ದಿನ ಭವಿಷ್ಯ 15-08-2024: ಗುರುವಾರದಂದು ಜ್ಯೇಷ್ಠಾ ನಕ್ಷತ್ರ, ವೈಧೃತಿ ನಕ್ಷತ್ರ ನಿಮ್ಮ ರಾಶಿಗೆ ಏನು ಫಲ!

Today Horoscope 15th August 2024: ಗುರುವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ವೈಧೃತಿ ನಕ್ಷತ್ರ  ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Aug 15, 2024, 07:55 AM IST
  • ಮಿಥುನ ರಾಶಿಯ ವ್ಯಾಪಾರಸ್ಥರಿಗೆ ಇಂದು ವಿಶೇಷವಾದ ದಿನ
  • ಸಿಂಹ ರಾಶಿಯವರು ಕಷ್ಟಪಟ್ಟು ಕೆಲಸ ಮಾಡುವುದರಿಂದ ಆದಾಯದಲ್ಲಿ ಹೆಚ್ಚಳವನ್ನು ಕಾಣಬಹುದು.
  • ಧನು ರಾಶಿಯವರಿಗೆ ಹಣದ ಒಳಹರಿವು ಹೆಚ್ಚಾಗಿ ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ.
ದಿನ ಭವಿಷ್ಯ 15-08-2024:  ಗುರುವಾರದಂದು ಜ್ಯೇಷ್ಠಾ ನಕ್ಷತ್ರ, ವೈಧೃತಿ ನಕ್ಷತ್ರ  ನಿಮ್ಮ ರಾಶಿಗೆ ಏನು ಫಲ!  title=

Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಗುರುವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ವೈಧೃತಿ ನಕ್ಷತ್ರ ಇರಲಿದ್ದು, ನಿಮ್ಮ ರಾಶಿಗೆ ದಿನ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಹಣಕಾಸಿಗೆ ಸಂಬಂಧಿಸಿದಂತೆ ಇಂದು ಸಾಮಾನ್ಯ ದಿನ. ಮಾರ್ಕೆಟಿಂಗ್ ಕ್ಷೇತ್ರಗಳಿಗೆ ಸಂಬಂಧಿಸಿದ ಜನರಿಗೆ ಅನುಕೂಲಕರವಾದ ದಿನ. ಇಂದು ನೀವು ನಿಮ್ಮ ವ್ಯಾಪಾರವನ್ನು ಮುಂದಕ್ಕೆ ಕೊಂಡೊಯ್ಯಲು ವಿಸ್ತರಣೆ ಯೋಜನೆಗಳನ್ನು ರೂಪಿಸಬಹುದು. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಿಮ್ಮ ಖರ್ಚುಗಳಿಗೆ ಕಡಿವಾಣ ಹಾಕುವುದನ್ನು ಪರಿಗಣಿಸಿ. ಪೂರ್ವಜರ ಆಸ್ತಿಯಿಂದ ಲಾಭವಾಗಲಿದೆ. ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿ ಕೆಲಸದಲ್ಲಿ ಯಶಸ್ಸನ್ನು ಗಳಿಸುವಿರಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಈ ರಾಶಿಯ ವ್ಯಾಪಾರಸ್ಥರಿಗೆ ಇಂದು ವಿಶೇಷವಾದ ದಿನ. ನಿಮ್ಮ ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಕೆಲಸದ ಸ್ಥಳದಲ್ಲಿ ತ್ವರಿತ ಬದಲಾವಣೆಗಳನ್ನು ನೋಡುತ್ತೀರಿ. ಭವಿಷ್ಯದಲ್ಲಿ ಇದು ಅನುಕೂಲಕರ ಫಲಗಳನ್ನು ನೀಡಲಿದೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಈ ರಾಶಿಯವರಿಗೆ ಇಂದು ಆರ್ಥಿಕ ಸಮೃದ್ಧಿ ಕಂಡು ಬರಲಿದೆ. ಹಣದ ಮೂಲಗಳು ಹೆಚ್ಚಾಗುವುದರಿಂದ ಸಾಲದಿಂದ ಪರಿಹಾರ ಪಡೆಯುವಿರಿ. ಹೂಡಿಕೆ ಮಾಡಲು ಇಂದು ಉತ್ತಮ ದಿನ. ಆದಾಗ್ಯೂ, ಅನಾವಶ್ಯಕವಾಗಿ ಬೇರೆಯವರ ವಿಚಾರಗಳಲ್ಲಿ ಮೂಗು ತೂರಿಸುವುದನ್ನು ತಪ್ಪಿಸಿ. 

ಇದನ್ನೂ ಓದಿ- Pearls Astrology: ಈ ರಾಶಿಯವರು ಮುತ್ತನ್ನು ಧರಿಸಿದರೆ ಸಮಸ್ಯೆಗಳ ಸರಮಾಲೆಯೇ ಎದುರಾಗುತ್ತೆ!

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಕಷ್ಟಪಟ್ಟು ಕೆಲಸ ಮಾಡುವುದರಿಂದ ಆದಾಯದಲ್ಲಿ ಹೆಚ್ಚಳವನ್ನು ಕಾಣಬಹುದು. ಹೂಡಿಕೆಯಿಂದ ಲಾಭವಾಗಲಿದೆ.. ವ್ಯವಹಾರಸ್ಥರಿಗೆ ಏಳ್ಗೆಯ ದಿನ. ಯಾವುದಾದರೂ ದೊಡ್ಡ ಯೋಜನೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನೀವು ಇಂದು ನಿಮ್ಮ ತಂದೆ ಅಥವಾ ಅನುಭವಿ ವ್ಯಕ್ತಿಯಿಂದ ಸಲಹೆಯನ್ನು ಪಡೆದು ಮುಂದುವರೆಯುವುದರಿಂದ ಶುಭ ಫಲಗಳನ್ನು ನಿರೀಕ್ಷಿಸಬಹುದು. ನಿಮ್ಮ ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀವು ಕಾಪಾಡಿಕೊಳ್ಳುತ್ತೀರಿ.

ತುಲಾ ರಾಶಿಯವರ ಭವಿಷ್ಯ (Libra Horoscope): 
ಈ ದಿನವು ನಿಮಗೆ ತುಂಬಾ ವಿಶೇಷವಾಗಿದೆ. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಕಠಿಣ ಪರಿಶ್ರಮದ ಹೊರತಾಗಿಯೂ ನಿರೀಕ್ಷಿತ ಫಲ ದೊರೆಯದೆ ಇರಬಹುದು. ಆದರೆ ತಾಳ್ಮೆಯಿಂದ ಇರುವುದನ್ನು ರೂಢಿಸಿಕೊಳ್ಳಿ. ವಾಬ್ದಾರಿಯುತ ವ್ಯಕ್ತಿಗಳಿಂದ ಸಲಹೆ ಪಡೆಯಿರಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಹಣಕಾಸಿನ ದೃಷ್ಟಿಯಿಂದ ಇಂದು ತುಂಬಾ ಶುಭಕರವಾಗಿದೆ. ಇಂದು ಉತ್ತಮ ಪ್ರಮಾಣದ ಆದಾಯವನ್ನು ಪಡೆಯುತ್ತೀರಿ ಅದು ನಿಮಗೆ ಮಾನಸಿಕ ಒತ್ತಡದಿಂದ ಪರಿಹಾರವನ್ನು ನೀಡುತ್ತದೆ. ಸಮಾಜದಲ್ಲಿ ನಿಮ್ಮ ಕೀರ್ತಿ, ಪ್ರತಿಷ್ಠೆ ಹೆಚ್ಚಾಗಲಿದೆ. 

ಇದನ್ನೂ ಓದಿ- ಸೂರ್ಯ ರಾಶಿ ಪರಿವರ್ತನೆ: ಲಕ್ಷ್ಮೀ ನಾರಾಯಣ,  ಬುಧಾದಿತ್ಯ, ಶುಕ್ರಾದಿತ್ಯ ರಾಜಯೋಗದಿಂದ ಸೂರ್ಯನಂತೆಯೇ ಪ್ರಜ್ವಲಿಸಲಿದೆ ಈ ರಾಶಿಯವರ ಭವಿಷ್ಯ 

ಧನು ರಾಶಿಯವರ ಭವಿಷ್ಯ (Sagittarius Horoscope):  
ವ್ಯವಹಾರದಲ್ಲಿ ಪಾಲುದಾರಿಕೆಯನ್ನು ಹೊಂದಲು ನೀವು ಬಯಸಿದರೆ ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಿರುತ್ತದೆ.  ನಿಮ್ಮ ಕೆಲಸದ ಸ್ಥಳದಲ್ಲಿ ಬಹಳ ತ್ವರಿತ ಬದಲಾವಣೆಗಳಾಗಬಹುದು. ಹಣದ ಒಳಹರಿವು ಹೆಚ್ಚಾಗಿ ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಆರ್ಥಿಕ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.  ಉತ್ತಮ ಆದಾಯದಿಂದ ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ. ಇಂದು ಹೂಡಿಕೆಗಳಿಂದ ದೂರವಿದ್ದರೆ ಒಳಿತು. ನಿಮ್ಮ ಖರ್ಚುಗಳು ಇದ್ದಕ್ಕಿದ್ದಂತೆ ಹೆಚ್ಚಾಗಬಹುದು, ಆದರೆ ಭಯಪಡುವ ಅಗತ್ಯವಿಲ್ಲ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನೀವು ಇಂದು ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಈ ಸಂದರ್ಭದಲ್ಲಿ ತಾಳ್ಮೆಯಿಂದ ಇರುವುದು ಒಳ್ಳೆಯದು. ನಿಮ್ಮ ಶ್ರಮವು ಸಂಜೆಯ ಹೊತ್ತಿಗೆ ಫಲ ನೀಡುತ್ತದೆ. ಪ್ರಮುಖ ಕೆಲಸಗಳಲ್ಲಿ ನೀವು ಎಲ್ಲರ ಬೆಂಬಲವನ್ನು ಪಡೆಯುತ್ತೀರಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ನೀವು ವೃತ್ತಿ ರಂಗದಲ್ಲಿ  ನೀವು ಬಯಸಿದ ಯಶಸ್ಸನ್ನು ಪಡೆಯದಿರಬಹುದು. ಆದರೆ, ನಿರಾಶೆಗೊಳ್ಳುವ ಅಗತ್ಯವಿಲ್ಲ. ಯಾವುದೇ ದೊಡ್ಡ ಕೆಲಸವನ್ನು ಮಾಡುವ ಮೊದಲು ನಿಮ್ಮ ಮನೆಯಲ್ಲಿ ಹಿರಿಯರ ಆಶೀರ್ವಾದವನ್ನು ತೆಗೆದುಕೊಳ್ಳಬೇಕು. ನಿಮ್ಮ ಖರ್ಚುಗಳ ಹೆಚ್ಚಳವು ನಿಮ್ಮ ಆರ್ಥಿಕ ಸ್ಥಿತಿಯನ್ನು ಹದಗೆಡಿಸಬಹುದು. 

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News