IND vs PAK: ಪಾಕ್ ವಿರುದ್ಧದ ಪಂದ್ಯಕ್ಕೆ ಈ ಮ್ಯಾಚ್ ವಿನ್ನರ್ ಆಟಗಾರ ಆಡುವುದು ಕಷ್ಟ..!

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಆಡುವುದು ಕಷ್ಟ. ಈ ಆಟಗಾರ ಟೀಂ ಇಂಡಿಯಾಗೆ ಹಲವು ದೊಡ್ಡ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಯಾರು ಆ ಆಟಗಾರ..?

Written by - Puttaraj K Alur | Last Updated : Oct 23, 2022, 07:03 AM IST
  • ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಆಡುವುದು ಡೌಟ್
  • ಕಳಪೆ ಪ್ರದರ್ಶನ ಕಾರಣ ಆಡುವ 11ರಲ್ಲಿ ಸ್ಥಾನ ಸಿಗುವ ಸಾಧ‍್ಯತೆ ಕಡಿಮೆ
  • ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್‍ಗೆ ಎದುರಾದ ಬಿಗ್ ಟ್ರಬಲ್
IND vs PAK: ಪಾಕ್ ವಿರುದ್ಧದ ಪಂದ್ಯಕ್ಕೆ ಈ ಮ್ಯಾಚ್ ವಿನ್ನರ್ ಆಟಗಾರ ಆಡುವುದು ಕಷ್ಟ..!  title=
ರಿಷಭ್ ಪಂತ್ ಆಡುವುದು ಡೌಟ್!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಆಡುವ 11ರ ಮೇಲೆ ಎಲ್ಲರ ಕಣ್ಣಿದೆ. ಭಾರತ ತಂಡದ 11 ಆಟಗಾರರ ಆಯ್ಕೆ ವಿಚಾರದಲ್ಲಿ ಅನೇಕ ಆಘಾತಕಾರಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗಾಯದ ಸಮಸ್ಯೆಯಿಂದ ಕೆಲವು ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬಿದ್ದಿದ್ದು, ಅವರು ಬದಲು ಕೆಲವರಿಗೆ ಅವಕಾಶ ನೀಡಲಾಗಿದೆ.

ಇಂದಿನ ಮಹತ್ವದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ರಿಂದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬಿಗ್ ಮ್ಯಾಚ್ ವಿನ್ನರ್ ಆಟಗಾರನನ್ನು ಆಡಿಸುವುದು ಕಷ್ಟಕರವಾಗಿದೆ. ಈ ಸ್ಟಾರ್ ಆಟಗಾರ ಪ್ಲೇಯಿಂಗ್ 11ರ ಸ್ಥಾನಕ್ಕಾಗಿ ಹೋರಾಡುತ್ತಿದ್ದಾನೆ.

ಇದನ್ನೂ ಓದಿ: IND vs PAK: ರೋಹಿತ್ ಪಡೆಗೆ ಗುಡ್ ನ್ಯೂಸ್: ಹೈವೋಲ್ಟೇಜ್ ಪಂದ್ಯದಿಂದ ಹೊರಬಿದ್ದ ಪಾಕ್ ನ ಈ ಆಟಗಾರ

ಈ ಬಿಗ್ ಮ್ಯಾಚ್ ವಿನ್ನರ್ ಆಡುವುದು ಕಷ್ಟ!

T20 ವಿಶ್ವಕಪ್ ಆರಂಭದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಆಡಿತು. ಈ ಪಂದ್ಯದಿಂದಲೇ ಟೀಂ ಇಂಡಿಯಾ ಆಡುವ 11 ಬಹುತೇಕ ನಿರ್ಧಾರವಾಗಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್‍ಗೆ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಆಗಿ ಆಡಲು ಅವಕಾಶ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ 25ರ ಹರೆಯದ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ರಿಷಬ್ ಪಂತ್ ಪಾಕಿಸ್ತಾನ ವಿರುದ್ಧ ಸ್ಥಾನ ಪಡೆಯುವುದು ಕಷ್ಟವಾಗುತ್ತಿದೆ.

ಒತ್ತಡ ಹೆಚ್ಚಿಸಿದ ಕಳಪೆ ಪ್ರದರ್ಶನ

ಈ ಪಂದ್ಯಕ್ಕೂ ಮುನ್ನ ಪರ್ತ್‌ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನು ಆಡಿತ್ತು. ಈ ಎರಡೂ ಪಂದ್ಯಗಳಲ್ಲಿ ರಿಷಬ್ ಪಂತ್‌ಗೆ ಓಪನರ್ ಆಗಿ ಆಡುವ ಅವಕಾಶ ಸಿಕ್ಕಿತು. ಆದರೆ ಪಂತ್ ಈ ಎರಡೂ ಪಂದ್ಯಗಳಲ್ಲಿ ಸಂಪೂರ್ಣ ವಿಫಲರಾದರು. ಪಶ್ಚಿಮ ಆಸ್ಟ್ರೇಲಿಯಾ ವಿರುದ್ಧದ ಎರಡೂ ಪಂದ್ಯಗಳಲ್ಲಿ ರಿಷಬ್ ಪಂತ್ ಕೇವಲ 9-9 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಇದನ್ನೂ ಓದಿ: IND vs PAK: ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯ: ನೇರಪ್ರಸಾರ ವೀಕ್ಷಿಸಲು ಇಲ್ಲಿದೆ ಸುಲಭ ಉಪಾಯ

ಟಿ-20 ಕ್ರಿಕೆಟ್‌ನಲ್ಲಿ ಇದುವರೆಗಿನ ಪ್ರದರ್ಶನ

ರಿಷಬ್ ಪಂತ್ ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸುತ್ತಿದ್ದಾರೆ. ಆದರೆ ಟಿ-20 ಮಾದರಿಯಲ್ಲಿ ಅವರು ತಮ್ಮ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ. ಪಂತ್ ಇದುವರೆಗೆ ಟೀಂ ಇಂಡಿಯಾ ಪರ 62 ಟಿ-20 ಪಂದ್ಯಗಳನ್ನಾಡಿದ್ದು, 24.02ರ ಸರಾಸರಿಯಲ್ಲಿ 961 ರನ್ ಗಳಿಸಿದ್ದಾರೆ. ಅದೇ ರೀತಿ ಈ ಪಂದ್ಯಗಳಲ್ಲಿ ಪಂತ್ ಕೇವಲ 3 ಬಾರಿ 50 ರನ್ ಗಡಿ ದಾಟಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News