Moringa Tea Benefits: ಮೊರಿಂಗಾ ಎಲೆಗಳನ್ನು ಡ್ರಮ್ಸ್ಟಿಕ್ ಸೊಪ್ಪು, ನುಗ್ಗೆ ಸೊಪ್ಪು ಎಂತಲೂ ಕರೆಯಲಾಗುತ್ತದೆ. ನುಗ್ಗೆಯ ಎಲ್ಗಗ್ಲೌ, ಹೂವು, ಕಾಯಿಲ್ ಬೀಜಗಳು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬ್ಲಾಕ್ ಟೀ, ಗ್ರೀನ್ ಟೀ, ಲೆಮನ್ ಟೀ ರೀತಿಯಲ್ಲೇ ಮೊರಿಂಗಾ ಟೀ ಸಹ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಈ ಫೋಟೋ ಗ್ಯಾಲರಿಯಲ್ಲಿ ಮೊರಿಂಗಾ ಟೀ ಸೇವನೆಯಿಂದ ಆರೋಗ್ಯಕ್ಕೆಯಿರುವ 5 ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...
ರೋಗ ನಿರೋಧಕ ಶಕ್ತಿ: ನುಗ್ಗೆ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಸಮೃದ್ಧವಾಗಿದೆ. ನಿಯಮಿತ ಮೊರಿಂಗಾ ಟೀ ಸೇವಣೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಯಕೃತ್ ಆರೋಗ್ಯ: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಮೊರಿಂಗಾ ಎಲೆಗಳಿಂದ ತಯಾರಿಸಿದ ಟೀ ಕುಡಿಯುವುದರಿಂದ ಯಕೃತ್ ಹಾಗೂ ಮೂತ್ರಪಿಂಡಗಳನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬಹುದು.
ಕಣ್ಣಿನ ಆರೋಗ್ಯ: ಮೊರಿಂಗಾ ಎಲೆಗಳಲ್ಲಿ ವಿಟಮಿನ್ ಎ ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ ಇದರ ಬಳಕೆಯೂ ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ತೂಕ ನಷ್ಟ: ನುಗ್ಗೆ ಸೊಪ್ಪಿನಲ್ಲಿ ಎಂದರೆ ಮೊರಿಂಗಾ ಎಲೆಗಳಲ್ಲಿ ಕ್ಲೋರೊಜೆನಿಕ್ ಆಮ್ಲ ಕಂಡು ಬರುತ್ತದೆ. ನಿತ್ಯ ಮೊರಿಂಗಾ ಟೀ ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ತೂಕನಷ್ಟಕ್ಕೂ ತುಂಬಾ ಪ್ರಯೋಜನಕಾರಿ.
ಬಿಪಿ ನಿಯಂತ್ರಣ: ನಿತ್ಯ ಒಂದು ಕೆಪಿ ಮೊರಿಂಗಾ ಟೀ ಸೇವನೆಯಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು ಎಂದು ಸಂಶೋಧನೆಯೊಂದು ಬಹಿರಂಗಪಡಿಸಿದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.