White hair home remedies : ಚಿಕ್ಕವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆ ಅನೇಕರನ್ನು ಕಾಡುತ್ತಿದೆ. ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಇರುವ ಉತ್ಪನ್ನಗಳ ಬಳಕೆ ತುಂಬಾ ಹಾನಿಕರವಾಗಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲನ್ನು ಸರಳವಾದ ಆಯುರ್ವೇದ ಸಲಹೆಗಳಿಂದ ಶಾಶ್ವತವಾಗಿ ಕಪ್ಪಾಗಿಸಬಹುದು. ಆಯುರ್ವೇದ ತಜ್ಞರು ಸೂಚಿಸಿರುವ ಕೆಲವು ಸಲಹೆಗಳನ್ನು ಪಾಲಿಸಿದರೆ ಬಿಳಿ ಕೂದಲು ಕೆಲವೇ ದಿನಗಳಲ್ಲಿ ಕಪ್ಪಾಗುತ್ತವೆ.
ಬಿಳಿ ಕೂದಲನ್ನು ಕಪ್ಪಾಗಿಸಲು ಆಯುರ್ವೇದ ತಜ್ಞರು ಸೂಚಿಸಿರುವ ಸಲಹೆಗಳನ್ನು ಹೇಗೆ ಬಳಸಬೇಕು ಎಂಬುದನ್ನು ಈಗ ತಿಳಿದುಕೊಳ್ಳೋಣ.
ಅಂಟುವಾಳ ಕಾಯಿಯಲ್ಲಿರುವ ಆಯುರ್ವೇದ ಗುಣಗಳು ಎಲ್ಲಾ ರೀತಿಯ ಕೂದಲಿನ ಸಮಸ್ಯೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿದೆ.
ಅಂಟುವಾಳ ಕಾಯಿಯಿಂದ ವಿಶೇಷವಾಗಿ ತಲೆಹೊಟ್ಟು ನಿವಾರಣೆಯಾಗುವುದು. ಅಂಟುವಾಳ ಕಾಯಿಯನ್ನು ನೀರಿನಲ್ಲಿ ನೆನೆಸಿ ತಲೆಸ್ನಾನದ ಸಮಯದಲ್ಲಿ ಶಾಂಪೂ ಬದಲಿಗೆ ಬಳಸಬೇಕು.
ಅಂಟುವಾಳ ಕಾಯಿ ಬಳಸುವುದರಿಂದ ಕೂದಲಿನ ಬುಡದಲ್ಲಿರುವ ಕೊಳೆ ನಿವಾರಣೆ ಆಗುತ್ತದೆ.
ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಅಂಟುವಾಳ ಕಾಯಿಯನ್ನು ಒಡೆದು, ಒಣಗಿಸಿ. ಇದನ್ನು ಪುಡಿ ಮಾಡಿ.
ಅಂಟುವಾಳ ಕಾಯಿ ಪುಡಿಯನ್ನು ಒಂದು ಕಪ್ ನೀರಿನಲ್ಲಿ ಬೆರೆಸಿ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಟ್ಟು, ನಂತರ ಸ್ನಾನ ಮಾಡಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ.
ಇದರಿಂದ ಕೂದಲು ಉದುರುವುದು ಕೂಡ ಕಡಿಮೆಯಾಗುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.