ಏಷ್ಯಾಕಪ್ ಮಾದರಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಕಲೆಹಾಕಿದ ಕ್ರಿಕೆಟಿಗ ಯಾರು? ಭಾರತದ ಈ ದಿಗ್ಗಜನೇ ಅಗ್ರಸ್ಥಾನಿ

Highest Individual Scorer in Asia Cup: ಏಷ್ಯಾಕಪ್ 2023 ಪ್ರಾರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಆಗಸ್ಟ್ 31ರಂದು ಆರಂಭಗೊಂಡು ಸೆಪ್ಟೆಂಬರ್ 17ರಂದು ಮುಕ್ತಾಯಗೊಳ್ಳಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಆಗಸ್ಟ್ 31ರಂದು ಆರಂಭಗೊಂಡು ಸೆಪ್ಟೆಂಬರ್ 17ರಂದು ಮುಕ್ತಾಯಗೊಳ್ಳಲಿದೆ. ಇನ್ನು ಈ ಪಂದ್ಯಾವಳಿಯಲ್ಲಿ ಅನೇಕ ದಾಖಲೆಗಳನ್ನು ಕ್ರಿಕೆಟ್ ದಿಗ್ಗಜರು ಬರೆದಿದ್ದಾರೆ

2 /7

ಇಂದು ನಾವು ಏಷ್ಯಾಕಪ್‌ ಮಾದರಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಕಲೆಹಾಕಿದ ಟಾಪ್ 5 ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.

3 /7

ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ 50 ಓವರ್‌’ಗಳ ಏಷ್ಯಾಕಪ್‌ ಮಾದರಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ 2012 ರ ಆವೃತ್ತಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಕೇವಲ 148 ಎಸೆತಗಳಲ್ಲಿ 183 ರನ್ ಗಳಿಸಿ ಅಗ್ರಸ್ಥಾನವನ್ನು ಈ ಪಟ್ಟಿಯಲ್ಲಿ ಕಾಯ್ದುಕೊಂಡಿದ್ದಾರೆ.

4 /7

ಇನ್ನು ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ಬ್ಯಾಟರ್ ಯೂನಿಸ್ ಖಾನ್ ಇದ್ದಾರೆ. 2004ರಲ್ಲಿ ಕೊಲಂಬೊದಲ್ಲಿ ನಡೆದ ಏಷ್ಯಾಕಪ್ ಪಂದ್ಯದ ವೇಳೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಯೂನಿಸ್ ಖಾನ್ ಅವರು ಹಾಂಗ್ ಕಾಂಗ್ ವಿರುದ್ಧ ಕೇವಲ 122 ಎಸೆತಗಳಲ್ಲಿ 144 ರನ್ ಗಳಿಸಿದ್ದಾರೆ.

5 /7

ಬಾಂಗ್ಲಾದೇಶದ ವಿಕೆಟ್ ಕೀಪರ್ ಕಂ ಬ್ಯಾಟರ್ ಮುಶ್ಫಿಕರ್ ರಹೀಮ್ ಏಷ್ಯಾಕಪ್‌ ನಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಮಾಡಿದ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 2018 ರ ಆವೃತ್ತಿಯಲ್ಲಿ ರಹೀಮ್ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ 150 ಎಸೆತಗಳಲ್ಲಿ 144 ರನ್ ಗಳಿಸಿದರು.

6 /7

2004 ರಲ್ಲಿ ಕೊಲಂಬೊದಲ್ಲಿ ನಡೆದ ಏಷ್ಯಾಕಪ್ ಪಂದ್ಯದ ವೇಳೆ ಶೋಯೆಬ್ ಮಲಿಕ್, ಭಾರತ ವಿರುದ್ಧ 127 ಎಸೆತಗಳಲ್ಲಿ 143 ರನ್ ಗಳಿಸಿದರು. ಈ ಮೂಲಕ ಏಷ್ಯಾಕಪ್‌ ನಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

7 /7

ಇನ್ನು ಈ ಪಟ್ಟಿಯಲ್ಲಿ ಐದನೇ ಸ್ಥಾನವನ್ನೂ ಸಹ ವಿರಾಟ್ ಪಡೆದುಕೊಂಡಿದ್ದಾರೆ. 2014 ರ ಏಷ್ಯಾಕಪ್ ಆವೃತ್ತಿಯಲ್ಲಿ, ಆತಿಥೇಯ ಬಾಂಗ್ಲಾದೇಶದ ವಿರುದ್ಧ ಕೊಹ್ಲಿ ಕೇವಲ 122 ಎಸೆತಗಳಲ್ಲಿ 136 ರನ್ ಗಳಿಸಿದರು.