ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !

ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.

ಬೆಂಗಳೂರು : ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟ ಹೆಚ್ಚಾಗುವುದಕ್ಕೆ ಹಲವು ಕಾರಣಗಳಿರಬಹುದು. ಕೆಂಪು ಮಾಂಸದ ಅತಿಯಾದ ಸೇವನೆ,ಸಮುದ್ರಾಹಾರ ಸೇವನೆ ಇತ್ಯಾದಿಗಳಿಂದ ಯೂರಿಕ್ ಆಸಿಡ್ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಯಾಕೆಂದರೆ ಈ ರೀತಿಯ ಆಹಾರಗಳಲ್ಲಿ ಪ್ಯೂರಿನ್ ಅಧಿಕವಾಗಿರುತ್ತದೆ. ಪ್ಯೂರಿನ್ ಗಳು ರಕ್ತದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿಸುತ್ತವೆ.ಇದಲ್ಲದೆ,ಅತಿಯಾದ ಮದ್ಯಪಾನ, ಸ್ಥೂಲಕಾಯತೆ, ನಿರ್ಜಲೀಕರಣ, ಆನುವಂಶಿಕ ಅಸ್ವಸ್ಥತೆ, ಮೂತ್ರವರ್ಧಕಗಳಂತಹ ಕೆಲವು ಔಷಧಿಗಳು ಮತ್ತು ಮೂತ್ರಪಿಂಡದ ಸಂಬಂಧಿತ ಕಾಯಿಲೆಗಳು ಯೂರಿಕ್ ಆಸಿಡ್ ಮಟ್ಟ ಹೆಚ್ಚಳಕ್ಕೆ ಕಾರಣವಾಗುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.

2 /7

ರಕ್ತದಲ್ಲಿನ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಲು,ಮೆಂತ್ಯೆ ಮತ್ತು ಅರಿಶಿನದಿಂದ ಮಾಡಿದ ಚಹಾವನ್ನು ಸೇವಿಸುವುದು ಉತ್ತಮ ಆಯ್ಕೆ. ಈ ಎರಡೂ ಮಸಾಲೆಗಳು ಅನೇಕ ವಿಧದ ಆಯುರ್ವೇದ ಗುಣಗಳ ಆಗರವಾಗಿದ್ದು, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುತ್ತದೆ.  

3 /7

ಅರಿಶಿನವು ಕರ್ಕ್ಯುಮಿನ್ ಎಂಬ ಸಕ್ರಿಯ ಸಂಯುಕ್ತವನ್ನು ಹೊಂದಿರುತ್ತದೆ, ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ.ಹಾಗಾಗಿ ಯೂರಿಕ್ ಆಸಿಡ್ ಮಟ್ಟವನ್ನು ಕೂಡಾ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 /7

ಮೆಂತ್ಯೆ ಶಕ್ತಿಶಾಲಿ ಔಷಧೀಯ ಗುಣಗಳನ್ನು ಹೊಂದಿದೆ. ಇದು ಸಪೋನಿನ್‌ಗಳು ಮತ್ತು ಫ್ಲೇವನಾಯ್ಡ್‌ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತದೆ. ಮೆಂತ್ಯೆ ಬೀಜಗಳು ಅಥವಾ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ ಉರಿಯೂತ  ಕಡಿಮೆಯಾಗಿ ಕೀಲು ನೋವನ್ನು ನಿವಾರಿಸುತ್ತದೆ.

5 /7

ಅಗತ್ಯ ಪದಾರ್ಥಗಳು ಮೆಂತ್ಯೆ ಬೀಜಗಳು - ಅರ್ಧ ಟೀಚಮಚ ಅರಿಶಿನ - 1  ಚಿಟಿಕೆ  ನೀರು - 1 ಕಪ್

6 /7

ಮೊದಲನೆಯದಾಗಿ,ಮೆಂತ್ಯೆ ಬೀಜಗಳನ್ನು ಹಾಕಿ ನೀರನ್ನು ಚೆನ್ನಾಗಿ ಕುದಿಸಿ. ನಂತರ, ಆ ನೀರನ್ನು ಫಿಲ್ಟರ್ ಮಾಡಿ ಅದಕ್ಕೆ ಒಂದು ಚಿಟಿಕೆ ಅರಿಶಿನವನ್ನು ಸೇರಿಸಿ  ಕುಡಿಯಿರಿ.ಇದು ನಿಮ್ಮ ಯೂರಿಕ್ ಆಸಿಡ್ ಮಟ್ಟವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

7 /7

ರಾತ್ರಿ ಮಲಗುವ ಮುನ್ನ  ಈ ಪಾನಿಯವನ್ನು ಸೇವಿಸಿದರೆ, ಬೆಳಿಗ್ಗೆ ಏಳುವಷ್ಟರಲ್ಲಿ ಯೂರಿಕ್ ಆಸಿಡ್ ಮಟ್ಟ ಕಡಿಮೆಯಾಗಿರುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)