White Hair Remedies: ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಈರುಳ್ಳಿ ಸಿಪ್ಪೆಯನ್ನು ಈ ರೀತಿ ಬಳಸಿ

White Hair Remedies: ಬಿಳಿ ಕೂದಲಿನ ಸಮಸ್ಯೆಗೆ ಈರುಳ್ಳಿ ಸಿಪ್ಪೆ ಸುಲಭ ಪರಿಹಾರವನ್ನು ನೀಡಬಲ್ಲದು ಎಂದು ತಿಳಿದರೆ ನಿಮಗೆ ಅಚ್ಚರಿ ಆಗಬಹುದು. ಅದು ಹೇಗೆ ಸಾಧ್ಯ ಎಂದು ತಿಳಿಯೋಣ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಬಯಸುವಿರಾ..! ಅಂತಹವರಿಗೆ ಈರುಳ್ಳಿ ಸಿಪ್ಪೆ ಒಂದು ಸುಲಭ ಪರಿಹಾರವಾಗಿದೆ. ಈರುಳ್ಳಿ ಸಿಪ್ಪೆಯಿಂದ ಬಿಳಿ ಕೂದಲನ್ನು ಕಪ್ಪಾಗಿಸಲು ಬೇಕಾಗುವ ಪದಾರ್ಥಗಳೇನು? ಇದನ್ನು ಹೇಗೆ ಬಳಸುವುದು ಎಂದು ತಿಳಿಯೋಣ... 

2 /6

ನಿಮ್ಮ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಅಡುಗೆ ಮನೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ. ಮನೆಯಲ್ಲಿಯೇ ಹೇರ್ ಡೈ ತಯಾರಿಸಲು ಬೇಕಾಗುವ ಪದಾರ್ಥಗಳೆಂದರೆ...  * ಒಂದು ಬಟ್ಟಲು ಈರುಳ್ಳಿ ಸಿಪ್ಪೆ  * ಒಂದು ಬಾದಾಮಿ  * ಅರ್ಧ ಚಮಚ ಮೆಂತ್ಯೆ ಕಾಳು  * ಒಂದು ವಿಟಮಿನ್ ಇ ಕ್ಯಾಪ್ಸುಲ್  * 2 ಚಮಚ ಕೊಬ್ಬರಿ ಎಣ್ಣೆ 

3 /6

ಮೊದಲಿಗೆ ಈರುಳ್ಳಿ ಸಿಪ್ಪೆಯನ್ನು ಬಾಣೆಲೆಗೆ ಹಾಕಿ, ಅದರೊಂದಿಗೆ ಬಾದಾಮಿ, ಮೆಂತ್ಯ ಕಾಳನ್ನು ಕೂಡ ಹಾಕಿ ಅದು ಕಪ್ಪಾಗುವವರೆಗೆ ಚೆನ್ನಾಗಿ ಹುರಿಯಿರಿ. ಬಳಿಕ ಅದನ್ನು ಮಿಕ್ಸಿಗೆ ಹಾಕಿ ಪುಡಿ ಮಾಡಿಕೊಳ್ಳಿ. ನಂತರ ಈ ಪುಡಿಯನ್ನು ಒಂದು ಬಟ್ಟಲಿಗೆ ಹಾಕಿ ಅದರಲ್ಲಿ ಒಂದು ವಿಟಮಿನ್ ಇ ಕ್ಯಾಪ್ಸುಲ್ ಮತ್ತು 2 ಚಮಚ ಕೊಬ್ಬರಿ ಎಣ್ಣೆಯನ್ನು ಹಾಕಿ ಮಿಶ್ರಣ ಮಾಡಿ. 

4 /6

ತಯಾರಿಸಿಟ್ಟ ಹೇರ್ ಡೈ ಅನ್ನು ಕೂದಲಿನ ಬುಡದಿಂದ ತುದಿಯವರೆಗೆ ಹಚ್ಚಿ, ಒಂದೆರಡು ಗಂಟೆಗಳ ಕಾಲ ಒಣಗಳು ಬಿಡಿ. 

5 /6

ಈ ಹೇರ್ ಡೈ ಒಣಗಿನ ಬಳಿಕ ಸಾಮಾನ್ಯ ನೀರಿನಿಂದ ಸೌಮ್ಯ ಶಾಂಪೂವಿನೊಂದಿಗೆ ಹೇರ್ ವಾಶ್ ಮಾಡಿ. ಇದರಿಂದ ಬಿಳಿ ಕೂದಲು ಮೊದಲ ಬಾರಿಗೆ ಕಪ್ಪಾಗುತ್ತದೆ.  ನೀವು ಕಸ ಎಂದು ಬಿಸಾಡುವ ಈರುಳ್ಳಿ ಸಿಪ್ಪೆಯಿಂದ ತಯಾರಿಸಿದ ಈ ಮನೆಮದ್ದನ್ನು ನಿಯಮಿತವಾಗಿ ಬಳಸುವುದರಿಂದ ನಿಮ್ಮ ಬಿಳಿ ಕೂದಲು  ಶಾಶ್ವತವಾಗಿ ಕಪ್ಪಾಗುತ್ತದೆ. 

6 /6

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.