ಬೆಂಗಳೂರು : ಮಾಂಸಾಹಾರವನ್ನು ವಿಟಮಿನ್ ಬಿ 12 ನ ಶ್ರೀಮಂತ ಮೂಲವೆಂದು ಪರಿಗಣಿಸಲಾಗಿದೆ. ಮಾಂಸಾಹಾರ ಸೇವನೆ ಮಾಡದಿದ್ದಲ್ಲಿ ದೇಹದಲ್ಲಿ ಪ್ರಮುಖ ಪೋಷಕಾಂಶದ ಕೊರತೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ನಿಮ್ಮ ದೇಹವು ಆಂತರಿಕವಾಗಿ ದುರ್ಬಲಗೊಳ್ಳುತ್ತದೆ. ಆದರೆ ಗಾಬರಿಯಾಗುವ ಅಗತ್ಯವಿಲ್ಲ, ವಿಟಮಿನ್ ಬಿ 12ನಲ್ಲಿ ಸಮೃದ್ದವಾಗಿರುವ ಕೆಲವು ಸಸ್ಯಾಹಾರಗಳ ಬಗೆಗಿನ ಮಾಹಿತಿ ಇಲ್ಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಸಿರು ತರಕಾರಿಗಳಲ್ಲಿ ಬ್ರೊಕೊಲಿಯನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ದೇಹಕ್ಕೆ ಅಗತ್ಯವಿರುವ ವಿಟಮಿನ್ ಬಿ12 ಅನ್ನು ಪೂರೈಸುವುದಲ್ಲದೇ, ರಕ್ತದಲ್ಲಿನ ಹಿಮೋಗ್ಲೋಬಿನ್ ಕೊರತೆಯನ್ನು ಸಹ ನೀಗಿಸುತ್ತದೆ.
ಅನೇಕ ಜನರು ಬೆಳಗಿನ ಉಪಾಹಾರದಲ್ಲಿ ಓಟ್ಸ್ ತಿನ್ನಲು ಇಷ್ಟಪಡುತ್ತಾರೆ. ಇದು ತೂಕ ನಷ್ಟ ಮಾಡಿಕೊಳ್ಳುವುದಕ್ಕೆ ಕೂಡಾ ಸಹಾಯ ಮಾಡುತ್ತದೆ. ಅಲ್ಲದೆ ಇದು ವಿಟಮಿನ್ ಬಿ 12 ಪೋಷಕಾಂಶವನ್ನು ದೇಹಕ್ಕೆ ನೀಡುತ್ತದೆ.
ಹಾಲು ಮತ್ತು ಅದರ ಉತ್ಪನ್ನಗಳಲ್ಲಿ ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಜೊತೆಗೆ ಇದು ವಿಟಮಿನ್ ಬಿ 12 ಅನ್ನು ಕೂಡಾ ಪೂರೈಸುತ್ತದೆ.
ಮಶ್ರೂಮ್ ದುಬಾರಿ ಆಹಾರವಾಗಬಹುದು. ಆದರೆ ಇದು ಆರೋಗ್ಯಕ್ಕೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ವಿಟಮಿನ್ ಬಿ12 ಜೊತೆಗೆ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪ್ರೊಟೀನ್ ಅಂಶ ಕೂಡಾ ಇದರಲ್ಲಿ ಹೇರಳವಾಗಿದೆ.
ಪ್ರೋಟೀನ್ ಅವಶ್ಯಕತೆಗಳನ್ನು ಸಾಮಾನ್ಯವಾಗಿ ಸೋಯಾಬೀನ್ ಮೂಲಕ ಪೂರೈಸಲಾಗುತ್ತದೆ. ಇದು ದೇಹಕ್ಕೆ ವಿಟಮಿನ್ ಬಿ 12 ಅನ್ನು ಸಹಾ ನೀಡುತ್ತದೆ. ಇದರ ಜೊತೆಗೆ ಸೋಯಾ ಹಾಲು ಮತ್ತು ಸೋಯಾ ಪನೀರ್ ಕೂಡಾ ಸೇವಿಸಬಹುದು. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)