Turmeric and Coconut Oil Benefits for White Hair: ಅರಿಶಿನ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಔಷಧೀಯ ಗುಣಗಳಿಗೂ ಹೆಸರುವಾಸಿಯಾಗಿದೆ. ಅರಿಶಿನವು ಅನೇಕ ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಕೂದಲಿಗೆ ಪ್ರಯೋಜನಕಾರಿಯಾಗಿದೆ. ಇದನ್ನು ನಿಯಮಿತವಾಗಿ ಬಳಕೆ ಮಾಡಿದರೆ ತಲೆ ಮತ್ತು ನೆತ್ತಿಯ ರಕ್ತ ಪರಿಚಲನೆ ಸುಧಾರಿಸುತ್ತದೆ. ಜೊತೆಗೆ ಡ್ಯಾಂಡ್ರಫ್ ಮಾಯವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅರಿಶಿನವು ಕೂದಲಿಗೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದರ ಕುರಿತು ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಅಧ್ಯಯನದ ಪ್ರಕಾರ, ರಕ್ತ ಪರಿಚಲನೆಯ ಕೊರತೆಯು ಕೂದಲು ಉದುರುವಿಕೆಗೆ ಕಾರಣವಾಗಬಹುದು. ಹೀಗಾಗಿ ಕೂದಲಿಗೆ ಅರಿಶಿನವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಸಂಶೋಧನೆಯ ಪ್ರಕಾರ, ಅರಿಶಿನವು ತಲೆಹೊಟ್ಟು ವಿರೋಧಿ ಪರಿಣಾಮವನ್ನು ಹೊಂದಿದೆ. ಈ ಕಾರಣಕ್ಕಾಗಿ ಅರಿಶಿನವನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಅಷ್ಟೇ ಅಲ್ಲದೆ, ಅರಿಶಿನವನ್ನು ಬಳಸುವುದರಿಂದ ಕೂದಲು ಅಕಾಲಿಕವಾಗಿ ಬಿಳಿಯಾಗುವ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಸಂಯುಕ್ತವು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ ಎಂದು ಸಂಶೋಧನೆಯು ಕಂಡುಹಿಡಿದಿದೆ, ಇದು ಬಿಳಿ ಕೂದಲಿನ ಸಮಸ್ಯೆಯನ್ನು ತಕ್ಷಣವೇ ಕಡಿಮೆ ಮಾಡುತ್ತದೆ.
ಒಂದು ಬಟ್ಟಲಿನಲ್ಲಿ 2 ಮೊಟ್ಟೆ, 2 ಚಮಚ ಜೇನುತುಪ್ಪವನ್ನು ಹಾಕಿ ಮಿಶ್ರಣ ಮಾಡಿ. ಅದಕ್ಕೆ 2 ಚಮಚ ಅರಿಶಿನ ಪುಡಿಯನ್ನು ಸೇರಿಸಿ. ಈಗ ಈ ತಯಾರಿಸಿದ ಮಿಶ್ರಣವನ್ನು ಚೆನ್ನಾಗಿ ಬೀಟ್ ಮಾಡಿ. ಬಳಿಕ ಕೂದಲಿನ ಬೇರುಗಳಿಗೆ ಚೆನ್ನಾಗಿ ಹಚ್ಚಿ. ಅರ್ಧ ಘಂಟೆಯ ನಂತರ, ತಣ್ಣನೆಯ ನೀರು ಮತ್ತು ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ.
ಹಾಲು, ಜೇನುತುಪ್ಪ ಮತ್ತು ಅರಶಿನವನ್ನು ಒಂದು ಬಟ್ಟಲಿನಲ್ಲಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಈ ಮಿಶ್ರಣವನ್ನು ಕೂದಲಿನ ಬೇರುಗಳಿಗೆ ಸಂಪೂರ್ಣವಾಗಿ ಹಚ್ಚಿ. 30 ನಿಮಿಷಗಳ ನಂತರ, ಉಗುರು ಬೆಚ್ಚಗಿನ ನೀರು ಮತ್ತು ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಈ ಹೇರ್ ಪ್ಯಾಕ್ ಅನ್ನು ವಾರಕ್ಕೊಮ್ಮೆ ಬಳಸಬಹುದು.
ಒಂದು ಪಾತ್ರೆಯಲ್ಲಿ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ. ನಂತರ ಅದಕ್ಕೆ ಹಸಿ ಅರಿಶಿನದ ಸಣ್ಣ ತುಂಡುಗಳನ್ನು ಸೇರಿಸಿ. ಎರಡನ್ನೂ ಒಟ್ಟಿಗೆ 2 ನಿಮಿಷಗಳ ಕಾಲ ಬಿಸಿ ಮಾಡಿ. ಅರಿಶಿನವನ್ನು ಹಿಂಡಿ ಮತ್ತು ಎಲ್ಲಾ ಎಣ್ಣೆಯನ್ನು ಹೊರತೆಗೆಯಿರಿ. ಎಣ್ಣೆ ತಣ್ಣಗಾದಾಗ ತಲೆಗೆ ಹಚ್ಚಿಕೊಳ್ಳಿ. 15 ನಿಮಿಷಗಳ ನಂತರ ಶಾಂಪೂ ಬಳಸಿ ತೊಳೆಯಿರಿ. ಈ ಹೇರ್ ಪ್ಯಾಕ್ ಅನ್ನು ವಾರಕ್ಕೊಮ್ಮೆ ಹಚ್ಚಿ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)