Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಸೌರ ಶಿಶಿರ ಋತು ಪುಷ್ಯ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಮಂಗಳವಾರದ ಈ ದಿನ, ಚಿತ್ರಾ ನಕ್ಷತ್ರದಲ್ಲಿ ಧೃತಿ ಯೋಗ, ಬಾಲವ ಕರಣ. ಇಂದಿನ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಆಸ್ತಿ ವ್ಯವಹಾರದಲ್ಲಿ ಹೂಡಿಕೆ ಮಾಡುವುದರಿಂದ ಶುಭ ಫಲ. ನಿಮ್ಮ ಸಾಮರ್ಥ್ಯವನ್ನು ಪರೀಕ್ಷಿಸುವ ಸವಾಲುಗಳು ಎದುರಾಗಬಹುದು. ಧೃತಿಗೆಡದೆ ಮುಂದುವರೆಯುವುದರಿಂದ ಶುಭ ಫಲ ನಿರೀಕ್ಷಿಸಬಹುದು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳ ಮೇಲೆ ನಿಗಾವಹಿಸಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನಿಮ್ಮ ಸೃಜನಶೀಲತೆಯಿಂದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಸರಿಯಾದ ದಿಕ್ಕಿನಲ್ಲಿ ಮುಂದುವರೆಯುವುದರಿಂದ ಜಯ ನಿಮ್ಮದಾಗಲಿದೆ. ಮನೆಯಲ್ಲಿ ಅಸ್ಥಿರ ವಾತಾವರಣವು ನಿಮ್ಮ ಮನಸ್ಸನ್ನು ಕದಲಿಸಬಹುದು. ಆಡಳಿತಾತ್ಮಕ ವಿಷಯಗಳು ಸುಧಾರಿಸಲಿವೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಮಾನಸಿಕವಾಗಿ ಸದೃಢರಾಗಿರುವಿರಿ. ಕಠಿಣ ಪರಿಸ್ಥಿತಿಗಳಲ್ಲಿ ಬುದ್ದಿವಂತಿಕೆಯಿಂದ ವರ್ತಿಸಿ. ಹಣದ ಹರಿವು ಹೆಚ್ಚಾಗಿ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ಪಡೆಯುವಿರಿ. ಆಸ್ತಿ ಮತ್ತು ವಾಹನ ಖರೀದಿಗೆ ಸಂಬಂಧಿಸಿದಂತೆ ಶುಭ ದಿನ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ನಿಮ್ಮ ಪ್ರೀತಿಪಾತ್ರರೊಂದಿಗೆ ವಿಶ್ವಾಸವನ್ನು ಉಳಿಸಿಕೊಳ್ಳಿ. ಅವರೊಂದಿಗೆ ಇಂದು ಆಹ್ಲಾದಕರ ಸಮಯವನ್ನು ಕಳೆಯುವಿರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇಂದು ನಿಮ್ಮ ಧೈರ್ಯ ಮತ್ತು ಸಾಮರ್ಥ್ಯ ಬಲಗೊಳ್ಳಲಿದ್ದು ಉತ್ತಮ ಸಂವಹಣವು ಪ್ರಗತಿಯ ಹಾದಿಯನ್ನು ತೆರೆಯಲಿದೆ.
ಇದನ್ನೂ ಓದಿ- ಪೂರ್ವಭಾದ್ರ ನಕ್ಷತ್ರದಲ್ಲಿ ಐಷಾರಾಮಿ ಜೀವನಕಾರ: ಈ ರಾಶಿಯವರಿಗೆ ಶುಕ್ರದೆಸೆ, ಮುಟ್ಟಿದ್ದೆಲ್ಲಾ ಬಂಗಾರ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ನಿಮಗೆ ಲಾಭದ ಅವಕಾಶಗಳು ಹೆಚ್ಚಾಗಲಿವೆ. ಸಮಾಜದಲ್ಲಿ ಗೌರವ ಮನ್ನಣೆ ದೊರೆಯಲಿದೆ. ಕುಟುಂಬಸ್ಥರೊಂದಿಗೆ ಪ್ರವಾಸಕ್ಕಾಗಿ ಯೋಚಿಸಬಹುದು. ನಮ್ರತೆ ಮತ್ತು ಪ್ರೀತಿ ನಿಮ್ಮ ದಾರಿಯನ್ನು ಸುಗಮಗೊಳಿಸಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ನಿಮ್ಮ ಯಾವುದೇ ಕೆಲಸ ಕಾರ್ಯಗಳಲ್ಲಿ ನಮ್ರತೆಯನ್ನು ಕಾಪಾಡಿಕೊಳ್ಳಿ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಸ್ವಯಂ ಶಿಸ್ತು ಉದ್ಯೋಗದಲ್ಲಿ ನಿಮ್ಮನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ನಿಮ್ಮ ವ್ಯಕ್ತಿತ್ವ ಮತ್ತು ನಡವಳಿಕೆಯು ಪ್ರಭಾವಶಾಲಿಯಾಗಿರುತ್ತದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ತಾಳ್ಮೆಯಿಂದ ಜಾಗರೂಕರಾಗಿ ಕೆಲಸ ಮಾಡುವುದು ಒಳಿತು. ಉದ್ಯೋಗ ರಂಗದಲ್ಲಿ ಕೆಲವು ಅನಿರೀಕ್ಷಿತ ಸಂದರ್ಭಗಳು ಉಂಟಾಗಬಹುದು. ಸಂಬಂಧಗಳ ಬಗ್ಗೆ ನಿಮ್ಮ ಒಲವು ಹೆಚ್ಚಾಗಲಿದೆ. ಇಂದು ಸಾಲ ಮಾಡುವುದನ್ನು ತಪ್ಪಿಸಿ. ನಿಮ್ಮ ಬಜೆಟ್ ಗೆ ಅನುಗುಣವಾಗಿ ಮುಂದುವರೆಯಿರಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಹಣಕಾಸಿನ ವಿಚಾರದಲ್ಲಿ ಇಂದು ಶಕ್ತಿಶಾಲಿಯಾದ ದಿನ. ವೃತ್ತಿಪರ ಕ್ಷೇತ್ರದಲ್ಲಿ ಹೆಚ್ಚಿನ ಲಾಭವನ್ನು ಗಳಿಸುವಿರಿ. ಆಡಳಿತಾತ್ಮಕ ಕ್ಷೇತ್ರದಲ್ಲಿ ಕೆಯಲ್ಸ ಮಾಡುವವರು ನಿಮ್ಮ ಕಾರ್ಯದಿಂದ ಬೇರೆಯವರನ್ನು ಆಕರ್ಷಿಸುವಿರಿ. ಸ್ಪರ್ಧಾತ್ಮಕ ವಿಚಾರಗಳಲ್ಲಿ ಜಯ ಸಾಧಿಸುವಿರಿ.
ಇದನ್ನೂ ಓದಿ- Weekly Horoscope: ಈ ವಾರ ನಾಲ್ಕು ರಾಶಿಯವರಿಗೆ ಹಠಾತ್ ಧನಲಾಭ, ಇವರು ತುಂಬಾ ಜಾಗರೂಕರಾಗಿರಬೇಕು!
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ಅದೃಷ್ಟವು ನಿಮಗೆ ಅಪೇಕ್ಷಿತ ಫಲಿತಾಂಶವನ್ನು ನೀಡುತ್ತದೆ. ತ್ವರಿತ ಪ್ರಗತಿಯ ಅವಕಾಶಗಳನ್ನು ಪಡೆಯುವಿರಿ. ಹಣಕಾಸಿನ ಸ್ಥಿತಿಯೂ ಬಲವಾಗಿರುತ್ತದೆ. ನಿರ್ವಹಣೆ ಮತ್ತು ಆಡಳಿತಾತ್ಮಕ ಪ್ರಜ್ಞೆ ಮೇಲುಗೈ ಸಾಧಿಸಲಿದೆ. ಕುಟುಂಬದಲ್ಲಿ ಆಹ್ಲಾದಕರ ವಾತಾವರಣ ಇರುತ್ತದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಅದೃಷ್ಟದ ಬೆಂಬಲದಿಂದ ಇಂದು ವೃತ್ತಿ ವ್ಯವಹಾರದಲ್ಲಿ ಹೊಸ ಎತ್ತರಕ್ಕೆ ಏರುವಿರಿ. ವ್ಯಾಪಾರದಲ್ಲಿ ಭಾರೀ ಲಾಭವನ್ನು ನಿರೀಕ್ಷಿಸಬಹುದು. ದೀರ್ಘಾವಧಿಯ ಚಟುವಟಿಕೆಗಳು ವೇಗವನ್ನು ಪಡೆಯಲಿವೆ. ಕೆಲಸದಲ್ಲಿ ನಿಮ್ಮ ಪ್ರಯತ್ನಗಳಿಗೆ ತಕ್ಕ ಫಲವನ್ನು ನಿರೀಕ್ಷಿಸಬಹುದು.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನಿಮ್ಮ ಗುರಿಗಳತ್ತ ಗಮನವಹಿಸಿ ಮುಂದುವರೆಯುವುದರಿಂದ ಶುಭ. ಅಗತ್ಯ ವಿಚಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿ. ನಿಮ್ಮ ಮಾತು ಮತ್ತು ನಡವಳಿಕೆಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದರ ಬಗ್ಗೆ ಅರಿವಿರಲಿ. ಪ್ರಮುಖ ಕೆಲಸಗಳಲ್ಲಿ ತಾಳ್ಮೆಯಿಂದ ಮುಂದುವರೆಯಿರಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಕಠಿಣ ಪರಿಶ್ರಮವು ನಿಮ್ಮ ಕೆಲಸ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಫಲವನ್ನು ನೀಡಲಿದೆ. ವೃತ್ತಿಪರ ಅನುಭವಗಳಿಂದ ಪ್ರಯೋಜನವನ್ನು ಪಡೆಯುವಿರಿ. ಆದಾಯ ಹೆಚ್ಚಿಸಲು ಹೊಸ ಮಾರ್ಗಗಳು ಗೋಚರಿಸಲಿವೆ. ವೈಯಕ್ತಿಕ ವಿಚಾರಗಳಲ್ಲಿ ತಾಳ್ಮೆಯಿಂದ ಇರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.