ದೇಹ ತೂಕ ಕಳೆದುಕೊಳ್ಳಲು ಈ ಬೇಳೆಯನ್ನು ಐದು ವಿಧಾನಗಳಲ್ಲಿ ಬಳಸಿ

ಹೆಸರು ಬೇಳೆ ಸೇವನೆಯು ತೂಕ ನಷ್ಟಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಹೀಗೆ ಸೇವಿಸುವುದರಿಂದ  ತೂಕ ನಷ್ಟಕ್ಕೆ ಸಹಾಯವಾಗುತ್ತದೆ. 

ಬೆಂಗಳೂರು :  ಸರಳವಾದ ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸುವ ಮೂಲಕ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ಈ ಆಹಾರಗಳ   ನಿಯಮಿತ ಸೇವನೆಯು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ತೂಕವನ್ನು ಕಳೆದುಕೊಳ್ಳಲು ಹೆಸರು ಬೇಳೆ ತುಂಬಾ ಸಹಕಾರಿ. ಇದು ಪ್ರೋಟೀನ್‌ನಲ್ಲಿ ಸಮೃದ್ಧವಾಗಿದೆ. ಇದು ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಇದರಲ್ಲಿ ನಾರಿನಂಶವೂ ಇದ್ದು, ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಹೆಸರು ಬೇಳೆ ದೋಸೆ ತೂಕ ನಷ್ಟಕ್ಕೆ ಆರೋಗ್ಯಕರ ಮತ್ತು ಟೇಸ್ಟಿ ಉಪಹಾರ ಆಯ್ಕೆಯಾಗಿದೆ. ಇದಕ್ಕಾಗಿ ಮೊದಲು ಹೆಸರು ಬೇಳೆಯನ್ನು ನೀರಿನಲ್ಲಿ ನೆನೆಸಿ ನಂತರ ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಇದಕ್ಕೆ ಕತ್ತರಿಸಿದ ಈರುಳ್ಳಿ, ಕ್ಯಾಪ್ಸಿಕಂ, ಹಸಿರು ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಮಸಾಲೆ ಮತ್ತು ಉಪ್ಪು ಸೇರಿಸಿ. ಇಷ್ಟಾದ ಮೇಲೆ ಈ ಹಿಟ್ಟಿನಿಂದ ದೋಸೆ ತಯಾರಿಸಿ. 

2 /5

ಹೆಸರು ಬೇಳೆ ಕಿಚಡಿ ತೂಕ ನಷ್ಟಕ್ಕೆ ಪರಿಪೂರ್ಣ ಆಯ್ಕೆಯಾಗಿದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕಾಂಶ ಸಿಗುತ್ತದೆ. ತೂಕವನ್ನು ನಿಯಂತ್ರಿಸಲು ಕೂಡಾ ಇದು ಸಹಕಾರಿಯಾಗಿದೆ.

3 /5

ಮೊಳಕೆ ಬಂದ ಹೆಸರು ಕಾಳು ತೂಕ ನಷ್ಟಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

4 /5

ಹೆಚ್ಚುತ್ತಿರುವ ತೂಕವನ್ನು ಕಡಿಮೆ ಮಾಡಲು ಹೆಸರು ಬೇಳೆ ಸೂಪ್ ಸೇವಿಸಬಹುದು. ಇದು ರುಚಿಕರವಾಗಿರುವುದರ ಜೊತೆಗೆ, ಇದನ್ನು ಮಾಡುವುದು ತುಂಬಾ ಸುಲಭ. ಇದಕ್ಕಾಗಿ ನೆನೆಸಿದ ಹೆಸರು ಬೇಳೆಗೆ ಬೆಳ್ಳುಳ್ಳಿ, ಶುಂಠಿ, ಜೀರಿಗೆ, ಮಸಾಲೆ, ಇಂಗು ಮತ್ತು ಉಪ್ಪನ್ನು ಸೇರಿಸಿ ಕುದಿಸಿ. ನಂತರ ಅದನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಅದಕ್ಕೆ ರುಬ್ಬಿದ ಕರಿಮೆಣಸು ಅಥವಾ ಕರಿಮೆಣಸು ಪುಡಿ ಸೇರಿಸಿ ಸೇವಿಸಿ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಾಕಷ್ಟು ಸಹಾಯ ಮಾಡುತ್ತದೆ.

5 /5

ತೂಕ ಇಳಿಸಿಕೊಳ್ಳಲು ಹೆಸರು ಬೇಳೆ ಇಡ್ಲಿಯನ್ನು ತಯಾರಿಸಿ ತಿನ್ನಬಹುದು. ಇದಕ್ಕಾಗಿ ನೆನೆಸಿದ ಹೆಸರು ಬೇಳೆಯನ್ನು ರುಬ್ಬಬೇಕು. ನಂತರ ನಿಮ್ಮ ಆಯ್ಕೆಯ ತರಕಾರಿಗಳು, ಮಸಾಲೆಗಳು ಮತ್ತು ಉಪ್ಪು ಸೇರಿಸಿ. ಈಗ ಈ ಹಿಟ್ಟಿನಿಂದ ಇಡ್ಲಿ ತಯಾರಿಸಿ. ಬೆಳಗಿನ ಉಪಾಹಾರಕ್ಕಾಗಿ ನೀವು ಮೂಂಗ್ ದಾಲ್ ಇಡ್ಲಿಯನ್ನು ತಿನ್ನಬಹುದು.