India vs SL 1st Test: ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆರ್.ಅಶ್ವಿನ್

ಆಲ್ ರೌಂಡರ್ ರವೀಂದ್ರ ಆಶ್ವಿನ್ ಅವರು ಕಪಿಲ್ ದೇವ್ ಅವರ 434 ಟೆಸ್ಟ್ ವಿಕೆಟ್ ದಾಖಲೆಯನ್ನು ಹಿಂದಿಕ್ಕುವ ಮೂಲಕ ಈಗ ಭಾರತದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Last Updated : Mar 6, 2022, 04:19 PM IST
  • ಆಲ್ ರೌಂಡರ್ ರವೀಂದ್ರ ಆಶ್ವಿನ್ ಅವರು ಕಪಿಲ್ ದೇವ್ ಅವರ 434 ಟೆಸ್ಟ್ ವಿಕೆಟ್ ದಾಖಲೆಯನ್ನು ಹಿಂದಿಕ್ಕುವ ಮೂಲಕ ಈಗ ಭಾರತದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
India vs SL 1st Test: ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆರ್.ಅಶ್ವಿನ್  title=

ನವದೆಹಲಿ: ಆಲ್ ರೌಂಡರ್ ರವೀಂದ್ರ ಆಶ್ವಿನ್ ಅವರು ಕಪಿಲ್ ದೇವ್ ಅವರ 434 ಟೆಸ್ಟ್ ವಿಕೆಟ್ ದಾಖಲೆಯನ್ನು ಹಿಂದಿಕ್ಕುವ ಮೂಲಕ ಈಗ ಭಾರತದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ನ 3 ನೇ ದಿನದಂದು ಟೀ ವಿರಾಮದ ನಂತರ ಸ್ಪಿನ್ನರ್ ಚರಿತ್ ಅಸಲಂಕಾ ಅವರ ವಿಕೆಟ್ ಪಡೆದ ನಂತರ ಅಶ್ವಿನ್ (Ravichandran Ashwin) ಈ ಸಾಧನೆ ಮಾಡಿದರು. ಸಮಕಾಲೀನ ಶ್ರೇಷ್ಠರಲ್ಲಿ ಒಬ್ಬರಾದ ಅಶ್ವಿನ್ ಅವರು ಕಪಿಲ್ ಅವರ 131 ಪಂದ್ಯಗಳಿಗೆ ಹೋಲಿಸಿದರೆ ತಮ್ಮ 85 ನೇ ಟೆಸ್ಟ್ ಪಂದ್ಯದಲ್ಲಿ ಸಾಧನೆ ಮಾಡಿದರು.

ಇದನ್ನೂ ಓದಿ: ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್...ಸ್ಪೆಷಲ್ ರೋಲ್ ನಲ್ಲಿ ಮಿಂಚಲಿದ್ದಾರೆ ಬಿಗ್ ಬಾಸ್ ಚೆಲುವೆ

ಅಶ್ವಿನ್ ಈಗ 435 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ ಆ ಮೂಲಕ ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ ನಂತರದ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ನ ರಿಚರ್ಡ್ ಹ್ಯಾಡ್ಲಿ (431) ಮತ್ತು ಶ್ರೀಲಂಕಾದ ರಂಗನಾ ಹೆರಾತ್ (432) ಅವರನ್ನು ಹಿಂದಿಕ್ಕಿದ ನಂತರ ಅಶ್ವಿನ್ ಸಾರ್ವಕಾಲಿಕ 9 ನೇ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಇದನ್ನೂ ಓದಿ: ಗಾಯನ ಗಂಗೆ ಗಂಗೂಬಾಯಿ ಹಾನಗಲ್ ನೆನಪಿನಲ್ಲಿ....

ಭಾರತ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್‌ ಪಡೆದ ಆಟಗಾರರು.

619 - ಅನಿಲ್ ಕುಂಬ್ಳೆ
435 - ಆರ್ ಅಶ್ವಿನ್ *
434 - ಕಪಿಲ್ ದೇವ್ (Kapil Dev)
417 - ಹರ್ಭಜನ್
311 - ಜಹೀರ್ ಖಾನ್/ಇಶಾಂತ್ ಶರ್ಮಾ

ಅಲ್ಲದೆ, ನವೆಂಬರ್ 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದೆಹಲಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅಶ್ವಿನ್, ಟೆಸ್ಟ್ ಕ್ರಿಕೆಟ್‌ನಲ್ಲಿ 400 ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ ನಾಲ್ಕನೇ ಬೌಲರ್ ಆಗಿದ್ದಾರೆ.

ಇದನ್ನೂ ಓದಿ: ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್...ಸ್ಪೆಷಲ್ ರೋಲ್ ನಲ್ಲಿ ಮಿಂಚಲಿದ್ದಾರೆ ಬಿಗ್ ಬಾಸ್ ಚೆಲುವೆ

ಸಕ್ರಿಯ ಟೆಸ್ಟ್ ಕ್ರಿಕೆಟಿಗರಲ್ಲಿ, ಇಂಗ್ಲೆಂಡ್ ವೇಗದ ಬೌಲಿಂಗ್ ಜೋಡಿ ಸ್ಟುವರ್ಟ್ ಬ್ರಾಡ್ (537) ಮತ್ತು ಜೇಮ್ಸ್ ಆಂಡರ್ಸನ್ (640) ನಂತರ ಅಶ್ವಿನ್ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.ಭಾರತದ ಸ್ಪಿನ್ನರ್ ಇದುವರೆಗೆ 85 ಟೆಸ್ಟ್‌ಗಳಲ್ಲಿ 52.6 ಸ್ಟ್ರೈಕ್ ರೇಟ್ ಮತ್ತು 24.33 ಸರಾಸರಿಯಲ್ಲಿ 435 ವಿಕೆಟ್‌ಗಳನ್ನು ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News