Actor Arvind swamy on Thalapathy Vijay: ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ತಮಿಳುಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಮೂಲಕ ರಾಜಕೀಯದಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಇದೇ ಸಂದರ್ಭದಲ್ಲಿ ನಟ ಅರವಿಂದ್ ಸ್ವಾಮಿ ಅವರು ಹೇಳಿಕೆ ನೀಡಿರುವ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಇತ್ತೀಚೆಗೆಯಷ್ಟೇ ತಮಿಳು ನಟ ದಳಪತಿ ವಿಜಯ್ ಅವರು, ತಮಿಳುಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ನಟ ಅರವಿಂದ್ ಸ್ವಾಮಿ ಅವರು ಹೇಳಿಕೆ ನೀಡಿರುವ ಹಳೆಯ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
ಆ ವಿಡಿಯೋದಲ್ಲಿ “ನಾನು ರಜನಿಕಾಂತ್, ಕಮಲ್ ಹಾಸನ್, ವಿಜಯ್ ಅವರಂತಹ ನಟರ ದೊಡ್ಡ ಅಭಿಮಾನಿ. ಆದರೆ ಅವರಿಗೆ ಮತ ಹಾಕುವುದಿಲ್ಲ” ಎಂದು ಸ್ವಾಮಿ ಹೇಳಿದ್ದಾರೆ.
“ಈ ಸೆಲೆಬ್ರಿಟಿಗಳ ರಾಜಕೀಯ ಪ್ರವೇಶದಿಂದ ಏನಾದರೂ ಬದಲಾವಣೆ ಆಗುವುದೇ? ಅವರು ಬದಲಾವಣೆಯ ಭರವಸೆ ನೀಡಿದರೆ, ಆ ಭರವಸೆಗಳ ಬಗ್ಗೆ ವಿವರವಾಗಿ ತಿಳಿಯಲು ಬಯಸುತ್ತೇನೆ. ಅವರೆಲ್ಲಾ ಉತ್ತಮ ಉದ್ದೇಶಗಳನ್ನು ಹೊಂದಿದ್ದಾರೆ. ಆದರೆ ದೇಶಗಳನ್ನು ಆಳುವ ಮತ್ತು ಅಗಾಧ ಯೋಜನೆಗಳನ್ನು ಸಾಧಿಸುವ ಸಾಮರ್ಥ್ಯ ಹೊಂದಿದ್ದಾರೆಯೇ ಅಥವಾ ಇಲ್ಲವೇ ಎಂಬ ಅನುಮಾನ ಇದೆ” ಎಂದಿದ್ದಾರೆ
"ಒಬ್ಬ ನಟನಿಗೆ ಒಳ್ಳೆಯ ಸರ್ಕಾರದ ನೀತಿಗಳನ್ನು ನಿರ್ವಹಿಸುವ ಅರ್ಹತೆ ಇದೆ ಎಂದು ನೀವು ಹೇಗೆ ನಂಬುತ್ತೀರಿ" ಎಂದು ಸ್ವಾಮಿ ಸಂದರ್ಶನದಲ್ಲಿ ಹೇಳಿದ್ದಾರೆ.
ವಿಜಯ್ ಅವರು ತಮ್ಮ ಪಕ್ಷ 2024 ರ ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ 2026 ರ ತಮಿಳುನಾಡು ಚುನಾವಣೆಯಲ್ಲಿ ಕಣಕ್ಕಿಳಿಯುವುದು ಖಚಿತ ಎಂದಿದ್ದಾರೆ.
ಅಧಿಕೃತ ಹೇಳಿಕೆಯಲ್ಲಿ ವಿಜಯ್ ಅವರು ಪಕ್ಷದ ಹೆಸರನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. "