Tulsi leaves: ತುಳಸಿ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿದಿದೆ. ಈ ಎಲೆಗಳಿಂದ ಹಲವು ರೀತಿಯ ಸಮಸ್ಯೆಗಳನ್ನು ನಿಯಂತ್ರಿಸಬಹುದು. ತುಳಸಿ ಎಲೆಗಳಿಗೆ ದೀರ್ಘಕಾಲದ ಕಾಯಿಲೆಗಳನ್ನೂ ನಿಯಂತ್ರಿಸುವ ಶಕ್ತಿ ಇದೆ. ಪ್ರತಿದಿನ ಒಂದು ತುಳಸಿ ಎಲೆಯನ್ನು ಜಗಿಯುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ತುಳಸಿಯನ್ನು ಹಿಂದೂಗಳು ವಿಶೇಷವಾಗಿ ಪೂಜಿಸುತ್ತಾರೆ. ಪ್ರತಿಯೊಬ್ಬರ ಮನೆಯಲ್ಲಿ ತುಳಸಿ ಗಿಡ ಸಾಮಾನ್ಯವಾಗಿ ಇದ್ದೇ ಇರುತ್ತದೆ.. ತುಳಸಿ ಸಸ್ಯವು ಎಲ್ಲಾ ರೋಗಗಳಿಗೆ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ. ತುಳಸಿ ಎಲೆಗಳಿಂದ ಋತುಮಾನದ ಕಾಯಿಲೆಗಳಲ್ಲದೆ, ದೀರ್ಘಕಾಲದ ಕಾಯಿಲೆಗಳನ್ನು ಸಹ ನಿಯಂತ್ರಿಸಬಹುದು.
ಇತ್ತೀಚಿನ ದಿನಗಳಲ್ಲಿ ಮಧುಮೇಹವು ಮಹಾಮಾರಿಯಾಗಿದೆ. ಪ್ರತಿ ಐದು ಜನರಲ್ಲಿ ಇಬ್ಬರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ರೋಗವನ್ನು ಆಹಾರದಿಂದ ಮಾತ್ರ ನಿಯಂತ್ರಿಸಬಹುದು.
ಟೈಪ್-2 ಮಧುಮೇಹದಿಂದ ಬಳಲುತ್ತಿರುವವರಿಗೆ ತುಳಸಿ ಎಲೆಗಳು ಚೆನ್ನಾಗಿ ಕೆಲಸ ಮಾಡುತ್ತವೆ. ಪ್ರತಿದಿನ ಹೊಟ್ಟೆಗೆ ತುಳಸಿ ಎಲೆಯನ್ನು ಜಗಿಯುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ತುಳಸಿ ಎಲೆಯನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ. ತುಳಸಿ ಎಲೆಗಳನ್ನು ಕುದಿಸಿದ ನೀರು ಕೂಡ ಚೆನ್ನಾಗಿ ಕೆಲಸ ಮಾಡುತ್ತದೆ. ತುಳಸಿ ಬೀಜಗಳನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ತುಳಸಿ ಎಲೆಗಳು ಇನ್ಸುಲಿನ್ ಗ್ರಂಥಿಯನ್ನು ಹೆಚ್ಚು ಉತ್ಪಾದಿಸಲು ಉತ್ತೇಜಿಸುತ್ತದೆ. ಇದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುವುದಿಲ್ಲ. ತುಳಸಿ ಎಲೆಗಳನ್ನು ಜಗಿಯುವುದರಿಂದ ಅಧಿಕ ರಕ್ತದೊತ್ತಡ, ಅಧಿಕ ತೂಕ ಮತ್ತು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೂ ಕಡಿಮೆಯಾಗುತ್ತದೆ. ಇದಲ್ಲದೇ ಈ ಎಲೆ ಕ್ಯಾನ್ಸರ್ ರೋಗಕ್ಕೂ ಪರಿಣಾಮಕಾರಿ ಮದ್ದಾಗಿದೆ..
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.