ದಿನಭವಿಷ್ಯ 04-07-2024: ಇಂದು ಈ ರಾಶಿಯವರಿಗೆ ಎಚ್ಚರಿಕೆ ಅಗತ್ಯ

Today Horoscope 04th July 2024: ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 4, 2024, 08:07 AM IST
  • ಮಿಥುನ ರಾಶಿಯವರಿಗೆ ಇಂದು ಒತ್ತಡದಿಂದ ಕೂಡಿದ ದಿನ.
  • ಸಿಂಹ ರಾಶಿಯವರಿಗೆ ಇಂದು ಮಧ್ಯಮ ಫಲಪ್ರದವಾದ ದಿನ
  • ಮಕರ ರಾಶಿಯವರಿಗೆ ಇಂದು ಸುಖ-ಸಂತೋಷದ ದಿನ.
ದಿನಭವಿಷ್ಯ 04-07-2024:  ಇಂದು ಈ ರಾಶಿಯವರಿಗೆ ಎಚ್ಚರಿಕೆ ಅಗತ್ಯ  title=

Guruvara Dina Bhavishya In Kannada: ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ತ್ರಯೋದಶಿಯ ಈ ದಿನ ಗುರುವಾರ ಮೃಗಶಿರ ನಕ್ಷತ್ರ, ಗಂಧ ಯೋಗ ಇರಲಿದ್ದು ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಅತ್ಯಂತ ಫಲಪ್ರದವಾದ ದಿನ. ಹೊಸ ಉದ್ಯೋಗ, ವಾಹನ ಪಡೆಯುವ ಸಾಧ್ಯತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸಮಸ್ಯೆಗಳು ಎದುರಾಗಬಹುದು. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆ ಅಗತ್ಯವಾಗಿದೆ. ಸೋಮಾರಿತನ ಬಿಟ್ಟು ಮುಂದುವರೆದರೆ ಮಾತ್ರವೇ ಯಶಸ್ಸು, ಕೀರ್ತಿ ಗಳಿಸುವಿರಿ. ಆರೋಗ್ಯ ಸಮಸ್ಯೆಗಳಿದ್ದರೆ ತಪ್ಪದೆ ವೈದ್ಯರನ್ನು ಸಂಪರ್ಕಿಸಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಒತ್ತಡದಿಂದ ಕೂಡಿದ ದಿನ. ಇದರಿಂದಾಗಿ ಆರೋಗ್ಯವೂ ಕ್ಷೀಣಿಸಬಹುದು. ಸಾಲ ಪಡೆದಿದ್ದರೆ ಅವುಗಳನ್ನು ತೀರಿಸಲು ಇಂದು ಯೋಚಿಸಬೇಕಾಗುತ್ತದೆ. ಉದ್ಯೋಗದಲ್ಲಿ ಎದುರಾಗಿರುವ ಸವಾಲುಗಳನ್ನು ನಿವಾರಿಸಿ ಮುನ್ನುಗ್ಗುವಿರಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ಮಿಶ್ರ ಫಲಗಳಿಂದ ಕೂಡಿದ ವಾರ. ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಮಕ್ಕಳ ಭವಿಷ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಚರ್ಚಿಸಿ ನಿರ್ಧರಿಸಿ. 

ಇದನ್ನೂ ಓದಿ- Vastu Tips: ಮನೆಯಲ್ಲಿ ಈ ಸಸ್ಯಯಿದ್ದರೆ ಶನಿ ಕೃಪೆ, ಅದೃಷ್ಟವೇ ಬದಲು

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇಂದು ಮಧ್ಯಮ ಫಲಪ್ರದವಾದ ದಿನ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಸಿಗಬಹುದು. ಉದ್ಯೋಗಸ್ಥರಿಗೆ ಸಂಬಳ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶದಲ್ಲಿ ಶಿಕ್ಷಣಕ್ಕಾಗಿ ಪ್ರಯತ್ನಿಸುತ್ತಿರುವವರು ಈ ನಿಟ್ಟಿನಲ್ಲಿ ಪ್ರಯತ್ನಿಸಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ನೀವು ಬಹುದಿನಗಳಿಂದ ಅನುಭವಿಸುತ್ತಿರುವ ತೊಂದರೆಗಳಿಂದ ಮುಕ್ತಿ ದೊರೆಯಲಿದೆ. ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ವ್ಯಾಪಾರದಲ್ಲಿ ಹೂಡಿಕೆ ಮಾಡುವ ಮುನ್ನ ಹಿರಿಯರ ಸಲಹೆ ಪಡೆಯುವುದನ್ನು ಮರೆಯಬೇಡಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಧಾರ್ಮಿಕ ಪ್ರವಾಸಕ್ಕಾಗಿ ಯೋಜಿಸಬಹುದು. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ತಪ್ಪಿಸಿ. ಯಾವುದೇ ವಿಚಾರದಲ್ಲಿ  ಬುದ್ಧಿವಂತಿಕೆ ಮತ್ತು ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ಮಿಶ್ರಫಲಗಳಿಂದ ಕೂಡಿದ ದಿನ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿದ್ದರೆ ಅದನ್ನು ರಾಜೀ ಮಾಡಿಕೊಳ್ಳಿ. ಉದ್ಯೋಗಷ್ಟರಿಗೆ ವೇತನ ಹೆಚ್ಚಳ ಸಂಭವವಿದೆ. ಆದಾಗ್ಯೂ, ಈ ವಿಚಾರವನ್ನು ಬೇರೆಯವರೊಂದಿಗೆ ಹೇಳುವಾಗ ಜಾಗರೂಕರಾಗಿರಿ. 

ಇದನ್ನೂ ಓದಿ- Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ಮಧ್ಯಮ ಫಲಪ್ರದ ದಿನ. ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಆನಂದಿಸುವಿರಿ. ಇಂದು ನಿಮ್ಮ ಮಗು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಕುಟುಂಬಕ್ಕೆ ಕೀರ್ತಿ ತರಬಹುದು. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ಸುಖ-ಸಂತೋಷದ ದಿನ. ಹಣಕಾಸಿನ ವಿಚಾರದಲ್ಲಿ ಬೇರೆಯವರನ್ನು ನಂಬುವುದನ್ನು ತಪ್ಪಿಸಿ. ಕೆಲಸದ ಸ್ಥಳದಲ್ಲಿ ನಿಮಗೆ ಕೆಲವು ವಿಶೇಷ ಜವಾಬ್ದಾರಿಗಳನ್ನು ನೀಡಲಾಗುವುದು. ಆಸ್ತಿ ಖರೀದಿಸುವ ನಿಮ್ಮ ಕನಸು ಈಡೇರಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ನಿಮ್ಮ ಜೀವನ ಸಂಗಾತಿಯೊಂದಿಗೆ ಕೆಲವು ಮಧುರ ಕ್ಷಣಗಳನ್ನು ಆನಂದಿಸುವಿರಿ. ಇಂದು ನೀವು ನಿಮ್ಮ ಮಕ್ಕಳಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಒಟ್ಟಾರೆಯಾಗಿ ಇಂದು ಸಂತೋಷದ ದಿನ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ವ್ಯವಹಾರದಲ್ಲಿ ನಿಮ್ಮ ಇಚ್ಛೆಯಂತೆ ಭರ್ಜರಿ ಲಾಭವನ್ನು ಗಳಿಸುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಇಂದು ಧಾರ್ಮಿಕ ಪ್ರವಾಸವನ್ನು ಕೈಗೊಳ್ಳಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News