ರಷ್ಯಾದ ಕ್ಷಿಪಣಿ ದಾಳಿಗೆ ತತ್ತರಿಸಿದ ಉಕ್ರೇನ್, ದಾಳಿಯ ಫೋಟೋಗಳು ಇಲ್ಲಿವೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಗುರುವಾರ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ.

ನವದೆಹಲಿ : Russia-Ukraine War: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಗುರುವಾರ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಯಾರಾದರೂ ನಮ್ಮ ನಡುವೆ ಬಂದರೆ ಅಥವಾ ನಮಗೆ ಮತ್ತು ನಮ್ಮ ಜನರಿಗೆ ಬೆದರಿಕೆ ಹಾಕಲು ಪ್ರಯತ್ನಿಸಿದರೆ, ರಷ್ಯಾ ತಕ್ಷಣವೇ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು, ಅದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ ಎಂದು ಕೂಡಾ ಎಚ್ಚರಿಸಿದ್ದಾರೆ.  ಮಾತ್ರವಲ್ಲ ಇತಿಹಾಸದಲ್ಲಿ ಹಿಂದೆಂದೂ ಅನುಭವಿಸದ ಉತ್ತರವನ್ನು ನೀಡಲಾಗುವುದು ಎಂದು ರಷ್ಯಾದ ಅಧ್ಯಕ್ಷರು ಗುಡುಗಿದ್ದಾರೆ. ಎಎಫ್‌ಪಿ ವರದಿಯ ಪ್ರಕಾರ, ಅವರು ಉಕ್ರೇನ್‌ನ ಮಿಲಿಟರಿ ಮತ್ತು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ರಷ್ಯಾದ ಸೇನೆ ತಿಳಿಸಿದೆ. ಮತ್ತೊಂದೆಡೆ, ಉಕ್ರೇನ್ ಕೂಡಾ ಹಿಂದೆ ಸರಿಯುವುದಿಲ್ಲ ಎಂದೇ ಹೇಳಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /6

ಯುದ್ಧ ಘೋಷಣೆಯ ನಂತರ ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿ ಸ್ಫೋಟದ ಸದ್ದು ಕೇಳಿಸಿದೆ. ಉಕ್ರೇನ್ ಮೇಲೆ ರಷ್ಯಾದ ದಾಳಿಯ ನಂತರ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ $ 100 ದಾಟಿದೆ.

2 /6

ಎಎಫ್‌ಪಿ ವರದಿಯ ಪ್ರಕಾರ, ಈಗ ರಷ್ಯಾದ ಸೈನ್ಯವು ಉಕ್ರೇನ್‌ನ ಮಿಲಿಟರಿ ಮತ್ತು ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಮತ್ತೊಂದೆಡೆ, ಉಕ್ರೇನ್ ಕೂಡಾ ಯುದ್ದದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ. 

3 /6

ರಷ್ಯಾದ 5 ಯುದ್ಧ ವಿಮಾನಗಳು ಮತ್ತು 1 ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್ ರಕ್ಷಣಾ ಸಚಿವಾಲಯವು ಹೇಳಿಕೊಂಡಿದೆ. 

4 /6

ಉಕ್ರೇನಿಯನ್ ರಾಜಧಾನಿ ಕೀವ್ ಮತ್ತು ರಷ್ಯಾದ ಗಡಿಯಲ್ಲಿರುವ ನಗರಗಳ ಮೇಲೆ ಮುಂಜಾನೆಯೇ  ರಷ್ಯಾ ವಾಯುದಾಳಿ ನಡೆಸಿದೆ. 

5 /6

ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿ ಹಲವಾರು ರಷ್ಯಾದ ಯುದ್ಧ ವಿಮಾನಗಳು ಕಾಣಿಸಿಕೊಂಡಿವೆ. ಇದಾದ ನಂತರ ರಷ್ಯಾ ಕೀವ್‌ನಲ್ಲಿ ಕ್ಷಿಪಣಿ ದಾಳಿ ನಡೆಸಿದೆ ಎಂಬ ಬಗ್ಗೆ ವರದಿಯಾಗಿವೆ. 

6 /6

ಉಕ್ರೇನ್‌ನಲ್ಲಿ ಯುದ್ಧದ ಪರಿಸ್ಥಿತಿಯ ನಂತರ, ಅಲ್ಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶವನ್ನು ತೊರೆಯಲು ಪ್ರಯತ್ನಿಸುತ್ತಿದ್ದಾರೆ. ಉಕ್ರೇನ್‌ನ ಬೀದಿಗಳಲ್ಲಿ ವಾಹನಗಳ ಉದ್ದನೆಯ ಸಾಲುಗಳು ಕಂಡುಬರುತ್ತಿವೆ.