ಪ್ರತಿದಿನ ಈ ಪಾನೀಯಗಳನ್ನು ಕುಡಿಯುವುದರಿಂದ ಹೊಟ್ಟೆಯ ಕೊಬ್ಬು ಕರಗುತ್ತದೆ !

ಹೊಟ್ಟೆಯಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಲು ಈ ಆರೋಗ್ಯಕರ ಪಾನೀಯಗಳನ್ನು ಮನೆಯಲ್ಲಿಯೇ ತಯಾರಿಸಿ ಕುಡಿಯಬಹುದು. 

ಬೆಂಗಳೂರು : ಇಂದು ಸಣ್ಣ ಮಕ್ಕಳಲ್ಲಿ ಕೂಡಾ ಬೊಜ್ಜಿನ ಸಮಸ್ಯೆ ಕಾಡುತ್ತಿದೆ. ಆಹಾರ ಪದ್ಧತಿಯಿಂದ ಹಿಡಿದು,  ಬದಲಾಗುತ್ತಿರುವ ಜೀವನಶೈಲಿಯೇ ಇದಕ್ಕೆ ಕಾರಣ. ಹಾಗಾಗಿ ಹೊಟ್ಟೆಯಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಲು ಈ ಆರೋಗ್ಯಕರ ಪಾನೀಯಗಳನ್ನು ಮನೆಯಲ್ಲಿಯೇ ತಯಾರಿಸಿ ಕುಡಿಯಬಹುದು. ಇದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. .
  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ಸೊಂಪಿನ ನೀರು : ಸೊಂಪಿನ ನೀರನ್ನು ಸಾಮಾನ್ಯವಾಗಿ ದೇಹವನ್ನು ನಿರ್ವಿಷಗೊಳಿಸುವ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಆದರೆ ಈ ನೀರಿನಿಂದ ತೂಕವನ್ನು ಕಳೆದುಕೊಳ್ಳಬಹುದು.  ಇದನ್ನು ತಯಾರಿಸಲು, ಒಂದು ಚಮಚ ಫೆನ್ನೆಲ್ ಅನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಅದನ್ನು ಸೋಸಿಕೊಂಡು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

2 /4

ಜೇನು ಮತ್ತು ನಿಂಬೆ :  ತೂಕ ನಷ್ಟಕ್ಕೆ, ಬೆಚ್ಚಗಿನ ನೀರಿನಲ್ಲಿ ಕೆಲವು ನಿಂಬೆ ಹನಿಗಳನ್ನು ಹಾಕಿ ಮತ್ತು ಒಂದು ಚಮಚ ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ. ಈ ಪಾನೀಯದಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಧಿಕವಾಗಿರುತ್ತದೆ. ಇದರಿಂದ ಹೊಟ್ಟೆಯಾ ಬೊಜ್ಜು ಬೇಗ ಕಡಿಮೆಯಾಗುತ್ತದೆ. ಆದ್ದರಿಂದ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಕುಡಿಯಿರಿ.

3 /4

ಓಮ ಕಾಳು  : ಆರೋಗ್ಯಕರ ದೇಹದ ತೂಕವನ್ನು ಹೊಂದಲು ಪ್ರತಿದಿನ ಓಮ ಕಾಳುಗಳನ್ನು  ಬಳಸಿ ಚಹಾ ಮಾಡಿಕೊಳ್ಳಿ. ಇದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.  ಜೊತೆಗೆ ಇದು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು ಮತ್ತು ಚಯಾಪಚಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. 

4 /4

 ಅರಿಶಿನ : ಅರಶಿನದಲ್ಲಿ ವಿಟಮಿನ್ ಬಿ, ಸಿ, ಒಮೆಗಾ-3 ಕೊಬ್ಬಿನಾಮ್ಲಗಳು, ಆಲ್ಫಾ-ಲಿನೋಲಿಕ್ ಆಮ್ಲ, ಫೈಬರ್, ಪೊಟ್ಯಾಸಿಯಮ್, ಕಬ್ಬಿಣ ಇತ್ಯಾದಿಗಳಿದ್ದು, ಇದು ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ದೇಹದಿಂದ ಹೆಚ್ಚುವರಿ ಕೊಬ್ಬನ್ನು ಸಹ ತೆಗೆದುಹಾಕುತ್ತದೆ.