ಇನ್ನು 48 ಗಂಟೆಯಲ್ಲಿ ಈ ರಾಶಿಯಲ್ಲಿ ಗಜ ಕೇಸರಿ ಯೋಗ ! ಉಕ್ಕಿ ಬರುವುದು ಧನ ಸಂಪತ್ತು

Jupiter and Moon Conjunction: ಮೇ 17 ರಂದು, ಗುರು ಮತ್ತು ಚಂದ್ರನ ಸಂಯೋಜನೆಯು ಅನೇಕ ರಾಶಿಯವರಿಗೆ ಪ್ರಯೋಜನಕಾರಿಯಾಗಿರಲಿದೆ.  

Jupiter and Moon Conjunction : ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ರಾಶಿ ಬದಲಾವಣೆಯ ಪರಿಣಾಮವು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ.  ಕೆಲವೊಮ್ಮೆ ಒಂದು ಗ್ರಹವು ಸಂಕ್ರಮಿಸಿದಾಗ, ಇನ್ನೊಂದು ಗ್ರಹದೊಂದಿಗೆ ಸಂಯೋಗವಾಗುತ್ತದೆ. ಇದರಿಂದ ಅನೇಕ ಶುಭ ಮತ್ತು ಅಶುಭ ಯೋಗಗಳನ್ನು ಸೃಷ್ಟಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇ 17 ರಂದು ರಾತ್ರಿ 7.39 ಕ್ಕೆ ಚಂದ್ರನು ಮೀನ ರಾಶಿಯನ್ನು ತೊರೆದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಗುರು ಕೂಡಾ ಇಡೀ ರಾಶಿಯಲಿದ್ದಾನೆ.  ಗುರು ಮತ್ತು ಚಂದ್ರನ ಸಂಯೋಗದಿಂದ ಗಜ ಕೇಸರಿ ಯೋಗವು ರೂಪುಗೊಳ್ಳುತ್ತಿದೆ. ಈ ಯೋಗವು ಅನೇಕ ರಾಶಿಯವರ ಅದೃಷ್ಟವನ್ನು ಬೆಳಗಲಿದೆ. ಗಜಕೇಸರಿ ರಾಜಯೋಗದಿಂದ ಯಾವ ರಾಶಿಯವರಿಗೆ ವಿಶೇಷ ಲಾಭವಾಗಲಿದೆ ನೋಡೋಣ. 

2 /5

ಗಜಕೇಸರಿ ರಾಜಯೋಗದ ರಚನೆಯಿಂದಾಗಿ ಮೇಷ ರಾಶಿಯವರಿಗೆ ವಿಶೇಷ ಲಾಭ ದೊರೆಯಲಿದೆ. ಈ ರಾಶಿಯಲ್ಲಿಯೇ ಗುರು ಮತ್ತು ಚಂದ್ರನ ಸಂಯೋಗವು ನಡೆಯಲಿದೆ. ಈ ಸಮಯದಲ್ಲಿ, ಈ ರಾಶಿಯ ಜನರು ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ. ಅಷ್ಟೇ ಅಲ್ಲ ಬಹುಕಾಲದಿಂದ ನಿಂತು ಹೋಗಿದ್ದ ಕೆಲಸ ಚುರುಕು ಪಡೆದು ಪೂರ್ಣಗೊಳ್ಳುತ್ತದೆ. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ಬಡ್ತಿ ಮತ್ತು ವೇತನ ಹೆಚ್ಚಳದ ಸಂಪೂರ್ಣ ಅವಕಾಶಗಳಿವೆ.

3 /5

ಗುರು ಮತ್ತು ಚಂದ್ರನ ಸಂಯೋಗದಿಂದ ರೂಪುಗೊಳ್ಳುವ ಗಜಕೇಸರಿ ಯೋಗವು, ಈ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳನ್ನು ನೀಡಲಿದೆ. ಈ ಸಮಯದಲ್ಲಿ, ಈ ರಾಶಿಯ ಜನರು ಸಮಾಜದಲ್ಲಿ ಗೌರವ, ಸ್ಥಾನಮಾನ ಮತ್ತು ಪ್ರತಿಷ್ಠೆಯನ್ನು ಪಡೆಯುತ್ತಾರೆ. ಅಲ್ಲದೆ,  ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು.

4 /5

ಗಜಕೇಸರಿ ಯೋಗವು ತುಲಾ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ, ವ್ಯಾಪಾರ ಮತ್ತು ಉದ್ಯೋಗದಲ್ಲಿ ಅಪಾರ ಯಶಸ್ಸನ್ನು ಸಾಧಿಸಲಾಗುತ್ತದೆ. ಹಣಕಾಸಿನ ಲಾಭವಾಗಬಹುದು. ಕುಟುಂಬ ಮತ್ತು ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುವ ಅವಕಾಶ ಸಿಗುವುದು. 

5 /5

ಜ್ಯೋತಿಷಿಗಳ ಪ್ರಕಾರ, ಗುರು ಮತ್ತು ಚಂದ್ರ ಯಾವುದೇ ರಾಶಿಯಲ್ಲಿ ಸೇರಿದಾಗ ಗಜಕೇಸರಿ ಯೋಗವು ರೂಪುಗೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಗುರುಗ್ರಹವು ಜಾತಕದಲ್ಲಿ ಚಂದ್ರನಿಂದ ಕೇಂದ್ರಸ್ಥಾನದಲ್ಲಿ (ಪ್ರಥಮ, ನಾಲ್ಕನೇ, ಏಳನೇ ಮತ್ತು ಹತ್ತನೇ ಮನೆ) ಸ್ಥಿತಗೊಂಡಾಗ ಗಜಕೇಸರಿ ಯೋಗವು ರೂಪುಗೊಳ್ಳುತ್ತದೆ. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)