ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ವಿಧಾನಸೌಧದ ಎದುರು ಪ್ರಮಾಣವಚನಕ್ಕೆ ವೇದಿಕೆ ಸಜ್ಜಾಗಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ವಿಧಾನಸೌಧದ ಎದುರು ಪ್ರಮಾಣವಚನಕ್ಕೆ ವೇದಿಕೆ ಸಜ್ಜಾಗಿದೆ.
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಕಾರ್ಯಕ್ರಮದಲ್ಲಿ ವಿವಿಐಪಿಗಳಿಗಾಗಿ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳಿಗಾಗಿ 3000 ವಿಶೇಷ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ 80,000 ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಈ ಫೋಟೋಗಳನ್ನು ANI ನಿಂದ ತೆಗೆದುಕೊಳ್ಳಲಾಗಿದೆ