Virat Kohli: ಇನ್ನೇನು ಐಪಿಎಲ್ ಹವಾ ಶುರುವಾಗಲಿದೆ. ಈಗಾಗಲೇ ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಭರ್ಜರಿ ಮೊತ್ತಕ್ಕೆ ಆಟಗಾರರನ್ನು ಖರೀದಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸದ್ದು ಮಾಡಿತ್ತು. ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದು, ಆರ್ ಸಿ ಬಿಗೆ ಮತ್ತೊಮ್ಮೆ ವಿರಾಟ್ ಕ್ಯಾಪ್ಟನ್ ಆಗುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸಾಮಾನ್ಯವಾಗಿ ಐಪಿಎಲ್ ಶುರುವಾದಾಗಲೆಲ್ಲಾ, ಈ ಸಲ ಕಪ್ ನಮ್ದೇ ಎಂದು ಹೇಳುತ್ತಾ ಅಭಿಯಾನ ಶುರು ಮಾಡುವ ಆರ್ ಸಿ ಬಿ ಫೈನಲ್ ಪ್ರವೇಶಿಸದೇ 7 ವರ್ಷಗಳೇ ಕಳೆದಿವೆ.
ಅಂದಹಾಗೆ ಇದೀಗ ಫಾಪ್ ಡು ಪ್ಲೆಸಿಸ್ ನಾಯಕತ್ವದ ಬಗ್ಗೆ ಹಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಆರ್ ಸಿ ಬಿ ಮ್ಯಾನೇಜ್ಮೆಂಟ್ ವಿರಾಟ್ ಕೊಹ್ಲಿ ಮತ್ತೆ ತಂಡದ ನಾಯಕನನ್ನಾಗಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಈ ನಿರ್ಧಾರಕ್ಕೆ ಪ್ರಮುಖ ಕಾರಣ ಏನೆಂದರೆ, ಡುಪ್ಲೆಸಿಸ್ ಕಳೆದ ಎರಡು ಸೀಸನ್’ಗಳಿಂದ ಆರ್ಸಿಬಿ ತಂಡವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಇವರ ನಾಯಕತ್ವದಲ್ಲಿ ಒಟ್ಟು 27 ಪಂದ್ಯಗಳನ್ನಾಡಿದ ಆರ್ಸಿಬಿ, 14 ಪಂದ್ಯಗಳಲ್ಲಿ ಗೆದ್ದಿದ್ದು, 13 ಪಂದ್ಯಗಳಲ್ಲಿ ಸೋತಿದೆ.
ಇನ್ನು ಡುಪ್ಲೆಸಿಸ್ ನಾಯಕತ್ವದ ಬಗ್ಗೆ ಭಾರೀ ಭರವಸೆ ಹೊಂದಿದ್ದ, ನಿರ್ವಹಣಾ ಮಂಡಳಿ, ಇದೀಗ ಅಸಮಾಧಾನಗೊಂಡಿದೆ. ಅಷ್ಟೇ ಅಲ್ಲದೆ, ವಿರಾಟ್ ಕೊಹ್ಲಿಗೆ ನಾಯಕತ್ವ ನೀಡುವ ಚಿಂತನೆಯಲ್ಲಿದೆಯಂತೆ.
ಈ ಹಿಂದೆ ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿದ್ದಾಗ, RCB 3 ಬಾರಿ ಪ್ಲೇಆಫ್ಸ್ ಪ್ರವೇಶಿಸಿತ್ತು. ಜೊತೆಗೆ ಒಂದು ಬಾರಿ ಫೈನಲ್ ಪಂದ್ಯವನ್ನಾಡಿತ್ತು. ಆದರೆ ಫಾಫ್ ಡುಪ್ಲೆಸಿಸ್’ಗೆ ಇದ್ಯಾವುದೂ ಸಾಧ್ಯವಾಗಿರಲಿಲ್ಲ. ಜೊತೆಗೆ ಡುಪ್ಲೆಸಿಸ್ ನಿವೃತ್ತಿಯ ಅಂಚಿನಲ್ಲಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ಐಪಿಎಲ್ನಲ್ಲಿ ಮತ್ತೆ ವಿರಾಟ್ ಕೊಹ್ಲಿ ನಾಯಕತ್ವ ಹವಾ ಕಾಣಬಹುದೇ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.