೆ ನಡೆಸಿ ಅವರ ಮನವೊಲಿಸಿ ತ್ರಿಚಕ್ರ ವಾಹನಗಳನ್ನು ಪ್ರಾಯೋಜಿಸುವಂತ ಮಹತ್ತರ ಕಾರ್ಯವನ್ನು ಮಾಡಿದ್ದಾರೆ. ಇದಕ್ಕಾಗಿ ಸಚಿವ ಸಂತೋಷ ಲಾಡ್ ಅವರಿಗೆ ಹಾಗೂ ವಾಹನಗಳನ್ನು ಕೊಡುಗೆಯಾಗಿ ನೀಡುವ ಮೂಲಕ ವಿಶೇಷ ಚೇತನರ ಬದುಕಿಗೆ ಆಶ್ರಯದಾತರಾದ ಎಲ್ಲಾ ಸಂಸ್ಥೆಗಳ ಉದ್ಯೋಗದಾತರಿಗೆ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಅವರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

5 /10

ವಿಶೇಷ ಚೇತನರ ಬಗ್ಗೆ ನನಗೆ ಹಾಗೂ ನಮ್ಮ ಸರ್ಕಾರಕ್ಕೆ ಅಪಾರವಾದ ಕಾಳಜಿ ಇದ್ದು 2023-24 ನೇ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ವಿಶೇಷ ಚೇತನರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಇಲಾಖೆಯಲ್ಲಿ ನೊಂದಣಿಯಾಗಿರುವ ಸುಮಾರು 4 ಸಾವಿರ ವಿಶೇಷ ಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳನ್ನು ರೂ.30 ಕೋಟಿಗಳ ವೆಚ್ಚದಲ್ಲಿ ಒದಗಿಸಲು ಘೋಷಿಸಿದ್ದು ಯೋಜನೆಯು ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

6 /10

ಈ ದಿನದ ಅವಿಸ್ಮರಣೀಯ ಕಾರ್ಯಕ್ರಮದಲ್ಲಿ ವಿಶೇಷ ಚೇತನರನ್ನು ಮಾನಸಿಕವಾಗಿ, ದೈಹಿಕವಾಗಿ ಸದೃಢಗೊಳಿಸಿ ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಅವರು ಮಾಡುವ ಕೆಲಸಕ್ಕೆ ಹಾಗೂ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮೋಟಾರು ಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಅತ್ಯತ್ತಮವಾದುದು.  

7 /10

ಈ ಹಿಂದಿನ ನಮ್ಮ ನೇತೃತ್ವದ ಸರ್ಕಾರದಲ್ಲಿ 2015-16 ಹಾಗೂ 2016-17 ನೇ ಸಾಲಿನ ಆಯವ್ಯಯಗಳಲ್ಲಿ ‘ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ'ಯಡಿ 11 ವರ್ಗದ ಅಸಂಘಟಿತ ಕಾರ್ಮಿಕರಾದ ಹಮಾಲರು, ಮನೆಕೆಲಸದವರು, ಟೈಲರಿ, ಚಿಂದಿ ಆಯುವವರು, ಅಗಸರು, ಮೆಕಾನಿಕ್ಸ್, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾಮಿಕರನ್ನು ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು ಎಂದರು.

8 /10

ಕಾರ್ಮಿಕ ಸಮುದಾಯದಲ್ಲಿ ಪ್ರಧಾನವಾಗಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಎಂಬ ಎರಡು ವರ್ಗಗಳಿವೆ. ಅಸಂಘಟಿತ ಕಾರ್ಮಿಕರ ಸಂಖ್ಯೆ ಶೇ.83 ರಷ್ಟಿದ್ದು ಶಾಸನಾತ್ಮಕ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇದನ್ನು ಗಮನಿಸಿದ ಸರ್ಕಾರವು ಹಂತ ಹಂತವಾಗಿ ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

9 /10

ಒಂದು ಕುಟುಂಬಕ್ಕೆ ತಿಂಗಳಿಗೆ 5 ಸಾವಿರದಂತೆ ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚವನ್ನು ಸರ್ಕಾರ ಮಾಡುತ್ತಿದೆ. ಇದರ ಲಾಭವು ಸುಮಾರು 1.30 ಕೋಟಿ ಕುಟುಂಬಗಳಿಗೆ ಅಂದರೆ ಸುಮಾರು 4 ಕೋಟಿಗಿಂತ ಹೆಚ್ಚು ಜನರಿಗೆ ತಲಪುತ್ತಿದೆ. ಮಹಿಳೆಯರಿಗಾಗಿ ಶಕ್ತಿ ಯೋಜನೆ, ಕುಟುಂಬ ನಿರ್ವಹಣೆಗಾಗಿ ಮನೆಯ ಯಜಮಾನಿಗೆ 2,000 ರೂ ನೀಡುವ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್, ಬಡ ಕುಟುಂಬಗಳಿಗೆ ಅನ್ನಭಾಗ್ಯ, ನಿರುದ್ಯೋಗ ಯುವಕರಿಗೆ ಯುವನಿಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ಮೂಲಕ ಸಮಾಜದ ಎಲ್ಲ ಜನರಿಗೂ ಉತ್ತಮ ಜೀವನವನ್ನು ನಡೆಸುವಂತೆ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

10 /10

ಸಮಾಜದಲ್ಲಿ ಎಲ್ಲರಿಗೂ ರಾಜಕೀಯ ಸ್ವಾತಂತ್ರ್ಯ ಸಿಗಬೇಕು. ಅಂದಾಗ ಮಾತ್ರ ಅಸಮಾನತೆ ತೊಡೆದು ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ಈ ನಿಟ್ಟನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಜನರು ಪಡೆಯಬೇಕು. ಡಾ.ಬಾಬಾಸಾಹೇಬ ಅಂಬೇಡ್ಕರ ಅವರು 1949 ನವೆಂಬರ 25 ರಂದು ಸಂವಿಧಾನ ಸಭೆಯಲ್ಲಿ ಮಾತನಾಡಿ, ಸಮಾಜದಲ್ಲಿ ಅಸಮಾನತೆ ಇರುವವರೆಗೆ ಶಾಂತಿ, ನೆಮ್ಮದಿ ಇರುವುದಿಲ್ಲ. ವೈರುಧ್ಯದ ಸಮಾಜದಲ್ಲಿ ನಾವು ಕಾಲಿಡುತ್ತಿದ್ದೇವೆ. ಈ ಅಸಾಮನತೆ ಹೊಡೆದು ಹಾಕಬೇಕು ಎಂದು ಅವರು ಹೇಳಿದ್ದರು. ನಮ್ಮ ರಾಜ್ಯ ಸರ್ಕಾರವು ಪ್ರತಿ ಬಡ ಕುಟುಂಬಕ್ಕೆ ಪ್ರತಿ ತಿಂಗಳು ವಿವಿಧ ಕಾರ್ಯಕ್ರಮ ಅಡಿಯಲ್ಲಿ ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಸುಮಾರು 4 ಕೋಟಿಗಿಂತ ಹೆಚ್ಚು ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ.