ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ವಿರಾಟ್ ಕೊಹ್ಲಿಯ ವಿಶ್ವದಾಖಲೆಗಳಿವು

Virat Kohli Unbreakable Records in Kannada: ಭಾರತ ತಂಡದ ಏಸ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 35ನೇ ವರ್ಷಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ, ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಮ್ಮ 49ನೇ ಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ನಾವಿಂದು ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ವಿರಾಟ್ ಕೊಹ್ಲಿಯ ವಿಶ್ವದಾಖಲೆಗಳ ಬಗ್ಗೆ ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.

2 /8

ವಿರಾಟ್ 18 ಆಗಸ್ಟ್ 2008 ರಂದು ತಮ್ಮ 19 ನೇ ವಯಸ್ಸಿನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಪಂದ್ಯದ ಆರಂಭದ ವೇಳೆ ವಿರಾಟ್ 22 ಎಸೆತಗಳಲ್ಲಿ 12 ರನ್ ಗಳಿಸಿದ್ದರು. ಆದರೆ ಇಂದು ವಿರಾಟ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂದೇ ಪರಿಗಣಿಸಲ್ಪಟ್ಟಿದ್ದಾರೆ.

3 /8

ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅವರು 25 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲದೆ, ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೂ ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್‌’ನಲ್ಲಿ ವೇಗವಾಗಿ 10 ಸಾವಿರ ರನ್ ಗಳಿಸಿದ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. ಈ ಸಾಧನೆ ಮಾಡಲು 205 ಇನ್ನಿಂಗ್ಸ್‌’ಗಳನ್ನು ತೆಗೆದುಕೊಂಡಿದ್ದರು.

4 /8

ವಿಶ್ವ ಕ್ರಿಕೆಟ್‌ನಲ್ಲಿ ಸತತ ಮೂರು ಕ್ಯಾಲೆಂಡರ್ ವರ್ಷಗಳಲ್ಲಿ 2500+ ರನ್ ಗಳಿಸಿದ ಏಕೈಕ ಆಟಗಾರ ವಿರಾಟ್ ಕೊಹ್ಲಿ. ಅಷ್ಟೇ ಅಲ್ಲದೆ, ಯಾವುದೇ ಒಂದು ತಂಡದ ವಿರುದ್ಧ ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆ ವಿರಾಟ್  ಹೆಸರಿನಲ್ಲಿದೆ. ಅಂದಹಾಗೆ ಶ್ರೀಲಂಕಾ ವಿರುದ್ಧ 10 ಶತಕಗಳನ್ನು ಕೊಹ್ಲಿ ಬಾರಿಸಿದ್ದಾರೆ.

5 /8

ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಗರಿಷ್ಠ 20 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ದಾಖಲೆಯನ್ನೂ ವಿರಾಟ್ ಕೊಹ್ಲಿ ಹೊಂದಿದ್ದಾರೆ. ಇನ್ನು ಯಾವುದೇ ದ್ವಿಪಕ್ಷೀಯ ODI ಸರಣಿಯಲ್ಲಿ ಅತಿ ಹೆಚ್ಚು 558 ರನ್ ಗಳಿಸಿದ ದಾಖಲೆಯನ್ನು ವಿರಾಟ್ ಹೊಂದಿದ್ದಾರೆ.

6 /8

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌’ನಲ್ಲಿ ಗರಿಷ್ಠ 38 ಅರ್ಧಶತಕಗಳನ್ನು ಗಳಿಸಿದ್ದಾರೆ. ಜೊತೆಗೆ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಗರಿಷ್ಠ 15 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ.

7 /8

ಅಂತಾರಾಷ್ಟ್ರೀಯ ಟಿ20ಯಲ್ಲಿ ಶೂನ್ಯ ಎಸೆತದಲ್ಲಿ ವಿಕೆಟ್ ಪಡೆದ ಏಕೈಕ ಬೌಲರ್ ವಿರಾಟ್ ಕೊಹ್ಲಿ. ಅವರ ವೃತ್ತಿಜೀವನದ ಮೊದಲ ಎಸೆತ ವೈಡ್ ಆಗಿದ್ದು, ಅದರಲ್ಲಿ ಕೆವಿನ್ ಪೀಟರ್ಸನ್ ಸ್ಟಂಪ್ ಔಟ್ ಆಗಿದ್ದರು. ಇದರ ಜೊತೆಗೆ 348 ಇನ್ನಿಂಗ್ಸ್‌ಗಳಲ್ಲಿ ಕನಿಷ್ಠ 50 ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಕೂಡ ಇವರೇ.

8 /8

ವಿರಾಟ್ ಕೊಹ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 11 ಇನ್ನಿಂಗ್ಸ್‌’ಗಳಲ್ಲಿ 1000 ODI ರನ್ ಗಳಿಸಿದ ವೇಗದ ಕ್ರಿಕೆಟಿಗ. ಇನ್ನು ಟೆಸ್ಟ್‌ನಲ್ಲಿ ನಾಯಕನಾಗಿ 4,000 ರನ್‌’ಗಳನ್ನು ವೇಗವಾಗಿ ತಲುಪಿದ ಬ್ಯಾಟ್ಸ್‌ಮನ್ ವಿರಾಟ್. ಕೇವಲ 65 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದರು. ಇನ್ನು ನಿರ್ದಿಷ್ಟ ಕ್ಯಾಲೆಂಡರ್ ವರ್ಷದಲ್ಲಿ 6 ODI ಶತಕಗಳನ್ನು ಗಳಿಸಿದ ವಿಶ್ವದ ಏಕೈಕ ನಾಯಕ ವಿರಾಟ್. ಇದರ ಜೊತೆಗೆ ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ 10 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ವಿರಾಟ್ ಮಾತ್ರ 50+ ಸರಾಸರಿ ಹೊಂದಿದ್ದರು.