Surya-Mangal-Budh Yuti In Scorpio 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಂಗಳನ ಅಧಿಪತ್ಯದ ರಾಶಿಯಾಗಿರುವ ವೃಶ್ಚಿಕ ರಾಶಿಯಲ್ಲಿ ತ್ರಿಗ್ರಹಿಯೋಗ ರೂಪುಗೊಳ್ಳಲಿದೆ. ಇದರಿಂದ ಧನ ಕುಬೇರನ ಕೃಪೆಯಿಂದ ಮೂರು ರಾಶಿಗಳ ಜನರ ಬ್ಯಾಂಕ್ ಬ್ಯಾಲೆನ್ಸ್ ಅಪಾರ ಹೆಚ್ಚಾಗಲಿದೆ. Spiritual News In Kannada
ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಒಂದೇ ರಾಶಿಯಲ್ಲಿ ಹಲವು ಗ್ರಹಗಳು ಸಾಗಿ ಬರುವುದರಿಂದ, ಅಲ್ಲಿ ಗ್ರಹಗಳ ಮೈತ್ರಿ ನೆರವೇರಿ ಶುಭ ಅಶುಭ ಯೋಗಗಳು ನಿರ್ಮಾಣಗೊಳ್ಳುತ್ತವೆ. ಪ್ರಸ್ತುತ ಮಂಗಳನ ಅಧಿಪತ್ಯದ ರಾಶಿಯಾಗಿರುವ ವೃಶ್ಚಿಕ ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿದ್ದು, ಇದು ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದ ಮೇಲೆ ಭಾರಿ ಪ್ರಭಾವವನ್ನು ಬೀರಲಿದೆ. ನವೆಂಬರ್ 17, 2023 ರಂದು ಈ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಏಕೆಂದರೆ ಈ ದಿನ ಗ್ರಹಗಳ ರಾಜ ಸೂರ್ಯದೇವ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ, ಮಂಗಳ ಹಾಗೂ ಬುಧ ಈಗಾಗಲೇ ವೃಶ್ಚಿಕ ರಾಶಿಯಲ್ಲಿರುವ ಕಾರಣ ಅಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಹೀಗಿರುವಾಗ ಈ ಯೋಗ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಇದರಿಂದ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಉಂಟಾಗುವ ಸಾಧ್ಯತೆ ಇದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Surya-Mangal-Budh Yuti In Scorpio 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಂಗಳನ ಅಧಿಪತ್ಯದ ರಾಶಿಯಾಗಿರುವ ವೃಶ್ಚಿಕ ರಾಶಿಯಲ್ಲಿ ತ್ರಿಗ್ರಹಿಯೋಗ ರೂಪುಗೊಳ್ಳಲಿದೆ. ಇದರಿಂದ ಧನ ಕುಬೇರನ ಕೃಪೆಯಿಂದ ಮೂರು ರಾಶಿಗಳ ಜನರ ಬ್ಯಾಂಕ್ ಬ್ಯಾಲೆನ್ಸ್ ಅಪಾರ ಹೆಚ್ಚಾಗಲಿದೆ.
ತುಲಾ ರಾಶಿ: ನಿಮ್ಮ ಜಾತಕದ ಧನ ಭಾವದಲ್ಲಿ ಈ ಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಿಸಲಿದೆ. ನಿಮಗೆ ಅಪಾರ ಧನಪ್ರಾಪ್ತಿಯಾಗಲಿದ್ದು ನಿಮ್ಮ ಜೀವನದಲ್ಲಿ ಮಹತ್ವಪೂರ್ಣ ಪರಿವರ್ತನೆ ಸಂಭವಿರುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಬರಬೇಕಾದ ಹಣ ಎಲ್ಲಾದರು ಸಿಲುಕಿಕೊಂಡಿದ್ದರೆ, ಅದು ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಮಾರ್ಕೆಟಿಂಗ್, ಮಾಧ್ಯಮ, ಶಿಕ್ಷಣ, ಸಂವಹನ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಯೋಗ ಅದ್ಭುತ ಸಾಬೀತಾಗಲಿದೆ.
ಸಿಂಹ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿವೆ. ರಿಯಲ್ ಎಸ್ಟೇಟ್, ಆಸ್ತಿಪಾಸ್ತಿ, ಭೂಮಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ತೊಡಗಿರುವ ಜನರಿಗೆ ಈ ಯೋಗ ಉತ್ತಮವಾಗಿರಲಿದೆ. ತ್ರಿಗ್ರಹಿ ಯೋಗದ ದೃಷ್ಟಿ ನಿಮ್ಮ ಕರ್ಮ ಭಾವದ ಮೇಲೆ ಬೀಳುತ್ತಿರುವ ಕಾರಣ ನೌಕರ ವರ್ಗದ ಜನರಿಗೆ ಬಡ್ತಿ ಭಾಗ್ಯ ಹಾಗೂ ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶಗಳು ಒದಗಿಬರಲಿವೆ.
ಮಕರ ರಾಶಿ: ಈ ಯೋಗ ನಿಮ್ಮ ಜಾತಕದ ಆದಾಯ ಹಾಗೂ ಲಾಭ ಸ್ಥಾನದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ. ಆದಾಯದ ಹೊಸ ಹೊಸ ಸಾಧನಗಳು ನಿರ್ಮಾಣಗೊಳ್ಳಲಿವೆ ಮತ್ತು ಅದರಿಂದ ನಿಮಗೆ ಅಪಾರ ಆರ್ಥಿಕ ಲಾಭ ಸಂಭವಿಸುವ ಸಾಧ್ಯತೆ ಇದೆ. ಆಮದು ಮತ್ತು ರಫ್ತು ವ್ಯವಹಾರದಲ್ಲಿ ತೊಡಗಿರುವವರಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ . ಹೂಡಿಕೆಗಾಗಿ ಯೋಚಿಸುತ್ತಿದ್ದ, ನೀವು ಮಾಡುವ ಹೂಡಿಕೆಗೆ ಉತ್ತಮ ಲಾಭವನ್ನು ನೀವು ಪಡೆಯಬಹುದು.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)