Border Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಾಂಗರೂ ಪಡೆ ಪ್ರಸ್ತುತ 2-1 ಮುನ್ನಡೆ ಸಾಧಿಸಿದೆ. ಜನವರಿ 3ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ೫ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ಗೆಲ್ಲಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Team Indian Captain: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಎದುರು 184 ರನ್‌ಗಳ ಹೀನಾಯ ಸೋಲು ಕಂಡಿದೆ. ಮೊದಲ ಟೆಸ್ಟ್ ಗೆದ್ದ ನಂತರ ಮೂರು ಟೆಸ್ಟ್ಗಳಲ್ಲಿ 2 ಸೋಲು ಕಂಡ ಟೀಂ ಇಂಡಿಯಾ ಒಂದರಲ್ಲಿ ಡ್ರಾ ಸಾಧಿಸಿದೆ. ಇದೀಗ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ದೃಷ್ಟಿಯಿಂದ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ತಂಡವು ಸಿಡ್ನಿ ಟೆಸ್ಟ್‌ಗಾಗಿ ರಣತಂತ್ರ ರೂಪಿಸುತ್ತಿದೆ. ಆದರೆ ಟೆಸ್ಟ್ ತಂಡದ ನಾಯಕತ್ವದ ವಿಚಾರದಲ್ಲಿ ಬಿಸಿಸಿಐ ಹೆಣಗಾಡುತ್ತಿದೆ. ರೋಹಿತ್ ಶರ್ಮಾರ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಲಭ್ಯವಿರುವ ಸೀಮಿತ ಆಯ್ಕೆಗಳು ಆಯ್ಕೆ ಮಂಡಳಿಗೆ ತಲೆನೋವಾಗಿ ಪರಿಣಮಿಸಿದೆ. ಒಂದು ವೇಳೆ ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದರೆ ತಂಡದ ನೂತನ ನಾಯಕ ಯಾರು? ಅನ್ನೋ ಚರ್ಚೆ ಜೋರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಾಂಗರೂ ಪಡೆ ಪ್ರಸ್ತುತ 2-1 ಮುನ್ನಡೆ ಸಾಧಿಸಿದೆ. ಜನವರಿ 3ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ೫ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ಗೆಲ್ಲಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪಂದ್ಯ ಗೆದ್ದರೆ ಸರಣಿ ಸಮಬಲಗೊಳಲಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ರೇಸ್‌ನಲ್ಲಿ ಉಳಿಯಲಿದೆ. ಆದರೆ ಸದ್ಯ ಟೀಂ ಇಂಡಿಯಾದ ಫಾರ್ಮ್, ನಾಯಕ ರೋಹಿತ್ ಶರ್ಮಾ ಸೇರಿದಂತೆ ಇತರೆ ಸ್ಟಾರ್ ಆಟಗಾರರ ಫಾರ್ಮ್ ಆತಂಕಕಾರಿಯಾಗಿದೆ. ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ರೋಹಿತ್ ನಿವೃತ್ತಿ ಘೋಷಿಸಿದರೆ ಭಾರತಕ್ಕೆ ಹೊಸ ನಾಯಕನನ್ನು ಹುಡುಕಬೇಕಾಗುತ್ತದೆ. ಪರ್ತ್ ಟೆಸ್ಟ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ತಂಡದ ನಾಯಕತ್ವಕ್ಕೆ ಭರವಸೆಯಾಗಿ ಕಾಣುತ್ತಿದ್ದಾರೆ. ಸದ್ಯ ತಂಡದ ಉಪನಾಯಕರಾಗಿರುವ ಬುಮ್ರಾ ನಾಯಕತ್ವದ ರೇಸ್‌ನಲ್ಲಿ ಮುಂದಿದ್ದಾರೆ. ಆದರೆ ಬುಮ್ರಾ ಆಗಾರ ಗಾಯಗೊಂಡು ತಂಡದಿಂದ ಹೊರಬೀಳುವ ಸಾಧ್ಯತೆ ಇರೋದ್ರಿಂದ ಟೆಸ್ಟ್ ನಾಯಕತ್ವ ವಹಿಸಿಕೊಳ್ಳಲು ಇವರನ್ನ ನಂಬಿ ಕುಳಿತುಕೊಳ್ಳುವ ಸಾಧ್ಯತೆ ಕಡಿಮೆ.
ರೋಹಿತ್‌ರಂತೆ ಬುಮ್ರಾ ಟೆಸ್ಟ್ ಮತ್ತು ಏಕದಿನ ಮಾದರಿಯಲ್ಲಿ ತಂಡವನ್ನು ಮುನ್ನಡೆಸುವ ಸಾಧ್ಯತೆಯಿಲ್ಲ. ಬುಮ್ರಾರನ್ನು ಟೆಸ್ಟ್ ತಂಡದ ನಾಯಕನನ್ನಾಗಿ ಘೋಷಿಸಬಹುದು. ಒಂದು ವೇಳೆ ಬೌಲರ್ಗೆ ನಾಯಕತ್ವ ಕೊಡುವುದು ಬೇಡವೆಂದು ನಿರ್ಧಾರವಾದ್ರೆ ಕೆ.ಎಲ್.ರಾಹುಲ್ ಅಥವಾ ರಿಷಬ್ ಪಂತ್ ಇಬ್ಬರಲ್ಲಿ ಒಬ್ಬರು ನಾಯಕನಾಗುವ ಸಾಧ್ಯತೆಯಿದೆ. ಟೆಸ್ಟ್‌ನಲ್ಲಿ ಬುಮ್ರಾ ಬಿಟ್ಟು ಹೋಗುವ ಸಾಧ್ಯತೆ ತೀರಾ ಕಡಿಮೆ. ಈಗಾಗಲೇ ಪರ್ತ್ ಟೆಸ್ಟ್ ಗೆಲುವಿನೊಂದಿಗೆ ಬುಮ್ರಾ ತಮ್ಮ ನಾಯಕತ್ವದ ಕೌಶಲ್ಯವನ್ನ ತೋರಿಸಿದ್ದಾರೆ.
ಏಕದಿನ ಪಂದ್ಯಗಳಿಗೆ ಹೊಸ ನಾಯಕನನ್ನು ಹುಡುಕುವ ಸಾಧ್ಯತೆಯಿದೆ. ರೋಹಿತ್ ಏಕದಿನ ಪಂದ್ಯಗಳಿಂದ ನಿವೃತ್ತಿ ಪಡೆದಿಲ್ಲ. ಹೀಗಾಗಿ ಅವರು ಚಾಂಪಿಯನ್ಸ್ ಟ್ರೋಫಿವರೆಗೆ ಲಭ್ಯವಿರುತ್ತಾರೆ. ಆ ಬಳಿಕ ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ಪೈಕಿ ಒಬ್ಬರಿಗೆ ಏಕದಿನ ನಾಯಕತ್ವ ನೀಡುವ ಸಾಧ್ಯತೆಯಿದೆ. ಈಗಾಗಲೇ ಸೂರ್ಯಕುಮಾರ್ ಯಾದವ್ ನಾಯಕನಾಗಿ ಟಿ-20ಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಅವರು ಏಕದಿನ ಮಾದರಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ.