ದಿನಭವಿಷ್ಯ 20-05-2024: ಈ ರಾಶಿಯವರು ಇಂದು ಚಾಲನೆ ಮಾಡುವಾಗ ಜಾಗರೂಕರಾಗಿರಿ!

Today Horoscope 20th May 2024: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ದಿನ ಭವಿಷ್ಯ ಹೇಗಿದೆ ತಿಳಿಯಿರಿ. 

Written by - Yashaswini V | Last Updated : May 20, 2024, 06:42 AM IST
  • ಮಿಥುನ ರಾಶಿಯವರಿಗೆ ಇಂದು ಉತ್ತಮ ದಿನ.
  • ಕನ್ಯಾ ರಾಶಿಯ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿರುವವರು ಶುಭ ವಾರ್ತೆ ನಿರೀಕ್ಷಿಸಬಹುದು.
  • ವೃಶ್ಚಿಕ ರಾಶಿಯ ಉದ್ಯೋಗಸ್ಥರಿಗೆ ಇಂದು ಮೇಲಾಧಿಕಾರಿಗಳಿಂದ ಮನ್ನಣೆ ಜೊತೆಗೆ ಬಡ್ತಿಯೂ ಸಿಗಲಿದೆ.
ದಿನಭವಿಷ್ಯ 20-05-2024:  ಈ ರಾಶಿಯವರು ಇಂದು ಚಾಲನೆ ಮಾಡುವಾಗ ಜಾಗರೂಕರಾಗಿರಿ!  title=

Somavara Dina Bhavishya In Kannada: 20ನೇ ಮೇ ಸೋಮವಾರದ ಈ ದಿನ ಮೇಷ ರಾಶಿಯಿಂದ ಮೀನ ರಾಶಿಯವರೆಗೆ ಎಲ್ಲಾ 12 ರಾಶಿಯವರ ಭವಿಷ್ಯ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಮೇಷ ರಾಶಿಯ ಜನರು ಇಂದು ಸ್ವಲ್ಪ ಎಚ್ಚರಿಕೆಯಿಂದ ಇರುವುದು ಅಗತ್ಯ. ಉದ್ಯೋಗಸ್ಥರು ಕೆಲಸದಲ್ಲಿ ಅಸಡ್ಡೆಯನ್ನು ತಪ್ಪಿಸಿ. ಆರೋಗ್ಯವು ಉತ್ತಮವಾಗಿರುತ್ತದೆ ಚಾಲನೆ ಮಾಡುವಾಗ ಜಾಗರೂಕರಾಗಿರಿ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃಷಭ ರಾಶಿಯ ಜನರು ಇಂದು ನೀವು ಕೆಲಸ ಮಾಡುವ ಜಾಗದಲ್ಲಿ ತಾಳ್ಮೆಯಿಂದ ವರ್ತಿಸಿ. ಕೆಲಸ ಹೊರೆ ಹೆಚ್ಚಾಗಬಹುದು. ಆದರೆ, ಸಹೋದ್ಯೋಗಿಗಳೊಂದಿಗೆ ಕೆಲಸವನ್ನು ಹಂಚಿಕೊಳ್ಳುವ ಮೂಲಕ ಕೆಲಸ ಪೂರ್ಣಗೊಳಿಸಿ. ಸಂಭಾವ್ಯ ನಷ್ಟವನ್ನು ತಪ್ಪಿಸಲು ಹೂಡಿಕೆ ಮಾಡುವುದನ್ನು ತಪ್ಪಿಸಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಮಿಥುನ ರಾಶಿಯವರಿಗೆ ಇಂದು ಉತ್ತಮ ದಿನ. ಉದ್ಯೋಗಸ್ಥರು ಕಡಿಮೆ ಸಮಯದಲ್ಲಿ ಹೆಚ್ಚಿನ ಕೆಲಸ ಮಾಡಬೇಕಾಗಬಹುದು. ಆದಾಗ್ಯೂ, ಕೆಲಸದಲ್ಲಿ ನಿಮಾಮ್ ದಕ್ಷತೆಯೂ ಅಧಿಕಾರಿಗಳ ಮನೋಲ್ಲಾಸಕ್ಕೆ ಕಾರಣವಾಗುತ್ತದೆ. ವ್ಯಾಪಾರಸ್ಥರು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕರ್ಕಾಟಕ ರಾಶಿಯ ಉದ್ಯೋಗಸ್ಥರಿಗೆ ಅಧಿಕಾರಿಗಳು ನಿಮ್ಮ ಕೆಲಸದಿಂದ ತುಂಬಾ ಸಂತೋಷಪಡುತ್ತಾರೆ. ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು. ವ್ಯಾಪಾರಸ್ಥರು ಬೇರೆಯವರಿಗೆ ಸಾಲ ನೀಡುವುದನ್ನು ತಪ್ಪಿಸಿ. ಇಲ್ಲವೇ ಆರ್ಥಿಕ ಬಿಕ್ಕಟ್ಟು ಎದುರಾಗಬಹುದು. 

ಇದನ್ನೂ ಓದಿ- Shani Sadesati: ಮುಂದಿನ ವರ್ಷ ಈ ರಾಶಿಯವರಿಗೆ ಶನಿ ಸಾಡೇಸಾತಿ ಆರಂಭ, ಜೀವನದಲ್ಲಿ ಸಾಕಷ್ಟು ಏರಿಳಿತ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಸಿಂಹ ರಾಶಿಯ ಉದ್ಯೋಗಸ್ಥರಿಗೆ ಇಂದು ಉತ್ತಮ ದಿನ. ಈ ದಿನ ಕೆಲಸದಲ್ಲಿ ಹೊಸ ಹೊಸ ಅವಕಾಶಗಳು ಲಭ್ಯವಾಗಲಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಿ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರಿ. ವ್ಯಾಪಾರಸ್ಥರು ಸ್ವಲ್ಪ ಶ್ರಮವಹಿಸಬೇಕಾಗಬಹುದು. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಕನ್ಯಾ ರಾಶಿಯ ಜನರು ಇಂದು ಅಪರಿಚಿತರಿಂದ ತೊಂದರೆಗೆ ಒಳಗಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಪ್ಪಿಸಲು ಹೊರಗಿನ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿರುವವರು ಶುಭ ವಾರ್ತೆ ನಿರೀಕ್ಷಿಸಬಹುದು. 

ತುಲಾ ರಾಶಿಯವರ ಭವಿಷ್ಯ (Libra Horoscope): 
ತುಲಾ ರಾಶಿಯ ಉದ್ಯೋಗಸ್ಥರಿಗೆ ಇಂದು ಶುಭ ದಿನ. ನಿಮ್ಮ ಕಾರ್ಯವೈಖರಿಗೆ ನಿಮ್ಮ ಮೇಲಾಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುವಿರಿ. ಪ್ರತಿಯೊಂದು ಕೆಲಸದಲ್ಲೂ ಸಂಗಾತಿ ಬೆಂಬಲ ದೊರೆಯಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ. ಸಮಾಜ ಸೇವಕರಿಗೆ ಇಂದು ಬಹಳ ವಿಶೇಷ ದಿನ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವೃಶ್ಚಿಕ ರಾಶಿಯ ಉದ್ಯೋಗಸ್ಥರಿಗೆ ಇಂದು ಮೇಲಾಧಿಕಾರಿಗಳಿಂದ ಮನ್ನಣೆ ಜೊತೆಗೆ ಬಡ್ತಿಯೂ ಸಿಗಲಿದೆ. ವೇತನ ಹೆಚ್ಚಾಗಲಿದೆ. ನಿಮ್ಮ ಪ್ರತಿಭೆಯನ್ನು ಸರಿಯಾದ ದಿಕ್ಕಿನಲ್ಲಿ ಬಳಸುವುದರಿಂದ ಪ್ರಗತಿ ಕಾಣಬಹುದು. ಮಕ್ಕಳೊಂದಿಗೆ ಉತ್ತಮ ಸಮಯವನ್ನು ಆನಂದಿಸುವಿರಿ. 

ಇದನ್ನೂ ಓದಿ- Vastu Tips for Plants: ಮನೆ ಮುಂದೆ ಯಾವ ಸಸಿಗಳನ್ನು ನೆಡುವುದು ಶುಭ?

ಧನು ರಾಶಿಯವರ ಭವಿಷ್ಯ (Sagittarius Horoscope):  
ಧನು ರಾಶಿಯ ಜನರು ನಿಮ್ಮ ನೆಗೆಟಿವ್ ಎನರ್ಜಿಯನ್ನು ಸ್ವಲ್ಪ ನಿಯಂತ್ರಿಸಿಕೊಳ್ಳುವುದು ಒಳ್ಳೆಯದು. ಉದ್ಯೋಗಸ್ಥರು ನಿಮ್ಮ ಜೂನಿಯರ್‌ಗಳೊಂದಿಗೆ ಸಂಯಮದಿಂದ ವರ್ತಿಸಿ. ವ್ಯಾಪಾರ-ವ್ಯವಹಾರದಲ್ಲಿ ತಾಳ್ಮೆಯನ್ನು ರೂಢಿಸಿಕೊಳ್ಳಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಮಕರ ರಾಶಿಯ ಉದ್ಯೋಗಸ್ಥರು ನಿಮ್ಮ ಕೆಲಸದ ಬಗ್ಗೆ ಗಮನ ಕೇಂದ್ರೀಕರಿಸಿ. ಆರೋಗ್ಯದ ವಿಚಾರವಾಗಿ ಜಾಗರೂಕರಾಗಿರಿ. ಅಗತ್ಯವೆನಿಸಿದಾಗ ಕೊಂಚ ವಿಶ್ರಾಂತಿ ಪಡೆಯಿರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಬಯಸುವವರು ದೀರ್ಘಾವಧಿ ಹೂಡಿಕೆಯನ್ನು ಪರಿಗಣಿಸಿ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಕುಂಭ ರಾಶಿಯ ಜನರಿಗೆ ಇದು ಅತ್ಯುತ್ತಮ ದಿನ. ಸರಿಯಾದ ಯೋಜನೆ ರೂಪಿಸುವುದರಿಂದ ದಿನದ ಮೊದಲಾರ್ಧದಲ್ಲಿ ನಿಮ್ಮ ಹೆಚ್ಚುವರಿ ಕೆಲಸಗಳನ್ನು ಪೂರ್ಣಗೊಳಿಸಬಹುದು. ಇದರಿಂದಾಗಿ ನಿಮ್ಮ ಅಧಿಕಾರಿಗಳು ಸಂತೋಷಗೊಳ್ಳುತ್ತಾರೆ. ವ್ಯಾಪಾರದಲ್ಲಿ ಕಠಿಣತೆಯನ್ನು ರೂಢಿಸಿಕೊಳ್ಳಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಮೀನ ರಾಶಿಯ ಉದ್ಯೋಗಸ್ಥರು ಇಂದು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಿಮ್ಮ ದಿನಚರಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬೇಡಿ. ವ್ಯಾಪಾರಸ್ಥರು ನಿಮ್ಮ ಮಾತಿನಲ್ಲಿ ಸಂಯಮವನ್ನು ಕಾಯ್ದುಕೊಳ್ಳಿ. ಇಲ್ಲದಿದ್ದರೆ, ತೊಂದರೆಯನ್ನು ಅನುಭವಿಸಬೇಕಾಗಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News