Ketu Gochar: ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ, ರಾಹು-ಕೇತು ಗ್ರಹಗಳನ್ನು ನೆರಳು ಗ್ರಹಗಳು, ಪಾಪ, ಕ್ರೂರ ಗ್ರಹಗಳು ಎಂದು ಕರೆಯಲಾಗುತ್ತದೆ. ಶನಿ ದೇವನ ಬಳಿಕ ಅತಿ ನಿಧಾನವಾಗಿ ಚಲಿಸುವ ಈ ಗ್ರಹಗಳು ಪ್ರತಿ ಒಂದೂವರೆ ವರ್ಷಗಳಿಗೆ ಒಮ್ಮೆ ತಮ್ಮ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸುತ್ತವೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2023ರ ಅಕ್ಟೋಬರ್ 30ರಂದು ಕೇತುವು ಸೂರ್ಯನ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಕೇತು ರಾಶಿ ಪರಿವರ್ತನೆಯ ಪ್ರಭಾವ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. ಆದರೆ, ಈ ಸಮಯದಲ್ಲಿ ಕೆಲವು ರಾಶಿಯವರ ಜೀವನದಲ್ಲಿ ಕೇತು ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- Astro Tips: ಯಾರೇ ಆದರೂ ಈ 3 ರಾಶಿಯ ಹೆಣ್ಣು ಮಕ್ಕಳ ಮುಂದೆ ತಲೆ ಬಾಗಲೇಬೇಕಂತೆ!
ಕೇತು ರಾಶಿ ಪರಿವರ್ತನೆ: ಈ ರಾಶಿಯವರಿಗಿಲ್ಲ ನೆಮ್ಮದಿ
ವೃಷಭ ರಾಶಿ:
ಒಂದೂವರೆ ವರ್ಷದ ಬಳಿಕ ಕೇತು ರಾಶಿ ಪರಿವರ್ತನೆಯು ವೃಷಭ ರಾಶಿಯವರ ಜೀವನದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ನಿಮ್ಮ ಕಹಿ ಮಾತಿನಿಂದ ನಿಮ್ಮ ಆಪ್ತ ಸಂಬಂಧಿಗಳು ನಿಮ್ಮಿಂದ ದೂರವಾಗಬಹುದು. ಅಲ್ಲದೆ, ವೃತ್ತಿ ಬದುಕಿನಲ್ಲೂ ಒತ್ತಡದ ವಾತಾವರಣ ಸೃಷ್ಟಿಯಾಗುವುದರಿಂದ ಹಣಕಾಸಿನ ನಷ್ಟವೂ ಉಂಟಾಗಬಹುದು. ಮಕ್ಕಳ ವಿಷಯದಲ್ಲಿಯೂ ಚಿಂತೆ ನಿಮ್ಮನ್ನು ಕಾಡಬಹುದು.
ಕರ್ಕಾಟಕ ರಾಶಿ:
ಸೂರ್ಯನ ರಾಶಿಚಕ್ರ ಚಿಹ್ನೆಯನ್ನು ಪ್ರವೇಶಿಸಲಿರುವ ಕೇತು ಕರ್ಕಾಟಕ ರಾಶಿಯವರ ಜೀವನದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಲಿದ್ದಾನೆ. ಈ ಸಮಯದಲ್ಲಿ ಕುಟುಂಬದಲ್ಲಿ ಎತ್ತು ಏರಿಗೆ, ಕೋಣ ನೀರಿಗೆ ಎಂಬಂತಿದ್ದರೆ, ವ್ಯಾಪಾರ-ವ್ಯವಹಾರದಲ್ಲಿ ಭಾರೀ ಆರ್ಥಿಕ ನಷ್ಟ ಅನುಭವಿಸಬೇಕಾಗಬಹುದು. ಸಾಲ ಬಾಧೆ ಹೆಚ್ಚಾಗುತ್ತದೆ.
ಇದನ್ನೂ ಓದಿ- ಶನಿ ನೇರ ನಡೆ: 50 ದಿನಗಳ ಬಳಿಕ ಈ ನಾಲ್ಕು ರಾಶಿಯವರ ಜೀವನದಲ್ಲಿ ಸೋಲೆಂಬುದೇ ಇಲ್ಲ
ತುಲಾ ರಾಶಿ:
ಕೇತು ಸಂಚಾರದಿಂದ ತುಲಾ ರಾಶಿಯವರ ಬದುಕಿನಲ್ಲಿ ಕಷ್ಟದ ದಿನಗಳು ಹೆಚ್ಚಾಗಳಿವೆ. ಇದರಿಂದ ಮನಸ್ಸಿನ ಶಾಂತಿಗೆ ಭಂಗ ಬರಲಿದೆ. ಅನಿರೀಕ್ಷಿತ ವೆಚ್ಚಗಳು ಹೆಚ್ಚಾಗುವುದರಿಂದ ಚಿಂತಾಜನಕ ಸ್ಥಿತಿ ನೀರ್ಮಾನವಾಗಬಹುದು. ನಿಮ್ಮ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷಿಸುವುದು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ, ಜಾಗರೂಕರಾಗಿರಿ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.