India tour of West Indies 2023: ಚೇತೇಶ್ವರ ಪೂಜಾರ ಬದಲಿಗೆ ಟಾಪ್ 5 ಆಟಗಾರರು

India tour of West Indies 2023: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್‌ ಪಂದ್ಯದಲ್ಲಿ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. 

ನವದೆಹಲಿ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತೀಯ ಟೆಸ್ಟ್ ತಂಡದಿಂದ ಚೇತೇಶ್ವರ ಪೂಜಾರ ಅವರನ್ನು ಕೈಬಿಡಲಾಗಿದೆ. 103 ಟೆಸ್ಟ್‌ಗಳ ಅನುಭವಿ ಮತ್ತು ರೆಡ್-ಬಾಲ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರನನ್ನು ಕೈಬಿಟ್ಟಿದ್ದಕ್ಕೆ ಹಿರಿಯ ಕ್ರಿಕೆಟಿಗರಿಂದ ಹಿಡಿದ ಅಭಿಮಾನಿಗಳವರೆಗೂ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.  

ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್‌ ಪಂದ್ಯದಲ್ಲಿ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. 3ನೇ ಕ್ರಮಾಂಕದ ಅನುಭವಿ ಬ್ಯಾಟರ್‌ ಚೇತೇಶ್ವರ್‌ ಪೂಜಾರ ಸಹ ಕಳಪೆ ಪ್ರದರ್ಶನದ ಕಾರಣ ಟೀಕೆಗೆ ಗುರಿಯಾಗಿದ್ದರು. ಇದೀಗ ಅವರನ್ನು ಕೆರಿಬಿಯನ್ ಪ್ರವಾಸದಿಂದ ಕೈಬಿಡಲಾಗಿದೆ. ಪೂಜಾರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಐವರು ಆಟಗಾರರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

21ರ ಹರೆಯದ ಯಶಸ್ವಿ ಜೈಸ್ವಾಲ್ ಟೆಸ್ಟ್ ಮಾದರಿಯಲ್ಲಿ ಪೂಜಾರ ಸ್ಥಾನ ತುಂಬಬಲ್ಲ ಸೂಕ್ತ ಆಟಗಾರ. 2023ರ ಐಪಿಎಲ್ ಟೂರ್ನಿಯಲ್ಲಿ ಜೈಸ್ವಾಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸ್ಟ್ಯಾಂಡ್‌ಬೈ ಆಟಗಾರನಾಗಿ ಜೈಸ್ವಾಲ್ ಭಾರತದ ತಂಡದೊಂದಿಗೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು.

2 /5

ರುತುರಾಜ್ ಗಾಯಕವಾಡ ಕೂಡ ಪೂಜಾರ ಅವರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ. 26 ವರ್ಷ ವಯಸ್ಸಿನ ರುತುರಾಜ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ODI ಕ್ಯಾಪ್ ತೊಟ್ಟಿದ್ದರು. ದೇಶೀಯ ಮಟ್ಟದಲ್ಲಿ 28 ಪ್ರಥಮ ದರ್ಜೆ ಪಂದ್ಯಗಳಲ್ಲಿ 6 ಶತಕ ಗಳಿಸಿರುವ ಅವರು 3ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರ.

3 /5

ಅಜಿಂಕ್ಯ ರಹಾನೆ ಇತ್ತೀಚಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಎರಡೂ ಇನ್ನಿಂಗ್ಸ್‍ಗಳಲ್ಲಿ ಕ್ರಮವಾಗಿ 89 ಮತ್ತು 46 ರನ್ ಗಳಿಸುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದರು. ಇವರು ಸಹ ಪೂಜಾರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರನಾಗಿದ್ದಾರೆ.

4 /5

ಶುಭಮನ್ ಗಿಲ್ ಪ್ರತಿಭೆಯ ಬಗ್ಗೆ ಯಾವುದೇ ರೀತಿಯ ಸಂದೇಹವಿಲ್ಲ. ಈ ಕ್ಲಾಸಿ ಬಲಗೈ ಆಟಗಾರ 16 ಟೆಸ್ಟ್‌ಗಳಲ್ಲಿ 2 ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 32.89 ಸರಾಸರಿಯಲ್ಲಿ ರನ್ ಗಳಿಸಿರುವ ಅವರು ಟೆಸ್ಟ್ ಮಟ್ಟದಲ್ಲಿ ಆರಂಭಿಕರಾಗಿ ಪ್ರತಿಭೆ ತೋರಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.  

5 /5

2016ರಲ್ಲಿ ನಾಯಕರಾಗಿದ್ದಾಗ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ನಂ.3ರ ಕ್ರಮಾಂಕದಲ್ಲಿ ಆಡಿದ್ದರು. ಇವರು ಕೂಡ ಇದೀಗ ಪೂಜಾರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಆಟಗಾರರಾಗಿದ್ದಾರೆ.