WTC Final 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (WTC) ನ ಅಂತಿಮ ಪಂದ್ಯವು ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಗೂ ಮುನ್ನ ಟೀಂ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ.
ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕಳೆದ ದಿನ ನಡೆದ ಐಪಿಎಲ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಜೂನ್ 7 ರಿಂದ 11 ರವರೆಗೆ ಲಂಡನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಗೆ ಕೆಎಲ್ ರಾಹುಲ್ ಫಿಟ್ ಆಗುವುದು ತುಂಬಾ ಕಷ್ಟ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಇನ್ನು ಕೆಲವೇ ಗಂಟೆಗಳಲ್ಲಿ ಈ ರಾಶಿಯವರ ಶುಕ್ರ ದೆಸೆ ಆರಂಭ ! ಅಷ್ಟೈಶ್ವರ್ಯ ಒಲಿಯುವ ಸಮಯ!
ಒಂದು ವರ್ಷದ ನಂತರ ಟೀಂ ಇಂಡಿಯಾ ಪ್ರವೇಶ:
ಲಂಡನ್ ನ ಓವಲ್ ಮೈದಾನದಲ್ಲಿ ಜೂನ್ 7 ರಿಂದ ಜೂನ್ 11 ರವರೆಗೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ (ಡಬ್ಲ್ಯುಟಿಸಿ ಫೈನಲ್) ಪಂದ್ಯವನ್ನು ಕೆಎಲ್ ರಾಹುಲ್ ಬದಲಿಗೆ ಯಾವ ಭಾರತೀಯ ಬ್ಯಾಟ್ಸ್‌ಮನ್ ಆಡುತ್ತಾರೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಫೈನಲ್ ಗೆ ಕೆಎಲ್ ರಾಹುಲ್ ಬದಲಿಯಾಗಿ ಟೀಂ ಇಂಡಿಯಾ ಪ್ಲೇಯಿಂಗ್ XI ನಲ್ಲಿ 5 ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್ ಅಗತ್ಯವಿದೆ.
ಪ್ರಸ್ತುತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ (ಡಬ್ಲ್ಯುಟಿಸಿ ಫೈನಲ್) ಅಂತಿಮ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಿಗೆ ಹನುಮ ವಿಹಾರಿ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆ ಇದೆ.
ರವಿಶಾಸ್ತ್ರಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಮತ್ತು ವಿರಾಟ್ ಕೊಹ್ಲಿ ನಾಯಕರಾಗಿದ್ದವರೆಗೆ, ಹನುಮ ವಿಹಾರಿ ಭಾರತೀಯ ಟೆಸ್ಟ್ ತಂಡದ ಪ್ರಮುಖ ಭಾಗವಾಗಿದ್ದರು. ಆದರೆ ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಸಮಯ ಬಂದಾಗ, ಹನುಮ ವಿಹಾರಿಯನ್ನು ಹೊರಹಾಕಲಾಯಿತು.
ಹನುಮ ವಿಹಾರಿ 16 ಟೆಸ್ಟ್ ಪಂದ್ಯಗಳಲ್ಲಿ 1 ಶತಕ ಮತ್ತು 5 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಒಂದು ವೇಳೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಅಂತಿಮ ಪಂದ್ಯದಲ್ಲಿ ಹನುಮ ವಿಹಾರಿ ಸ್ಥಾನ ಪಡೆದರೆ, ಅವರು ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಎಂಬುದನ್ನು ಸಾಬೀತುಪಡಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಅಂತಿಮ ಪಂದ್ಯದಲ್ಲಿ, ಹನುಮ ವಿಹಾರಿ ಅವರು ಆಸ್ಟ್ರೇಲಿಯಾದ ಮೂವರು ವೇಗದ ಬೌಲರ್‌ಗಳಾದ ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್ ಮತ್ತು ಪ್ಯಾಟ್ ಕಮಿನ್ಸ್ ವಿರುದ್ಧ ಅದ್ಭುತವಾಗಿ ಬ್ಯಾಟಿಂಗ್ ಮಾಡೋದು ಖಚಿತ ಎನ್ನಬಹುದು.
ಹನುಮ ವಿಹಾರಿ ಅವರು 2018-19 ಮತ್ತು 2020-21 ರಲ್ಲಿ ಎರಡು ಬಾರಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದಾರೆ. ಇನ್ನು ಆಸ್ಟ್ರೇಲಿಯಾದ ವೇಗಿಗಳಾದ ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್‌ವುಡ್ ಮತ್ತು ಪ್ಯಾಟ್ ಕಮ್ಮಿನ್ಸ್ ವಿರುದ್ಧ ಹೇಗೆ ರನ್ ಗಳಿಸಬೇಕೆಂದು, ಅವರ ವಿರುದ್ಧ ಯಾವ ರೀತಿ ಪಂದ್ಯವನ್ನಾಡಬೇಕು ಎಂದು ಹನುಮ ವಿಹಾರಿಗೆ ಚೆನ್ನಾಗಿ ತಿಳಿದಿದೆ.
ಜನವರಿ 2021 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡರೂ ಸಹ, ಹನುಮ ವಿಹಾರಿ 161 ಎಸೆತಗಳಲ್ಲಿ ಅಜೇಯ 23 ರನ್ ಗಳಿಸಿ ಪಂದ್ಯವನ್ನು ಡ್ರಾ ಮಾಡಿದರು. ಹನುಮ ವಿಹಾರಿ 16 ಟೆಸ್ಟ್‌ಗಳಲ್ಲಿ 33.56 ಸರಾಸರಿಯಲ್ಲಿ 839 ರನ್ ಗಳಿಸಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಒಂದು ಶತಕ ಮತ್ತು 5 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಷ್ಟೇ ಅಲ್ಲದೆ, ಟೆಸ್ಟ್ ಕ್ರಿಕೆಟ್ ನಲ್ಲಿ ಐದು ವಿಕೆಟ್ ಗಳನ್ನು ಸಹ ಪಡೆದಿದ್ದಾರೆ. ಇವರು ಆಲ್‌ರೌಂಡರ್ ಕೂಡ ಆಗಿದ್ದು, ಅಗತ್ಯವಿದ್ದಾಗ ಟೀಮ್ ಇಂಡಿಯಾಗೆ ಆಫ್ ಸ್ಪಿನ್ ಬೌಲಿಂಗ್ ಮಾಡುತ್ತಾರೆ.
ಇದನ್ನೂ ಓದಿ: Photos: ಕಲಬುರ್ಗಿಯಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ ಗೆ ಹರಿದು ಬಂದ ಜನಸಾಗರ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಅಂತಿಮ ಪಂದ್ಯದಲ್ಲಿ ಹನುಮ ವಿಹಾರಿ ಟೀಂ ಇಂಡಿಯಾಕ್ಕೆ ಉಪಯುಕ್ತ ಆಲ್‌ರೌಂಡರ್ ಪಾತ್ರವನ್ನು ಸಹ ನಿರ್ವಹಿಸಬಲ್ಲರು. ಭಾರತಕ್ಕಾಗಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಜುಲೈ 2022 ರಲ್ಲಿ ಇಂಗ್ಲೆಂಡ್ ವಿರುದ್ಧ ಬರ್ಮಿಂಗ್ಹ್ಯಾಮ್ ನಲ್ಲಿ ಆಡಿದ್ದರು. ಇಂಗ್ಲೆಂಡ್ ವಿರುದ್ಧ ಬರ್ಮಿಂಗ್ಹ್ಯಾಮ್ ನಲ್ಲಿ ಹನುಮ ವಿಹಾರಿ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 20 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 11 ರನ್ ಗಳಿಸಲು ಶಕ್ತರಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.