Year Ender 2023: ಈ ವರ್ಷ ವಿಶ್ವದಲ್ಲಿ ಸಂಭವಿಸಿದ 5 ಭೀಕರ ಭೂಕಂಪಗಳು

Top 5 Deadliest Earthquakes: ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.

Year Ender 2023: 2023ರ ವರ್ಷ ಮುಗಿಯಲು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಈ ವರ್ಷ ಸದಾ ನೆನಪಿನಲ್ಲಿ ಉಳಿಯುವಂತಹ ಅನೇಕ ಆಘಾತಕಾರಿ ಘಟನೆಗಳು ನಡೆದಿವೆ. ಈ ವರ್ಷ ನಿರಂತರವಾಗಿ ಅನೇಕ ಭೂಕಂಪಗಳು ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಭೀಕರ ಭೂಕಂಪದ ಘಟನೆಗಳು ಟರ್ಕಿ ಮತ್ತು ಸಿರಿಯಾದಲ್ಲಿ ಗರಿಷ್ಠ ಹಾನಿಯನ್ನುಂಟು ಮಾಡಿವೆ. ಈ ನೈಸರ್ಗಿಕ ವಿಕೋಪದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಂದು ನಾವು 2023ರಲ್ಲಿ ಸಂಭವಿಸಿದ 5 ಪ್ರಮುಖ ಭೀಕರ ಭೂಕಂಪಗಳ ನಿಮಗೆ ತಿಳಿಸಿಕೊಡಲಿದ್ದೇವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಫೆಬ್ರವರಿ 6ರಂದು ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪವು ಅತ್ಯಂತ ಭಯಾನಕ ಭೂಕಂಪಗಳಲ್ಲಿ ಒಂದಾಗಿದೆ. ಈ ದುರ್ಘಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

2 /5

ನೇಪಾಳದಲ್ಲಿ ವರ್ಷದ ಮೊದಲ ತಿಂಗಳಲ್ಲಿ ಅಂದರೆ ಜನವರಿ 24ರಂದು ಭೂಕಂಪ ಸಂಭವಿಸಿದೆ. ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡದಲ್ಲೂ ಈ ಭೂಕಂಪನದ ಅನುಭವವಾಗಿದೆ. ಆದರೆ ಈ ಭೂಕಂಪದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಹೆಚ್ಚಿನ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ.

3 /5

ಮಾರ್ಚ್ 21ರಂದು ಅಫ್ಘಾನಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲೂ ಈ ಕಂಪನದ ಅನುಭವವಾಗಿದೆ. ಈ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

4 /5

ಅಕ್ಟೋಬರ್ 3ರಂದು ನೇಪಾಳದಲ್ಲಿ 4.6 ಮತ್ತು 6.2 ತೀವ್ರತೆಯ 2 ಭೂಕಂಪಗಳು ಸಂಭವಿಸಿದವು. ದೆಹಲಿ-ಎನ್‌ಸಿಆರ್‌ನಲ್ಲಿ ಈ ಕಂಪನಗಳು ಸಂಭವಿಸಿದವು. ಈ ಭೂಕಂಪದಲ್ಲಿ 17 ಮಂದಿ ಗಾಯಗೊಂಡಿದ್ದು, ಹಲವು ಮನೆಗಳು ಮತ್ತು ರಸ್ತೆಗಳು ಹಾನಿಗೊಳಗಾಗಿದ್ದವು.

5 /5

ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ನಂತರ ಹಲವಾರು ಭೂಕಂಪದ ಘಟನೆಗಳು ಸಂಭವಿಸಿದವು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.