Shukra Rashi Parivartan 2022: ಜ್ಯೋತಿಷ್ಯದ ಪ್ರಕಾರ, ಇಂದು ಅಕ್ಟೋಬರ್ 18, 2022 ರಂದು, ಶುಕ್ರ ಗ್ರಹವು ತನ್ನದೇ ಆದ ರಾಶಿಚಕ್ರವಾದ ತುಲಾ ರಾಶಿಯನ್ನು ಪ್ರವೇಶಿಸಲಿದೆ. ತುಲಾ ರಾಶಿಯಲ್ಲಿ ಶುಕ್ರನ ಪ್ರವೇಶದೊಂದಿಗೆ ತ್ರಿಕೋನ ರಾಜಯೋಗ ಸೃಷ್ಟಿಯಾಗುತ್ತಿದೆ. ಇದು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳನ್ನು ಬೀರುತ್ತದೆ. ಶುಕ್ರ ಗ್ರಹವು ಸಂಪತ್ತು, ಐಷಾರಾಮಿ, ಭೌತಿಕ ಸಂತೋಷ, ಪ್ರೀತಿ, ಸೌಂದರ್ಯ, ಆಕರ್ಷಣೆಯ ಗ್ರಹವಾಗಿರುವುದರಿಂದ, ಇದು ಜನರ ಜೀವನದ ಈ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತದೆ. ಶುಕ್ರನ ಸಂಕ್ರಮವು 3 ರಾಶಿಯ ಜನರಿಗೆ ತುಂಬಾ ಮಂಗಳಕರವೆಂದು ಸಾಬೀತುಪಡಿಸಬಹುದು. ಆ 3 ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.
ತುಲಾ ರಾಶಿಗೆ ಶುಕ್ರನ ಪ್ರವೇಶ: ಈ 3 ರಾಶಿಯವರಿಗೆ ವೃತ್ತಿ, ಹಣ, ಪ್ರೇಮ ಮತ್ತು ದಾಂಪತ್ಯ ಜೀವನದಲ್ಲಿ ಭಾರೀ ಅದೃಷ್ಟ:-
ಕನ್ಯಾ ರಾಶಿ: ಶುಕ್ರ ಸಂಕ್ರಮಣದಿಂದ ರೂಪುಗೊಂಡ ತ್ರಿಕೋನ ರಾಜಯೋಗವು ಕನ್ಯಾ ರಾಶಿಯವರಿಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಉದ್ಯೋಗಿಗಳ ಸಂಬಳ ಹೆಚ್ಚಾಗಬಹುದು. ವ್ಯಾಪಾರಿಗಳು ವ್ಯಾಪಾರದಲ್ಲಿ ದೊಡ್ಡ ಲಾಭವನ್ನು ಗಳಿಸಬಹುದು. ನೀವು ಮನೆ-ಕಾರು ಅಥವಾ ಸೌಕರ್ಯಗಳಿಗೆ ಸಂಬಂಧಿಸಿದ ಯಾವುದೇ ಬೆಲೆಬಾಳುವ ವಸ್ತುಗಳನ್ನು ಖರೀದಿಸಬಹುದು. ದಾಂಪತ್ಯ ಜೀವನ ಮಧುರವಾಗಿರುತ್ತದೆ. ಪ್ರೀತಿಯ ಜೀವನವೂ ಚೆನ್ನಾಗಿರುತ್ತದೆ. ಪ್ರವಾಸಕ್ಕೆ ಹೋಗಬಹುದು.
ಇದನ್ನೂ ಓದಿ- ಮಂಗಳ-ಕೇತುವಿನಿಂದ ಅತ್ಯಂತ ಅಶುಭ 'ನವಪಂಚಮ ಯೋಗ': ಈ ರಾಶಿಯವರಿಗೆ ಭಾರೀ ಸಂಕಷ್ಟ
ಮಕರ ರಾಶಿ: ಶುಕ್ರನ ರಾಶಿಯ ಬದಲಾವಣೆಯು ಮಕರ ರಾಶಿಯವರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ಉದ್ಯೋಗ-ವ್ಯವಹಾರದಲ್ಲಿ ಪ್ರಗತಿಯ ಬಲವಾದ ಅವಕಾಶಗಳಿವೆ. ಹೊಸ ವ್ಯಾಪಾರ ಆರಂಭಿಸಬಹುದು. ಬಡ್ತಿ ಪಡೆಯಬಹುದು. ಹಣವು ಪ್ರಯೋಜನಕಾರಿಯಾಗಲಿದೆ. ಆದಾಯ ಹೆಚ್ಚಳದಿಂದ ಆರ್ಥಿಕ ಸ್ಥಿತಿಯು ಬಲಗೊಳ್ಳಲಿದೆ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಪ್ರತಿಯೊಂದು ಕೆಲಸದಲ್ಲೂ ಅದೃಷ್ಟದ ಬೆಂಬಲ ಸಿಗುವುದರಿಂದ ಯಶಸ್ಸು ಸಿಗಲಿದೆ.
ಇದನ್ನೂ ಓದಿ- Diwali Cleaning: ಗಂಟೆಗಳ ಕೆಲಸವನ್ನು ನಿಮಿಷಗಳಲ್ಲಿ ಮಾಡಿ ಮುಗಿಸಲು ಈ ಟಿಪ್ಸ್ ಅನುಸರಿಸಿ
ಕುಂಭ ರಾಶಿ: ಶುಕ್ರ ಸಂಕ್ರಮವು ಕುಂಭ ರಾಶಿಯವರಿಗೆ ಅದೃಷ್ಟವನ್ನು ಉಜ್ವಲಗೊಳಿಸಲಿದೆ. ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ. ನೀವು ಕೈಗೊಳ್ಳುವ ವ್ಯಾಪಾರ ಸಂಬಂಧಿತ ಪ್ರಯಾಣದಿಂದ ಶುಭ ಫಲಿತಾಂಶಗಳನ್ನು ಪಡೆಯುತ್ತೀರಿ. ಹೂಡಿಕೆ ಮಾಡಲು ಇದು ಉತ್ತಮ ಸಮಯ. ಅನಿರೀಕ್ಷಿತ ಹಣದ ಲಾಭವಾಗಬಹುದು. ಉದ್ಯೋಗ-ವ್ಯವಹಾರದಲ್ಲಿ ಲಾಭವಿರುತ್ತದೆ. ಸಮಾಜದಲ್ಲಿ ಗೌರವವೂ ಹೆಚ್ಚಾಗುತ್ತದೆ. ವಿದೇಶದಲ್ಲಿ ಕೆಲಸ ಮಾಡುವವರಿಗೆ ವಿಶೇಷ ಲಾಭ ದೊರೆಯಲಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.