Weight Loss: ತೂಕ ಇಳಿಕೆಗೆ ಈ ರೀತಿ ಸೋರೆಕಾಯಿಯನ್ನು ಸೇವಿಸಿ!

Health Tips: ಸೋರೆಕಾಯಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತೊಂದೆಡೆ, ಸೋರೆಕಾಯಿ ರಸವನ್ನು ಕುಡಿಯುವುದರಿಂದ ನೀವು ಅನೇಕ ಕಾಯಿಲೆಗಳಿಂದ ಮುಕ್ತರಾಗುತ್ತೀರಿ.

Health Tips: ಸೋರೆಕಾಯಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತೊಂದೆಡೆ, ಸೋರೆಕಾಯಿ ರಸವನ್ನು ಕುಡಿಯುವುದರಿಂದ ನೀವು ಅನೇಕ ಕಾಯಿಲೆಗಳಿಂದ ಮುಕ್ತರಾಗುತ್ತೀರಿ. ಇಂತಹ  ಪರಿಸ್ಥಿತಿಯಲ್ಲಿ, ಹೆಚ್ಚುತ್ತಿರುವ ತೂಕದಿಂದ ನೀವು ಕೂಡ ತೊಂದರೆಗೊಳಗಾಗಿದ್ದರೆ, ನೀವು ಸೋರೆಕಾಯಿಯನ್ನು ಸೇವಿಸಬೇಕು. ಏಕೆಂದರೆ ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ತುಂಬಾ ಸಹಕಾರಿ ಎಂದು ಸಾಬೀತಾಗುತ್ತದೆ. 

 

ಇದನ್ನೂ ಓದಿ-Circadian Rhythm Fasting: ಸ್ಥೂಲಕಾಯ ಸಮಸ್ಯೆಯಿಂದ ತೊಂದರೆಗೀಡಾಗಿದ್ದೀರಾ, ಈ ವಿಧಾನದಿಂದ ತೂಕ ಇಳಿಕೆ ಮಾಡಿ ನೋಡಿ!

 

ಇದನ್ನೂ ನೋಡಿ-

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

1. ಸೋರೆಕಾಯಿ ನೀರು ತೂಕವನ್ನು ಇಳಿಕೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಇದನ್ನು ತಿನ್ನುವುದರಿಂದ ದೇಹವು ನೈಸರ್ಗಿಕವಾಗಿ ಡಿಟಾಕ್ಸ್ ಆಗುತ್ತದೆ. ಅದಕ್ಕಾಗಿಯೇ ನೀವು ಪ್ರತಿದಿನ ಸೋರೆಕಾಯಿ ನೀರನ್ನು ಕುಡಿಯಬಹುದು.  

2 /5

2. ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸೋರೆಕಾಯಿ ತರಕಾರಿಯನ್ನು ಖಂಡಿತವಾಗಿ ಸೇವಿಸಿ. ಇದು ಹಸಿವನ್ನು ಕಡಿಮೆ ಮಾಡುವ ಫೈಬರ್ ಅನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ ನೀವು ಅತಿಯಾಗಿ ತಿನ್ನುವುದರಿಂದ ಪಾರಾಗುವಿರಿ.  

3 /5

3. ಸೋರೆಕಾಯಿ ಸೂಪ್ ತೂಕ ಕಡಿಮೆ ಮಾಡಲು ಸಹಕಾರಿಯಾಗಿದೆ. ಅಷ್ಟೇ ಯಾಕೆ ಇದನ್ನು ತಯಾರಿಸುವುದು ಕೂಡ ತುಂಬಾ ಸುಲಭವಾಗಿದೆ. ಇದನ್ನು ಮಾಡಲು, ಸೋರೆಕಾಯಿಯನ್ನು ನೀರಿನಲ್ಲಿ ಕುದಿಸಿ ಮತ್ತು ಸೂಪ್ ಮಾಡಿ ಸೇವಿಸಿದರೆ, ಇದು ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.  

4 /5

4. ಅನೇಕ ಜನರು ಸೋರೆಕಾಯಿಯನ್ನು ತಿಂದ ನಂತರ ಅದರ ಸಿಪ್ಪೆಯನ್ನು ಎಸೆಯುತ್ತಾರೆ, ಆದರೆ ಸೋರೆಕಾಯಿ ಸಿಪ್ಪೆಗಳು ಕೂಡ ನಿಮ್ಮ ತೂಕವನ್ನು ಇಳಿಕೆ ಮಾಡಲು ಸಹಾಯ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಏಕೆಂದರೆ ಇದರಲ್ಲಿ ಹೇರಳ ಪ್ರಮಾಣದಲ್ಲಿ ನಾರಿನಂಶವಿದೆ.  

5 /5

5. ಸೋರೆಕಾಯಿ ಜ್ಯೂಸ್ ದೇಹಕ್ಕೆ ತುಂಬಾ ಒಳ್ಳೆಯದು. ಏಕೆಂದರೆ ಸೋರೆಕಾಯಿಯ ರಸವು ನಿಮ್ಮ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮತ್ತು ಅದನ್ನು ಸೇವಿಸುವ ಮೂಲಕ ನಿಮ್ಮ ತೂಕವನ್ನು ನೀವು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)