ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪ್ರಥಮ ಟಿ 20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಕೇವಲ 132 ರನ್ ಗಳಿಗೆ ಕಟ್ಟಿ ಹಾಕಿತು.ಇಂಗ್ಲೆಂಡ್ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೋಸ್ ಬಟ್ಲರ್ ಕೇವಲ 44 ಎಸೆತಗಳಲ್ಲಿ 68 ರನ್ ಗಳಿಸಿದರು.
ಇನ್ನು ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ವರುಣ್ ಚಕ್ರವರ್ತಿ ಮೂರು ಹಾಗೂ ಆರ್ಸ್ಶದೀಪ್, ಹಾರ್ದಿಕ, ಹಾಗೂ ಆಕ್ಸರ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
Abhishek Sharma weaving magic and how! 🪄
Follow The Match ▶️ https://t.co/4jwTIC5zzs #TeamIndia | #INDvENG | @IamAbhiSharma4 | @IDFCFIRSTBank pic.twitter.com/5xhtG6IN1F
— BCCI (@BCCI) January 22, 2025
ಇದೇ ವೇಳೆ ಇಂಗ್ಲೆಂಡ್ ತಂಡವು ನೀಡಿದ 133 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ, ತಂಡದ ಪರವಾಗಿ ಅಭಿಷೇಕ್ ಶರ್ಮಾ ಕೇವಲ 34 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎಂಟು ಸಿಕ್ಸರ್ ಗಳ ನೆರವಿನಿಂದ ಭರ್ಜರಿ 79 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.ಇವರಿಗೆ ಸಾಥ್ ನೀಡಿದ ಸಂಜು ಸ್ಯಾಮ್ಸನ್ 26 ರನ್ ಗಳಿಸಿದರು.
ಇದರಿಂದಾಗಿ ಅಂತಿಮವಾಗಿ ಟೀಮ್ ಇಂಡಿಯಾ ಕೇವಲ 12.5 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 133 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.