Venus Mercury Transit 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹವೂ ಕೂಡ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇನ್ನೂ 24 ಗಂಟೆಗಳಲ್ಲಿ ಎಂದರೆ ಮಾರ್ಚ್ 07ರಂದು ಎರಡು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಹೊಂದಲಿವೆ. ನಾಳೆ (ಮಾರ್ಚ್ 07) ಸಂಪತ್ತು, ಸಮೃದ್ಧಿ, ಐಷಾರಾಮಿ ಜೀವನವನ್ನು ಪ್ರತಿಬಿಂಬಿಸುವ ಶುಕ್ರನು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮತ್ತೊಂದೆಡೆ ಗ್ರಾಹಕರ ರಾಜಕುಮಾರ ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ.
ಶುಕ್ರ ಬುಧರ ರಾಶಿ ಪರಿವರ್ತನೆಯ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ನಾಲ್ಕು ರಾಶಿಯವರಿಗೆ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
ಮಾರ್ಚ್ ತಿಂಗಳಿನಲ್ಲಿ ಗ್ರಹಗಳ ರಾಶಿ ಬದಲಾವಣೆಯು ಕರ್ಕಾಟಕ ರಾಶಿಯವರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ವೇಳೆ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮಿಷ್ಟದ ಸ್ಥಳಕ್ಕೆ ವರ್ಗಾವಣೆ, ಬಡ್ತಿ ಯೋಗವಿದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ.
ಶುಕ್ರ-ಬುಧ ಗ್ರಹಗಳ ರಾಶಿಚಕ್ರ ಬದಲಾವಣೆಯು ಸಿಂಹ ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ. ಈ ಸಂದರ್ಭದಲ್ಲಿ ನಿಮ್ಮ ಸಂಬಂಧಗಳಲ್ಲಿ ಎದುರಾಗಿದ್ದ ಅಡೆತಡೆಗಳು ದೂರವಾಗಿ, ಮಧುರತೆ ಮೂಡಲಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಸುಸಮಯ.
ಬುಧ ಶುಕ್ರರ ರಾಶಿ ಪರಿವರ್ತನೆ ವೃಶ್ಚಿಕ ರಾಶಿಯ ಜನರಿಗೆ ವೃತ್ತಿ ಬದುಕಿನಲ್ಲಿ ಯಶಸ್ಸನ್ನು ನೀಡಲಿದೆ. ಆರ್ಥಿಕ ಲಾಭದಿಂದಾಗಿ ಹಣಕಾಸಿನ ಸ್ಥಿತಿ ಮೊದಲಿಗಿಂತ ಉತ್ತಮಗೊಳ್ಳಲಿದೆ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳಿಂದ ಮೆಚ್ಚುಗೆ, ಬೆಂಬಲ ದೊರೆಯಲಿದೆ.
ಮಾರ್ಚ್ ಮಾಸದಲ್ಲಿ ಶುಕ್ರ ಬುಧರ ಸಂಚಾರವು ಮೀನ ರಾಶಿಯ ವ್ಯಾಪಾರಸ್ಥರಿಗೆ ವಿಶೇಷ ಲಾಭವನ್ನು ತರಲಿದೆ. ಹೂಡಿಕೆಯಿಂದ ಬಂಪರ್ ಲಾಭವನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಮೂಡಿದ್ದ ಬಿರುಕುಗಳು ಸರಿಹೋಗಲಿದ್ದು, ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.