ICC WorldCup 2023: ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಹಿಟ್‍ಮ್ಯಾನ್ ರೋಹಿತ್ ಶರ್ಮಾ..!

ICC World Cup 2023: ರೋಹಿತ್ ಶರ್ಮಾ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಹೊಸದೊಂದು ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅವರು ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿಯೇ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.   

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತಿದೆ. ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸುವ ಮೂಲಕ ರೋಹಿತ್ ಶರ್ಮಾ ಪಡೆ ಸತತ 8 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಜೇಯವಾಗಿದೆ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ. ನವೆಂಬರ್ 12ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ ವಿರುದ್ಧ ಭಾರತ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ.

ಹಿಟ್‍ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ವಿಶ್ವದಾಖಲೆ ಮಾಡಬಹುದು. ರೋಹಿತ್ ಶರ್ಮಾ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಹೊಸದೊಂದು ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅವರು ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿಯೇ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /4

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 55ಕ್ಕೂ ಅಧಿಕ ಸರಾಸರಿಯೊಂದಿಗೆ 442 ರನ್ ಗಳಿಸಿದ್ದಾರೆ. ಅವರು ಒಂದು ಶತಕವನ್ನೂ ಗಳಿಸಿದ್ದಾರೆ. ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ 5ನೇ ಸ್ಥಾನದಲ್ಲಿದ್ದಾರೆ.

2 /4

ರೋಹಿತ್ ಶರ್ಮಾ ವಿಶ್ವಕಪ್ ಇತಿಹಾಸದಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಆಗಬಹುದು. ಅವರು ಈ ದಾಖಲೆ ನಿರ್ಮಿಸಲು ಕೇವಲ 5 ಸಿಕ್ಸರ್‌ಗಳ ಅಂತರದಲ್ಲಿದ್ದಾರೆ. ಈ ಪಟ್ಟಿಯ ಅಗ್ರಸ್ಥಾನದಲ್ಲಿ ವೆಸ್ಟ್ ಇಂಡೀಸ್‍ನ ದಂತಕಥೆ ಕ್ರಿಸ್ ಗೇಲ್ ಇದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ 49 ಅವರು ಸಿಕ್ಸರ್‌ಗಳನ್ನು ಬಾರಿಸಿದ್ದರೆ, ರೋಹಿತ್ 45 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.   

3 /4

ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಅದ್ಭುತ ಸಾಧನೆ ಮಾಡುವ ಸಾಧ್ಯತೆಯಿದೆ. ರೋಹಿತ್ ಸ್ಫೋಟಕ ಆಟದ ಮುಂದೆ 5 ಸಿಕ್ಸರ್‌ಗಳನ್ನು ಬಾರಿಸುವುದು ದೊಡ್ಡ ವಿಷಯವಲ್ಲ.

4 /4

ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಒಂದೇ ಒಂದು ಐಸಿಸಿ ಟ್ರೋಫಿ ಗೆದ್ದಿಲ್ಲ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಕೊನೆಯ ಬಾರಿ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿದ್ದರೆ, 2011ರಲ್ಲಿ ತವರು ನೆಲದಲ್ಲಿ ಭಾರತ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಈ ಬಾರಿ ಟೀಂ ಇಂಡಿಯಾದ ಫಾರ್ಮ್ ನೋಡಿದ್ರೆ ಭಾರತ ತಂಡ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.